
ನವದೆಹಲಿ(ನ.20) ಭಾರತದ ಬ್ಯಾಂಕ್‌ಗಳಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ ಬ್ರಿಟನ್‌ಗೆ ಪರಾರಿಯಾಗಿರುವ ಉದ್ಯಮಿಗಳಾದ ಮಿಜಯ್ ಮಲ್ಯ ಹಾಗೂ ನೀರವ್ ಮೋದಿಗೆ ಸಂಕಷ್ಟ ಹೆಚ್ಚಾಗಿದೆ. ಇಬ್ಬರನ್ನು ಭಾರತಕ್ಕೆ ಹಸ್ತಾಂತರ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಯುಕೆ ಪ್ರಧಾನಿ ಕೈರ್ ಸ್ಟಾರ್ಮರ್ ಜೊತೆ ಚರ್ಚಿಸಿದ್ದಾರೆ. ಬ್ರಿಜಿಲ್‌ನಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಮೋದಿ ಹಾಗೂ ಕೈರ್ ಸ್ಟಾರ್ಮರ್ ಮಹತ್ವದ ಚರ್ಚೆಯಲ್ಲಿ ಮಲ್ಯ ಹಾಗೂ ನೀರವ್ ಮೋದಿ ಹಸ್ತಾಂತರ ಕುರಿತು ಮಾತನಾಡಿದ್ದಾರೆ.
ಜಿ20 ಶೃಂಗಸಭೆಯ ಬಳಿಕ ಪ್ರತ್ಯೇಕವಾಗಿ ಕೈರ್ ಸ್ಟಾರ್ಮರ್ ಹಾಗೂ ಮೋದಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಭಾರತದ ಬ್ಯಾಂಕ್‌ಗಳಿಗೆ ವಂಚಿಸಿರುವ ಆರೋಪಿಗಳನ್ನು ಭಾರತಕ್ಕೆ ಶೀಘ್ರದಲ್ಲೆ ಹಸ್ತಾಂತರಿಸಬೇಕು ಎಂದಿದ್ದಾರೆ. ಕಾನೂನು ಪ್ರಕ್ರಿಯೆ ಮುಗಿಸಿ ಆರೋಪಿಗಳನ್ನು ಭಾರತದ ವಶಕ್ಕೆ ನೀಡಬೇಕು ಎಂದು ಮಾತುಕತೆಯಲ್ಲಿ ಮೋದಿ ಸೂಚಿಸಿದ್ದಾರೆ. ಪ್ರಧಾನಿ ಮೋದಿ ಮನವಿಗೆ ಕೈರ್ ಸ್ಟಾರ್ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ.
ಪ್ರಧಾನಿ ಮೋದಿಗೆ ನೈಜೀರಿಯಾದ ಎರಡನೇ ಅತ್ಯುನ್ನತ ನಾಗರಿಕ ಗೌರವ
ವಿಜಯ್ ಮಲ್ಯ ಭಾರತದ ಬ್ಯಾಂಕ್‌ಗಳಿಗೆ ಬರೋಬ್ಬರಿ 9,000 ಕೋಟಿ ರೂಪಾಯಿ ವಂಚಿಸಿದ್ದಾರೆ. ಕಿಂಗ್‌ಫಿಶರ್ ಏರ್‌ಲೈನ್ಸ್ ಸಂಬಂಧ ಹಲುವ ಬ್ಯಾಂಕ್‌ಗಳಿಂದ ಸಾಲ ಪಡೆದ ವಿಜಯ್ ಮಲ್ಯ ಬಳಿಕ 2016ರಲ್ಲಿ ಬ್ರಿಟನ್‌ಗೆ ಪರಾರಿಯಾಗಿದ್ದಾರೆ. ವಿಜಯ್ ಮಲ್ಯ ಬಂಧನಕ್ಕೆ ಸಿದ್ದತೆ ನಡೆಯುತ್ತಿದ್ದಂತೆ ವಿದೇಶಕ್ಕೆ ಪರಾರಿಯಾಗಿದ್ದಾರೆ. ಬ್ರಿಟನ್‌ನಲ್ಲಿ ವಿಜಯ್ ಮಲ್ಯ ಕಾನೂನು ಹೋರಾಟ ನಡೆಸುತ್ತಿದ್ದಾರೆ. ಇತ್ತ ನೀರವ್ ಮೋದಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಮೂಲಕ ಬರೋಬ್ಬರಿ 13,000 ಕೋಟಿ ರೂಪಾಯಿ ವಂಚಿಸಿದ್ದಾರೆ. ನೀರವ್ ಮೋದಿ ಸದ್ಯ ಲಂಡನ್ ಜೈಲಿನಲ್ಲಿದ್ದಾರೆ.
ಇತ್ತೀಚೆಗೆ ಸೆಂಟ್ರಲ್ ಬ್ಯೂರೋ ಇನ್ವೆಸ್ಟಿಗೇಶನ್(ಸಿಬಿಐ) ನಿರ್ದೇಶಕ ಪ್ರವೀಣ್ ಸೂದ್, ಯುಕೆ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದರು. ಬ್ರಿಟನ್ ಸೆಕ್ಯೂರಿಟಿ ಮಿನಿಸ್ಟರ್ ಡ್ಯಾನ್ ಜರ್ವಿಸ್ ಜೊತೆ ವಿಜಯ್ ಮಲ್ಯ, ನೀರವ್ ಮೋದಿ ಹಾಗೂ ಶಸ್ತ್ರಾಸ್ತ್ರ ಪೂರೈಕೆ ಹಾಗೂ ಒಪ್ಪಂದದಲ್ಲಿ ವಂಚಿಸಿರುವ ಸಂಜಯ್ ಭಂಡಾರಿ ಹಸ್ತಾಂತರಕ್ಕೂ ಮನವಿ ಮಾಡಿದ್ದರು.
ಪ್ರಧಾನಿ ಮೋದಿ ಹಾಗೂ ಸ್ಟಾರ್ಮರ್ ಮಾತುಕತೆಯಲ್ಲಿ ಭಾರತ ಹಾಗೂ ಬ್ರಿಟನ್ ನಡುವಿನ ದ್ವಿಪಕ್ಷೀಯ ಸಂಬಂಧ ಮತ್ತಷ್ಟು ಗಟ್ಟಿಗೊಳಿಸಲು ಉಭಯ ನಾಯಕರು ಮಹತ್ವ ನೀಡಿದ್ದಾರೆ. ಭಾರತೀಯ ವಿದ್ಯಾರ್ಥಿಗಳು, ಭಾರತೀಯ ಸಮುದಾಯಕ್ಕೆ ಸುರಕ್ಷತೆ ಒದಗಿಸುವುದು ಸೇರಿದಂತೆ ಹಲವು ವ್ಯಾಪಾರ ವಹಿವಾಟುಗಳ ಕುರಿತು ಮಾತುಕತೆ ನಡೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ