
ನವದೆಹಲಿ, (ಮೇ.11): ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ನಡುವೆಯೂ ಆರ್ಥಿಕತೆಯನ್ನು ಮೇಲೆತ್ತಲು ಮೋದಿ ಸರ್ಕಾರ ಇನ್ನಿಲ್ಲದ ಕಸರತ್ತು ನಡೆಸಿದೆ.
ಸೋಂಕು ಹೆಚ್ಚಿತ್ತಿರುವ ಹಿನ್ನೆಲೆಯಲ್ಲಿ ಮೇ.17ರ ಬಳಿಕ 4ನೇ ಹಂತದ ಲಾಕ್‌ಡೌನ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಇಂದು (ಸೋಮವಾರ) ದೇಶದ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳ ಸಭೆ ನಡೆಸಿ ತೀರ್ಮಾನ ಕೈಗೊಳ್ಳುತ್ತಾರೆ ಎನ್ನುವ ಕುತೂಹಲ ಮೂಡಿಸಿತ್ತು.
ಆದ್ರೆ, ಮುಖ್ಯಮಂತ್ರಿಗಳ ಜತೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಕೊವಿಡ್-19 ಕಂಟೈನ್ ಮೆಂಟ್ ತಂತ್ರ ಬಲಪಡಿಸುವ ಬಗ್ಗೆ ಹಾಗೂ ಆರ್ಥಿಕ ಚಟುವಚಿಕೆ ಆರಂಭಿಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಚರ್ಚೆ ಮಾಡಿದರು.
ರೇಪ್ ಕತೆ ಹಿಂದೆ ಹುಡ್ಗಿಯ ಕರಾಮತ್ತು, ಒಗ್ಗಟ್ಟಿಗಾಗಿ ಕಾಂಗ್ರೆಸ್ ಕಸರತ್ತು; ಮೇ.11ರ ಟಾಪ್ 10 ಸುದ್ದಿ!
ದೇಶಾದ್ಯಂತ 54 ದಿನಗಳ ಲಾಕ್ ಡೌನ್ ಮೇ 17ಕ್ಕೆ ಅಂತ್ಯವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು (ಸೋಮವಾರ) 5ನೇ ಬಾರಿ ಮುಖ್ಯಮಂತ್ರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದ ಪ್ರಧಾನಿ, ಪ್ರತಿ ರಾಜ್ಯದ ಸಿಎಂ ಜತೆ 20 ನಿಮಿಷಗಳ ಕಾಲ ಮಾತುಕತೆ ನಡೆಸಿದರು.
ಮೇ 4 ರ ನಂತರ ದೇಶದಲ್ಲಿ ದೊಡ್ಡ ಪ್ರಮಾಣದ ವಲಸೆ ಕಾರ್ಮಿಕರು ನಗರಗಳಿಂದ ಗ್ರಾಮೀಣ ಪ್ರದೇಶಕ್ಕೆ ಹೋಗಿದ್ದು, ವಲಸೆ ಕಾರ್ಮಿಕರಿಂದ ಉಂಟಾದ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.
ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಭಾರತ ತೆಗೆದುಕೊಂಡಿರುವ ಕ್ರಮಗಳಿಂದ ಯಾವುದೇ ಕಾರಣಕ್ಕೂ ಹಿಂದೆ ಸರಿಯಬಾರದು ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದ್ದಾರೆ.
ಕೊರೋನಾ ವಿರುದ್ಧದ ಹೋರಾಟದಲ್ಲಿ ಭಾರತ ಯಶಸ್ಸು ಕಂಡಿದ್ದು, ಸಾಮಾಜಿಕ ಅಂತರದಂತಹ ಕ್ರಮಗಳನ್ನು ತೆಗೆದುಕೊಳ್ಳದಿದ್ದಲ್ಲಿ ಮತ್ತಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಅಷ್ಟೇ ಅಲ್ಲದೇ ಲಾಕ್‌ಡೌನ್ ಬಳಿಕ ದೇಶದಲ್ಲಿ ಆರ್ಥಿಕ ಚಟುವಟಿಕೆಯನ್ನು ಹೇಗೆ ಮರು ಆರಂಭಿಸಬೇಕು ಎಂಬುದು ಇಂದಿನ ಸಭೆಯ ಪ್ರಮುಖ ಕಾರ್ಯಸೂಚಿಯಾಗಿತ್ತು ಎಂದು ತಿಳಿದುಬಂದಿದೆ.
ಇನ್ನು ಸಭೆಯಲ್ಲಿ ಲಾಕ್‌ಡೌನ್ ವಿಸ್ತರಿಸಬೇಕೋ ಅಥವಾ ಬೇಡವೋ ಎನ್ನುವ ಬಗ್ಗೆ ಅಷ್ಟೊಂದು ಮಾತುಕತೆಗಳು ಆಗಿಲ್ಲ. ಮುಂದಿನ ವಾತಾವರಣ ನೋಡಿಕೊಂಡು ಕೇಂದ್ರ ಸರ್ಕಾರ ನಿರ್ಧಾರ ಪ್ರಕಟಿಸುವ ಎಲ್ಲಾ ಸಾಧ್ಯತೆಗಳಿವೆ.
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾಗವಹಿಸಿದ್ದರು.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ