
ಬೆಂಗಳೂರು(ಫೆ.16): ಕನ್ನಡ ಸಾರಸತ್ವ ಲೋಕದ ಕವಿ ನಾಡೋಜ ಡಾ. ಚನ್ನವೀರ ಕಣವಿ (Chennaveera Kanavi) ಅಸ್ತಂಗತರಾಗಿದ್ದು ಪ್ರಧಾನಿ (Naredra Modi) ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಕನ್ನಡದ ಹಿರಿಯ ಸಾಹಿತಿ ಡಾ.ಚೆನ್ನವೀರ ಕಣವಿ ಅವರು ನಿಧನರಾಗಿದ್ದು, ಕನ್ನಡ ಸಾಹಿತ್ಯಕ್ಕೆ ಸೇವೆ ಸಲ್ಲಿಸಿದ ಇವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ವಿಪಕ್ಷ ನಾಯಕ ಸಿದ್ದರಾಮಯ್ಯಸೇರಿ ಗಣ್ಯರು ಸಂತಾಪ ತಿಳಿಸಿದ್ದರು.
ನಾಡು ಕಂಡಂತಹ ಅತ್ಯಂತ ಸೃಜನಶೀಲ ಸಾಹಿತ್ಯ ರಚನೆಕಾರರು, ಚಂಬೆಳಕಿನ ಕವಿ, ನಾಡೋಜ ಚೆನ್ನವೀರ ಕಣವಿ ಅವರು ನಿಧನರಾದ ವಿಷಯ ತಿಳಿದು ತುಂಬಾ ದುಃಖಿತನಾಗಿದ್ದೇನೆ. ಸಾಹಿತ್ಯದ ಮುಖಾಂತರ ಅವರು ತಮ್ಮ ಕಲ್ಪನೆ ಹಾಗೂ ವಾಸ್ತವಾಂಶವನ್ನು ಪರಿಣಾಮಕಾರಿಯಾಗಿ ಬಿಂಬಿಸಿದ ಕವಿ ಆಗಿದ್ದರು. ಪ್ರಶಸ್ತಿಗಳಿಗೆ ಗೌರವ ಬರುವ ವ್ಯಕ್ತಿತ್ವ ಅವರದಾಗಿತ್ತು. ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ಬಹುದೊಡ್ಡ ಹಾನಿಯಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗು ಅವರ ಕುಟುಂಬ ವರ್ಗಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲಿಯೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಓಂ ಶಾಂತಿಃ ಎಂದು ಹೇಳಿದ್ದರು.
ಜ್ಞಾನಪೀಠಕ್ಕೆ ಭೈರಪ್ಪ, ಮೊಯ್ಲಿ, ಕಣವಿ ಹೆಸರು ಶಿಫಾರಸು!
ಗೋವಿಂದ ಕಾರಜೋಳ (ಸಂತಾಪ ಸೂಚಿಸಿದ್ದು, ವಿಶ್ವ ಭಾರತಿಗೆ ಕನ್ನಡಧಾರತಿ ಬೆಳಗಿದ ಕನ್ನಡಿಗರ ಮನದಲ್ಲಿ ಕನ್ನಡ ಜಾಗೃತಿ ಮೂಡಿಸಿದ ಕನ್ನಡದ ಮಹಾಕವಿ ನಾಡೋಜ ಚೆನ್ನವೀರ ಕಣವಿಯವರ ನಿಧನದ ಸುದ್ಧಿ ಕೇಳಿ ತೀವ್ರ ಬೇಸರವಾಯಿತು. ಚೆನ್ನವೀರ ಕಣವಿ ಅವರ ಆತ್ಮಕ್ಕೆ ದೇವರು ಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದರು.
ಕನ್ನಡ ಕಾವ್ಯಲೋಕದ ಚೆಂಬೆಳಕಾಗಿದ್ದ, ಸೌಹಾರ್ದತೆಯನ್ನು ಸಾರುತ್ತಾ ಸಮನ್ವಯ ಕವಿ ಎಂದೇ ಖ್ಯಾತರಾಗಿದ್ದ ಕವಿ ಚೆನ್ನವೀರ ಕಣವಿ ಅವರ ನಿಧನದಿಂದ ಅತೀವ ದು:ಖಕ್ಕೀಡಾಗಿದ್ದೇನೆ. ಅವರ ಕುಟುಂಬ ವರ್ಗದ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅಂತಿಮ ನಮನ ಸಲ್ಲಿಸಿದ್ದರು.
ಆಧುನಿಕ ಕನ್ನಡ ಕಾವ್ಯದ ಮೇರು ಪ್ರತಿಭೆಗಳಲ್ಲಿ ಕಣವಿ ಒಬ್ಬರು, ಹೊಂಬೆಳಕಿನ ಕವಿ, ಸುನೀತಗಳ ಸಾಮ್ರಾಟರೆಂದೇ ಕನ್ನಡಿಗರ ಮನಸ್ಸುಗಳಲ್ಲಿ ತುಂಬಿಹೋಗಿರುವ ನಾಡೋಜ ಚನ್ನವೀರ ಕಣವಿ ಅವರ ನಿಧನದ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು ಎಂದು ಎಚ್‌ಡಿಕೆ ಸಂತಾಪ ತಿಳಿಸಿದ್ದರು.
ಕಳೆದ ಜನವರಿ 15 ರಿಂದ ಧಾರವಾಡದ ಎಸ್‌ಡಿಎಂ ಆಸ್ಪತ್ರೆಗೆ (SDM Hospital) ದಾಖಲಾಗಿ ಡಾ.ಕಣವಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆರಂಭದಲ್ಲಿ ಕೋವಿಡ್ (Covid19) ಸೋಂಕು ತಗುಲಿದ್ದರಿಂದ ಚಿಕಿತ್ಸೆ ನೀಡಿ, ಗುಣಮುಖಗೊಳಿಸಲಾಗಿತ್ತು. ನಂತರ ಅವರು ವಯೊಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಜಿಲ್ಲಾಡಳಿತದಿಂದ ಅಗತ್ಯ ಚಿಕಿತ್ಸೆಗೆ ಕ್ರಮವಹಿಸಲಾಗಿತ್ತು. ಮುಖ್ಯಂತ್ರಿಗಳು ಬಸವರಾಜ ಬೊಮ್ಮಾಯಿ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದರು. ಚಿಕಿತ್ಸೆ ಫಲಿಸದೆ ಡಾ.ಕಣವಿ ನಿಧನರಾದರು.
ಚನ್ನವೀರ ಕಣವಿ ಕನ್ನಡದ ಸಮನ್ವಯ ಕವಿ, ಸುನೀತಗಳ ಸಾಮ್ರಾಟ್ ಎಂದು ಪ್ರಸಿದ್ಧಿರಾದ ಕನ್ನಡದ ಖ್ಯಾತ ವಿದ್ವಾಂಸ ಮತ್ತು ಹೊಸಗನ್ನಡ ಕಾವ್ಯದ ಪ್ರಮುಖ ಕವಿಗಳಲ್ಲಿ ಒಬ್ಬರಾಗಿದ್ದರು. ಚನ್ನವೀರ ಕಣವಿಯವರು ಗದಗ ಜಿಲ್ಲೆಯ ಹೊಂಬಳ ಗ್ರಾಮದಲ್ಲಿ 1928 ರ ಜೂನ್ 28ರಂದು ಜನಿಸಿದರು. ತಂದೆ ಸಕ್ಕರೆಪ್ಪ ಮತ್ತು ತಾಯಿ ಪಾರ್ವತವ್ವ. ತಂದೆ ಸಕ್ಕರೆಪ್ಪ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು.
ಕಣವಿ ಅವರ ಪಾರ್ಥಿವ ಶರೀರ ಕರ್ನಾಟಕ ಕಲಾ ಮಹಾವಿದ್ಯಾಲಯದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕಿಡಲಾಗುತ್ತಿದ್ದು. ಕಳೆದ ನಾಲ್ಕು ದಶಕಗಳಿಂದ ಅವರು ಮತ್ತು ಅವರ ಕುಟುಂಬ ನಮಗೆ ಬಹಳಷ್ಟು ಆತ್ಮೀಯರಾಗಿದ್ದರು. ಸಜ್ಜನಿಕೆಯ ಸಾಕಾರ ಮೂರ್ತಿಯಾಗಿದ್ದ ಅವರು ತಮ್ಮ ಮೃದು ಹಾಗೂ ಮಾನವೀಯತೆಯತೆಯ ಮಾತುಗಳಿಂದ ಮನಸ್ಸು ಗೆಲ್ಲುವ ಅಪರೂಪದ ವ್ಯಕ್ತಿತ್ವ ಹೊಂದಿದ್ದರು. ಅವರು ಕೋಪ ಮಾಡಿಕೊಂಡಿದ್ದನ್ನು ನೋಡಿಯೇ ಇಲ್ಲ ಎಂದ ಮುಖ್ಯ ಮಂತ್ರಿಗಳು, ಎಲ್ಲಾ ಸಮಸ್ಯೆಗಳಿಗೆ ಸಕಾರಾತ್ಮಕ ಪರಿಹಾರ ಸೂಚಿಸುವ ಸಾಹಿತ್ಯ ರಚನೆ ಮಾಡಿದ್ದಾರೆ. ಸಾಹಿತ್ಯದ ಮುಖಾಂತರ ತಮ್ಮ ಕಲ್ಪನೆ ಮತ್ತು ವಾಸ್ತವಾಂಶವನ್ನು ಕೂಡ ಪರಿಣಾಮಕಾರಿಯಾಗಿ ಬಿಂಬಿಸಿದವರು. ನಾಡೋಜ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಪ್ರಶಸ್ತಿಗೆ ಗೌರವ ತಂದುಕೊಡುವ ರೀತಿಯಲ್ಲಿ ಅವರ ವ್ಯಕ್ತಿತ್ವವಿತ್ತು. ಸದಾ ಕಾಲ ತಮ್ಮ ಸಂಯಮ ಹಾಗೂ ಗಾಂಭೀರ್ಯತೆಯನ್ನು ಮೆರೆದವರು.
ವೆಂಕಯ್ಯ ನಾಯ್ಡು ಟ್ವೀಟ್ ಹೀಗಿದೆ:
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ