2013ರಲ್ಲಿ ತಮಿಳುನಾಡಿನ ಸೇಲಂನಲ್ಲಿ ಹತ್ಯೆಗೀಡಾದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ‘ಆಡಿಟರ್’ ವಿ ರಮೇಶ್ ಅವರನ್ನು ಸ್ಮರಿಸುವಾಗ ಪ್ರಧಾನಿ ನರೇಂದ್ರ ಮೋದಿ ಅವರು ಭಾವುಕರಾಗಿ ಕಣ್ಣೀರು ಹಾಕಿದರು.
ಸೇಲಂ (ಮಾ.20): 2013ರಲ್ಲಿ ತಮಿಳುನಾಡಿನ ಸೇಲಂನಲ್ಲಿ ಹತ್ಯೆಗೀಡಾದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ‘ಆಡಿಟರ್’ ವಿ ರಮೇಶ್ ಅವರನ್ನು ಸ್ಮರಿಸುವಾಗ ಪ್ರಧಾನಿ ನರೇಂದ್ರ ಮೋದಿ ಅವರು ಭಾವುಕರಾಗಿ ಕಣ್ಣೀರು ಹಾಕಿದರು. ಸೇಲಂನಲ್ಲಿ ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಧಾನಿ, ‘ಇಂದು ನಾನು ಸೇಲಂನಲ್ಲಿದ್ದೇನೆ, ನಾನು ಆಡಿಟರ್ ರಮೇಶ್ ಅನ್ನು ನೆನಪಿಸಿಕೊಳ್ಳುತ್ತೇನೆ ...
ಇಂದು ಅವರು ನಮ್ಮೊಂದಿಗೆ ಇಲ್ಲ. ರಮೇಶ್ ಪಕ್ಷಕ್ಕಾಗಿ ಹಗಲಿರುಳು ದುಡಿದರು. ಅವರು ನಮ್ಮ ಪಕ್ಷದ ಸಮರ್ಪಿತ ನಾಯಕರಾಗಿದ್ದರು. ಅವರು ಉತ್ತಮ ವಾಗ್ಮಿ ಮತ್ತು ತುಂಬಾ ಕಠಿಣ ಪರಿಶ್ರಮಿ. ಮನುಷ್ಯ, ನಾನು ಅವರಿಗೆ ಗೌರವ ಸಲ್ಲಿಸುತ್ತೇನೆ’ ಎಂದು ಹೇಳಿ ಗದ್ಗದಿತರಾದರು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ‘ಆಡಿಟರ್’ ವಿ. ರಮೇಶ್ (54) ಅವರನ್ನು ಸೇಲಂನ ಅವರ ಮನೆಯಲ್ಲೇ 2013 ರಲ್ಲಿ ಅಪರಿಚಿತ ಗ್ಯಾಂಗ್ ಹತ್ಯೆ ಮಾಡಿತ್ತು.
ಮುಸ್ಲಿಂರ ಬಹುಪತ್ನಿತ್ವ ನೋಡಿ ಬೇರೆಯವರಿಗೆ ಹೊಟ್ಟೆಕಿಚ್ಚು: ಜಾವೇದ್ ಅಖ್ತರ್
ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ.ಎನ್. ಲಕ್ಷ್ಮಣನ್ ಅವರನ್ನೂ ಸ್ಮರಿಸಿದ ಪ್ರಧಾನಿ, ತುರ್ತುಪರಿಸ್ಥಿತಿ ವಿರೋಧಿ ಚಳವಳಿಯಲ್ಲಿ, ರಾಜ್ಯದಲ್ಲಿ ಬಿಜೆಪಿಯ ವಿಸ್ತರಣೆಯಲ್ಲಿ ಅವರ ಕೊಡುಗೆ ಅವಿಸ್ಮರಣೀಯವಾಗಿದೆ. ಅವರು ರಾಜ್ಯದಲ್ಲಿ ಅನೇಕ ಶಾಲೆಗಳನ್ನು ಸಹ ಪ್ರಾರಂಭಿಸಿದರು ಎಂದು ಸ್ಮರಿಸಿದರು. ಕೆ.ಎನ್. ಲಕ್ಷ್ಮಣನ್ ಅವರು ಜೂನ್ 2020 ರಲ್ಲಿ ಸೇಲಂನ ಸೆವ್ವೈಪೆಟ್ಟೈನಲ್ಲಿರುವ ತಮ್ಮ ನಿವಾಸದಲ್ಲಿ ವೃದ್ಧಾಪ್ಯ ಸಮಸ್ಯೆಗಳಿಂದ ನಿಧನರಾಗಿದ್ದರು.
ರಾಹುಲ್ ವಿರುದ್ಧ ಮತ್ತಷ್ಟು ವಾಗ್ದಾಳಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ‘ಶಕ್ತಿ’ ಹೇಳಿಕೆಯ ವಿರುದ್ಧ ಹರಿತ ವಾಗ್ದಾಳಿ ಮುಂದುವರಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ಯಾರು ಶಕ್ತಿಯನ್ನು ನಾಶ ಮಾಡಲು ಹೋಗುತ್ತಾರೋ ಅವರೇ ನಾಶವಾಗಿ ಬಿಡುತ್ತಾರೆ ’ ಎಂದು ಅಬ್ಬರಿಸಿದ್ದಾರೆ. ಅಲ್ಲದೆ ಇಂಡಿಯಾ ಮೈತ್ರಿಕೂಟ ಕೇವಲ ಹಿಂದೂಧರ್ಮವನ್ನು ಮಾತ್ರವೇ ಗುರಿ ಮಾಡುತ್ತದೆ ಎಂದು ಕಿಡಿಕಾರಿದ್ದಾರೆ.
ತಮಿಳುನಾಡಿನ ಸೇಲಂನಲ್ಲಿ ಮಂಗಳವಾರ ಬಿಜೆಪಿ ಸಮಾವೇಶ ಉದ್ದೇಶಿಸಿ ಮಾತನಾಡಿದ ಮೋದಿ, ‘ಕಾಂಗ್ರೆಸ್ ನಾಯಕ ರಾಹುಲ್ ಗಾಧಿ ಹಾಗೂ ಡಿಎಂಕೆ ಸೇರಿದಂತೆ ಅವರ ಇಂಡಿಯಾ ಒಕ್ಕೂಟದ ಅಂಗಪಕ್ಷಗಳು ‘ಶಕ್ತಿ’ ವಿರುದ್ಧ ಹೋರಾಡುವುದಾಗಿ ಹೇಳಿವೆ. ತಮಿಳುನಾಡಿನ ಜತೆಗೆ ಹಿಂದೂಧರ್ಮದಲ್ಲಿ ‘ಶಕ್ತಿ’ ಎಂದರೇನು ಗೊತ್ತೇ ಇದೆ’ ಎಂದರು.
318 ಪಾತಕಿಗಳ ಹತ್ಯೆಗೈದ ಪ್ರದೀಪ್ ಶರ್ಮಾಗೆ ನಕಲಿ ಎನ್ಕೌಂಟರ್ ಕೇಸಲ್ಲಿ ಜೀವಾವಧಿ ಶಿಕ್ಷೆ!
‘ಇಂಡಿಯಾ ಮೈತ್ರಿಕೂಟದ ಜನರು ಪದೇ ಪದೇ ಉದ್ದೇಶಪೂರ್ವಕವಾಗಿ ಹಿಂದೂ ನಂಬಿಕೆಯನ್ನು ಅವಮಾನಿಸುತ್ತಾರೆ.ಅವರು ಇದನ್ನು ಚೆನ್ನಾಗಿ ಯೋಚಿಸಿಯೇ ಹೇಳುತ್ತಿದ್ದಾರೆ. ಹಿಂದೂ ಧರ್ಮದಲ್ಲಿ ಶಕ್ತಿ ಎಂದರೆ ‘ಮಾತೃ ಶಕ್ತಿ, ನಾರಿ ಶಕ್ತಿ’ ಯಾಗಿದೆ ಆದರೆ, ಕಾಂಗ್ರೆಸ್ ಮತ್ತು ಡಿಎಂಕೆ ಇರುವ ಇಂಡಿಯಾ ಮೈತ್ರಿಯು ಇದನ್ನು ನಾಶಪಡಿಸುತ್ತದೆ ಎಂದು ಹೇಳುತ್ತದೆ’ ಎಂದು ವಾಗ್ದಾಳಿ ನಡೆಸಿದರು.