
ವಾರಾಣಸಿ(ಫೆ.16): ಪ್ರಧಾನಿ ಮೋದಿ ಇಂದು ವಾರಾಣಸಿಯಲ್ಲಿಂದು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ 63 ಅಡಿ ಎತ್ತರದ ಪುತ್ಥಳಿಯನ್ನು ಅನಾವರಣಗೊಳಿಸಿದರು.
ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಪಂಚ ಲೋಹದಿಂದ ನಿರ್ಮಿಸಿರುವ ಜನಸಂಘದ ನಾಯಕನ ಈ ಪುತ್ಥಳಿಯನ್ನು ದೇಶಕ್ಕೆ ಸಮರ್ಪಿಸಲು ಹೆಮ್ಮೆಯಾಗುತ್ತಿದೆ ಎಂದು ಹೇಳಿದರು.
ಇಡೀ ದೇಶದಲ್ಲಿಯೇ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಎತ್ತರದ ಪ್ರತಿಮೆ ಎಂಬ ಹೆಗ್ಗಳಿಕೆಗೆ ಇದು ಪಾತ್ರವಾಗಿದ್ದು, 200ಕ್ಕೂ ಹೆಚ್ಚು ಶಿಲ್ಪಿಗಳು ಒಂದು ವರ್ಷಗಳ ಕಾಲ ಶ್ರಮವಹಿಸಿ ಈ ಪ್ರತಿಮೆಯನ್ನು ಪೂರ್ಣಗೊಳಿಸಿದ್ದಾರೆ.
ವಾರಣಾಸಿಯಲ್ಲಿ ಕನ್ನಡದಲ್ಲಿ ಮೋದಿ ಮಾತು: ಸಿದ್ಧಾಂತ ಶಿಖಾಮಣಿ ಕೃತಿ ಬಿಡುಗಡೆ!
ಇದೇ ವೇಳೆ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಸ್ಮಾರಕ ಕೇಂದ್ರವನ್ನೂ ಉದ್ಘಾಟಿಸಿದ ಪ್ರಧಾನಿ ಮೋದಿ, ಈ ಸ್ಮಾರಕ ದೀನ್ ದಯಾಳ್ ಉಪಾಧ್ಯಾಯ ಅವರ ಬದುಕು ಮತ್ತು ಜೀವನದ ಬಗ್ಗೆ ಬೆಳಕು ಚೆಲ್ಲಲಿ ಎಂದು ಹಾರೈಸಿದರು.
ಇದಕ್ಕೂ ಮೊದಲು ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ 430 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಸರ್ಕಾರಿ ಆಸ್ಪತ್ರೆ ಹಾಗೂ 74 ಹಾಸಿಗೆ ಸಾಮರ್ಥ್ಯದ ಮಾನಸಿಕ ಆರೋಗ್ಯ ಆಸ್ಪತ್ರೆ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಉದ್ಘಾಟಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ