ರೈತ ಪ್ರತಿಭಟನೆ ನಡುವೆ ರೈತರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಡಿಸೆಂಬರ್ 25 ರಂದು ಪ್ರಧಾನಿ ನರೇಂದ್ರ ಮೋದಿ ಪಿಎಂ ಕಿಸಾನ್ ಯೋಜನೆಯ ಮುಂದಿನ ಕಂತು ಬಿಡುಗಡೆ ಮಾಡಲಿದ್ದಾರೆ.
ನವದೆಹಲಿ(ಡಿ.23): ಒಂದೆಡೆ ರೈತರ ಪ್ರತಿಭಟನೆ ಕಾವು ಹೆಚ್ಚಾಗುತ್ತಿದೆ. ಇತ್ತ ಕೇಂದ್ರ ಸರ್ಕಾರ ರೈತರ ಜೊತೆಗೆ ಮಾತುಕತೆ ಪ್ರಯತ್ನಗಳನ್ನು ನಡೆಸುತ್ತಿದೆ. ಇದರ ನಡುವೆ ಪ್ರಧಾನಿ ನರೇಂದ್ರ ಮೋದಿ ದೇಶದ ಕೋಟ್ಯಾಂತರ ರೈತರ ಬ್ಯಾಂಕ್ ಖಾತೆಗೆ ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಹಣ ಜಮೆ ಮಾಡಲಿದ್ದಾರೆ.
1 ಲಕ್ಷ ಕೋಟಿ ಕೃಷಿ ಸೌಕರ್ಯ ಉದ್ಘಾಟಿಸಿದ ಪಿಎಂ: ಕಿಸಾನ್ ಯೋಜನೆಯ 6ನೇ ಕಂತು ಬಿಡುಗಡೆ!..
ಮೋದಿ ಈಗಾಗಲೇ ಹೇಳಿದಂತೆ ಡಿಸೆಂಬರ್ 25 ರಂದು ಅಂದರೆ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದಂದು ಪಿಎಂ ಕಿಸಾನ್ ಸಮ್ಮಾನ್ ನಿಧಿ ಮುಂದಿನ ಕಂತು ಬಿಡುಗಡೆ ಮಾಡಲಿದ್ದಾರೆ. 25ರ ಮಧ್ಯಾಹ್ನ 12 ಗಂಟೆಗೆ ವಿಡಿಯೋ ಕಾನ್ಫೆರನ್ಸ್ ಮೂಲಕ ಮೋದಿ, ರೈತ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲಿದ್ದಾರೆ.
ವರ್ಚುವಲ್ ಕಾರ್ಯಕ್ರಮದಲ್ಲಿ ಮೋದಿ 18,000 ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಲಿದ್ದಾರೆ. ಇದರಿಂದ 9 ಕೋಟಿ ರೈತ ಕುಟುಂಬಗಳಿಗೆ ನೆರವಾಗಲಿದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಹಣವನ್ನು ರೈತರ ಖಾತೆಗೆ ಜಮೆ ಮಾಡಿದ ಬಳಿಕ ಮೋದಿ, 6 ರಾಜ್ಯಗಳ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಸೇರಿದಂತೆ ರೈತರಿಗಾಗಿ ಕೇಂದ್ರ ಸರ್ಕಾರದ ಯೋಜನೆ ಫಲಾನುಭವಿಗಳು ತಮ್ಮ ಅನುಭವ ಹಂಚಿಕೊಳ್ಳಲಿದ್ದಾರೆ.
PM ಮನ್‌ಧನ್ ಯೋಜನೆ ಮೂಲಕ ರೈತರು ನಿವೃತ್ತಿ ವೇತನ ಪಡೆಯುವುದು ಹೇಗೆ?.
ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಮೂಲಕ ರೈತರಿಗೆ ಪ್ರತಿ ವರ್ಷ ಕೇಂದ್ರ ಸರ್ಕಾರ 6,000 ರೂಪಾಯಿ ನೀಡುತ್ತಿದೆ. ಇದನ್ನು ಹಂತ ಹಂತವಾಗಿ ನೀಡಲಾಗುತ್ತಿದೆ. ಪ್ರತಿ ಕಂತಿನಲ್ಲಿ 2,000 ರೂಪಾಯಿಂತೆ ನೀಡಲಾಗುತ್ತಿದೆ.