JNU ಕ್ಯಾಂಪಸ್‌ನಲ್ಲಿ ವಿವೇಕಾನಂದರ ಪ್ರತಿಮೆ ಅನಾವರಣ ಮಾಡಿದ ಮೋದಿ!

Published : Nov 12, 2020, 07:40 PM IST
JNU ಕ್ಯಾಂಪಸ್‌ನಲ್ಲಿ ವಿವೇಕಾನಂದರ ಪ್ರತಿಮೆ ಅನಾವರಣ ಮಾಡಿದ ಮೋದಿ!

ಸಾರಾಂಶ

ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ JNU ವಿಶ್ವವಿದ್ಯಾನಿಲಯ ಕ್ಯಾಂಪಸ್‌ನಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆ ಅನಾವರಣ ಕಾರ್ಯಕ್ರಮ ಯಶಸ್ವಿಯಾಗಿಸಿದೆ. ಪ್ರಧಾನಿ ಮೋದಿ ವಿಡಿಯೋ ಕಾನ್ಫೆರನ್ಸ್ ಮೂಲಕ ಪ್ರತಿಮೆ ಅನಾವರಣ ಮಾಡಿದ್ದಾರೆ.

ನವದೆಹಲಿ(ನ.12):  ಜವಾಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆ ಅನಾವರಣಗೊಂಡಿದೆ. ಪರ ವಿರೋಧದ ನಡುವೆಯೂ  ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫೆರೆನ್ಸ್ ಮೂಲಕ ವಿವೇಕಾನಂದ ಪ್ರತಿಮೆ ಅನಾವರಣ ಮಾಡಲಾಗಿದೆ. 

JEE-NEET ವಿಚಾರದಲ್ಲೂ ರಾಜಕೀಯ ಮಾಡುತ್ತಿರುವವರು ಯಾರು? ಮೋದಿಗೆ ಬಂದ ಪತ್ರ.

ವರ್ಚುವಲ್ ಕಾರ್ಯಕ್ರಮದ ಮೂಲಕ  ಮೋದಿ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯ ಕ್ಯಾಂಪಸ್‌ನಲ್ಲಿ ವಿವೇಕಾನಂದರ ಪ್ರತಿಮೆ ಅನಾವರಣ ಮಾಡಲಾಗಿದೆ.  ಧೈರ್ಯ ಹಾಗೂ ಸಹಾನುಭೂತಿಯನ್ನು ತುಂಬವು ಪ್ರತಿಮೆಯಾಗಿದೆ ಎಂದು ಮೋದಿ ಹೇಳಿದರು.

 

ಹಿಂಸೆಯ ಆರೋಪ ಮಾಡಿದವರಿಂದಲೇ ಜೆಎನ್‌ಯು ಗಲಭೆ!

ವಸಾಹತುಶಾಹಿ ಸಮಯದಲ್ಲಿ ನಾವು ತುಳಿತಕ್ಕೊಳಗಾದ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದರು ಮಿಚಿಗನ್ ವಿಶ್ವವಿದ್ಯಾನಿಲಯಲ್ಲಿ ಮಹತ್ವದ ಭಾಷಣ ಮಾಡಿದರು. ಈ ವೇಳೆ ಈ ಶತಮಾನ ನಿಮ್ಮದಾಗಿದ್ದರೆ, ಮುಂದಿನ ಶತಮಾನ ಭಾರತಕ್ಕೆ ಸೇರಿದೆ ಎಂದಿದ್ದರು. ಇದೀಗ ವಿವೇಕಾನಂದರ ದೃಷ್ಟಿಕೋನವನ್ನು ಸಾಕರಗೊಳಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಮೋದಿ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ವಿರೋಧಗಳು ವ್ಯಕ್ತವಾಗಿತ್ತು. ಗೋ ಬ್ಯಾಕ್ ಮೋದಿ ಎಂಬು ಘೋಷಣೆಗಳು ಮೊಳಗಿತ್ತು. ಆದರೆ ಪರ ವಿರೋಧದ ನಡುವೆ ಸ್ವಾಮಿ ವಿವೇಕಾನಂದರ ಪ್ರತಿಮೆ JNU ಕ್ಯಾಂಪಸ್‌ನಲ್ಲಿ ಅನಾವರಣಗೊಂಡಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
ಮದುವೆ ನಂತರ ಕಾರಿನ ಸ್ಟೇರಿಂಗ್ ಹಿಡಿದ ವಧು; ದೇವ್ರೇ ಕಾಪಾಡಪ್ಪಾ ಎಂದು ಕೈಮುಗಿದು ಕುಳಿತುಕೊಂಡ ವರ!