ಲೋಕಲ್ ಫಾರ್ ದೀಪಾವಳಿ; ಹಬ್ಬಕ್ಕೂ ಮುನ್ನ ದೇಶದ ಜನತೆಯಲ್ಲಿ ಮೋದಿ ವಿಶೇಷ ಮನವಿ!

By Suvarna NewsFirst Published Nov 9, 2020, 6:40 PM IST
Highlights

ಈ ಬಾರಿಯ ದೀಪಾವಳಿ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಜನತೆಯಲ್ಲಿ ವಿಶೇಷ ಮನವಿ ಮಾಡಿದ್ದಾರೆ. ವಾರಣಾಸಿಯಲ್ಲಿ ವಿವಿಧ ಯೋಜನೆಗಳಿಗೆ ಶಂಕು ಸ್ಥಾಪನೆ ಮಾಡಿದ ಬಳಿಕ ಮೋದಿ ಜನತೆಗೆ ಮನವಿ ಮಾಡಿದ್ದಾರೆ.

ನವದೆಹಲಿ(ನ.09):  ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಸ್ಥಳೀಯ ಉತ್ಪನ್ನಗಳ ಬಳಕೆ ಹಾಗೂ ಅವುಗಳ ಪ್ರಚಾರಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ವೋಕಲ್ ಫಾರ್ ಲೋಕಲ್ ಅನ್ನೋ ಪರಿಕಲ್ಪನೆ ತಂದಿದ್ದಾರೆ. ಇದೀಗ ದೀಪಾವಳಿ ಹಬ್ಬಕ್ಕೆ ಜನತೆಯಲ್ಲಿ ಲೋಕಲ್ ಫಾರ್ ದೀಪಾವಳಿ ಅನ್ನೋ ಆಂದೋಲನಕ್ಕೆ ಕೈಜೋಡಿಸಲು ಮನವಿ ಮಾಡಿದ್ದಾರೆ.

JNU ಕ್ಯಾಂಪಸ್‌ನಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆ ಅನಾವರಣಗೊಳಿಸಲಿರುವ ಮೋದಿ

ಮೋದಿ ಸ್ವಕ್ಷೇತ್ರ ವಾರಣಾಸಿಯಲ್ಲಿ 614 ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಕಾಮಾಗಾರಿ ಯೋಜನೆಗಳಿಗೆ ಚಾಲನೆ ನೀಡಿದ ಬಳಿಕ ವಿಡಿಯೋ ಕಾನ್ಫೆರನ್ಸ್ ಮೂಲಕ ಜನತೆಯನ್ನುದ್ದೇಶಿ ಮಾತನಾಡಿದ್ದಾರೆ. ಈ ವೇಳೆ ಈ ಬಾರಿಯ ದೀಪಾವಳಿ ಹಬ್ಬಕ್ಕೆ ಸ್ಥಳೀಯ ವಸ್ತುಗಳನ್ನೇ ಬಳಸಿ. ಸ್ಥಳೀಯ ಕುಶಲಕರ್ಮಿಗಳ ಉತ್ಪನ್ನಗಳು ಯಾವುದೇ ಅಂತಾರಾಷ್ಟ್ರೀಯ ಉತ್ಪನ್ನಗಳಿಗಿಂತ ಕಡಿಮೆ ಇಲ್ಲ. ಸ್ಥಳೀಯ ಉತ್ಪನ್ನಗಳ  ಬಳಕೆ ಹಾಗೂ ಪ್ರಚಾರಕ್ಕೆ ಕೈ ಜೋಡಿಸಿ ಎಂದು ಮನವಿ ಮಾಡಿದ್ದಾರೆ.

 

मेरा आग्रह है कि वोकल फॉर लोकल के साथ ही को भी खूब प्रमोट करें।

इससे स्थानीय पहचान तो मजबूत होगी ही, जो लोग ये सामान बनाते हैं, उनकी दिवाली भी रोशन हो जाएगी।

मेरे देश के लोग जो पसीना बहा रहे हैं, कुछ न कुछ नया कर रहे हैं, उनका हाथ थामना हम सबका दायित्व है। pic.twitter.com/tihdvSgNnN

— Narendra Modi (@narendramodi)

ನೋಟ್‌ ಬ್ಯಾನ್‌ನಿಂದ ಪಾರದರ್ಶಕತೆ ಹೆಚ್ಚಿದೆ, ಪ್ರಗತಿ ಆಗಿದೆ

ಸ್ಥಳೀಯ ಕರಕುಶಲ ಕರ್ಮಿಗಳ ಉತ್ಪನ್ನಗಳನ್ನು ಖರೀದಿಸುವ ಮೂಲಕ ಅವರ ಬಾಳಿಗೆ ದೀಪಾವಳಿ ಹಬ್ಬದ ಬೆಳಕನ್ನು ನೀಡಿ. ಅವರ ಉತ್ಪನ್ನಗಳಿಗೆ ಪ್ರಚಾರ ನೀಡಲು ಮುಂದಾಗಿ. ಈ ಮೂಲಕ ಹೆಚ್ಚು ಜನರಿಗೆ ಸ್ಥಳೀಯ ಉತ್ಪನ್ನಗಳನ್ನು ತಲುಪಿಸುವ ಕೆಲಸ ಮಾಡಿ. ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚಾರ ನೀಡಲು ಹಾಗೂ ಹೆಚ್ಚು ಹೆಚ್ಚು ಜನರು ಸ್ಥಳೀಯ ವಸ್ತುಗಳ ಖರೀದಿಸುವ ಮೂಲಕ ದೇಶದ ಆರ್ಥಕತೆಗೂ ಕೈಜೋಡಿಸಿ ಎಂದು ಮೋದಿ ಹೇಳಿದ್ದಾರೆ.

ಕಳೆದ 6 ವರ್ಷಗಳಿಂದ ವಾರಣಾಸಿಯಲ್ಲಿ ಅಭಿವೃದ್ಧಿ ಕೆಲಸಗಳು ತ್ವರಿತಗತಿಯಲ್ಲಿ ನಡೆಯುತ್ತಿದೆ. ಕಾಶಿ ವಿಶ್ವನಾಥನ ಆಶೀರ್ವಾದದಿಂದ ಇನ್ನಷ್ಟು ಉತ್ತಮ ಕೆಲಸ ಮಾಡಲು ಸಾಧ್ಯವಾಗಿದೆ. ಇಂದು(ನ.09) 220 ಕೋಟಿ ಮೌಲ್ಯದ 16 ಯೋಜನೆಗಳನ್ನು ಮೋದಿ ಉದ್ಘಾಟಿಸಿದ್ದಾರೆ. ಇನ್ನು 440 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಅಡಿಪಾಯ ಹಾಕಲಾಗಿದೆ. 

click me!