ರಾಮಮಂದಿರ ನಿರ್ಮಾಣಕ್ಕೆ ದಿಟ್ಟ ಹೆಜ್ಜೆ, ಟ್ರಸ್ಟ್ ರಚನೆಗೆ ಗ್ರೀನ್ ಸಿಗ್ನಲ್

By Suvarna NewsFirst Published Feb 5, 2020, 10:37 PM IST
Highlights

ಕೇಂದ್ರ ಸರ್ಕಾರದ ದಿಟ್ಟ ನಿರ್ಧಾರ/ ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ರಚನೆಗೆ ತೀರ್ಮಾನ/ ಕೇಂದ್ರ ಸಚಿವ ಸಂಪುಟ ಸಭೆ ತೆಗೆದುಕೊಂಡ ನಿರ್ಧಾರ

ನವದೆಹಲಿ(ಫೆ.05) ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಿಸಲು ಸುಪ್ರೀಂಕೋರ್ಟ್‍ನ ತೀರ್ಪಿನಂತೆ ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್  ರಚಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಸಭೆಯಲ್ಲಿ ಪ್ರಕಟಿಸಿದ್ದಾರೆ.

ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯವನ್ನು ರಾಜ್ಯಸಭೆಯಲ್ಲಿ ಪ್ರಕಟಿಸಿದ ಮೋದಿಯವರು ಕಳೆದ ನವೆಂಬರ್ ನಲ್ಲಿ ಸುಪ್ರೀಂಕೋರ್ಟ್ ರಾಮಮಂದಿರ ನಿರ್ಮಾಣ ಸಂಬಂಧಪಟ್ಟಂತೆ ಮಹತ್ವದ ತೀರ್ಮಾನ ನೀಡಿದೆ.

ರಾಮಮಂದಿರ ಟ್ರಸ್ಟ್ ಗೆ ಪೇಜಾವರ ಶ್ರೀ ನೇಮಕ

ರಾಮಜನ್ಮಭೂಮಿ- ಬಾಬ್ರಿ ಮಸೀದಿ ಪ್ರಕರಣ ಇತ್ಯರ್ಥವಾಗಿದೆ. ಸುಪ್ರೀಂಕೋರ್ಟ್ ತೀರ್ಪಿನಲ್ಲಿ ರಾಮಮಂದಿರ ನಿರ್ಮಾಣಕ್ಕೆ ಟ್ರಸ್ಟ್ ರಚಿಸುವಂತೆ ನಿರ್ದೇಶನವಿತ್ತು. ಆ ಕಾಲಾವಧಿ ಫೆ.9ಕ್ಕೆ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ರಾಮಜನ್ಮಭೂಮಿ ಟ್ರಸ್ಟ್‍ನ್ನು ರಚಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ದೇಶಾದ್ಯಂತ ವ್ಯಾಪಕ ಸ್ವಾಗತ ವ್ಯಕ್ತವಾಗಿದೆ.  ಸಂಘ ಪರಿವಾರ ಮತ್ತು ಬಿಜೆಪಿ ನಾಯಕರು, ಸಚಿವರು ಈ ತೀರ್ಮಾನವನ್ನು ಸ್ವಾಗತ ಮಾಡಿ ಕೊಂಡಾಡಿದ್ದಾರೆ.

click me!