
ನವದೆಹಲಿ: ಕಾರ್ಗಿಲ್ ವಿಜಯ ದಿನದ ನಿಮಿತ್ತ ಕಾರ್ಗಿಲ್‌ಗೆ ಭೇಟಿ ನೀಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು, ವಿಶ್ವದ ಅತಿ ಎತ್ತರದ ಪ್ರದೇಶದಲ್ಲಿನ ಸುರಂಗ ನಿರ್ಮಾಣಕ್ಕೆ ಚಾಲನೆ ನೀಡಲಿದ್ದಾರೆ.ಶಿಂಕುನ್ ಲಾ ಹೆಸರಿನ ಈ ಸುರಂಗ ಯೋಜನೆಯ ಮೊದಲ ಸ್ಫೋಟವನ್ನು ವರ್ಚುವಲ್ ಆಗಿ ನಡೆಸಿ ಯೋಜನೆಗೆ ಚಾಲನೆ ನೀಡಲಿದ್ದರೆ.
4.1 ಕಿ.ಮೀ. ಉದ್ದದ ಈ ಜೋಡಿ-ಟ್ಯೂಬ್ ಸುರಂಗವನ್ನು ಲೇಹ್‌ಗೆ ಸರ್ವಋತು ಸಂಪರ್ಕ ಒದಗಿಸಲು ನಿಮು-ಪಡುಮ್-ದರ್ಚಾ ರಸ್ತೆಯಲ್ಲಿ 15,800 ಅಡಿ ಎತ್ತರದಲ್ಲಿ ನಿರ್ಮಿಸಲಾಗುತ್ತದೆ. ಒಮ್ಮೆ ಪೂರ್ಣಗೊಂಡರೆ, ಇದು ವಿಶ್ವದ ಅತಿ ಎತ್ತರದ ಸುರಂಗವಾಗಲಿದೆ.
Vijay Diwas : ಹುತಾತ್ಮ ಸೈನಿಕರ ಕುಟುಂಬಕ್ಕೆ ಸರ್ವ ನೆರವು: ಸಿಎಂ
ಶಿಂಕುನ್ ಲಾ ಸುರಂಗವು ಭಾರತದ ಸಶಸ್ತ್ರ ಪಡೆಗಳ ಸಂಚಾರ ಮತ್ತು ಸಲಕರಣೆಗಳ ತ್ವರಿತ ಮತ್ತು ಪರಿಣಾಮಕಾರಿ ಸಾಗಣೆಯನ್ನು ಖಚಿತಪಡಿಸುವುದು ಮಾತ್ರವಲ್ಲದೆ ಲಡಾಖ್‌ನಲ್ಲಿ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಯನ್ನು ಉತ್ತೇಜಿಸುತ್ತದೆ ಎಂದು ಪ್ರಧಾನಿ ಕಚೇರಿ ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ