ನವದೆಹಲಿ(ಅ.03): ಮೂರು ಕೃಷಿ ಕಾಯ್ದೆಗಳನ್ನು(Farm Law) ವಾಪಸ್ ಪಡೆಯಬೇಕು ಎಂದು ದೆಹಲಿಯಲ್ಲಿ ರೈತರು 10 ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿರುವಾಗಲೇ, ಆ ಕಾಯ್ದೆಗಳನ್ನು ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಮತ್ತೊಮ್ಮೆ ಪ್ರಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ನಾಗರಿಕರ ಒಳಿತಿನ ದೃಷ್ಟಿಯಿಂದ ಕಠಿಣ ಹಾಗೂ ದೊಡ್ಡ ನಿರ್ಧಾರಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.
ಇದೇ ವೇಳೆ, ಕೃಷಿ ಕಾಯ್ದೆ(farm Law) ವಿಚಾರವಾಗಿ ಕೇಂದ್ರ ಸರ್ಕಾರವನ್ನು ಟೀಕಿಸುತ್ತಿರುವ ಪ್ರತಿಪಕ್ಷಗಳ ನಡೆ ಬೌದ್ಧಿಕ ಅಪ್ರಾಮಾಣಿಕತೆ ಹಾಗೂ ರಾಜಕೀಯ ಕಪಟತನ ಎಂದು ಮೂದಲಿಸಿದ್ದಾರೆ. ಈಗ ವಿರೋಧಿಸುತ್ತಿರುವ ಕೆಲ ಪಕ್ಷಗಳು ಕೇಂದ್ರ ಸರ್ಕಾರ ಈಗ ಜಾರಿಗೆ ತಂದಿರುವಂತಹ ಕಾಯ್ದೆಯನ್ನೇ ಅನುಷ್ಠಾನಗೊಳಿಸುವ ಕುರಿತು ಭರವಸೆಯನ್ನು ನೀಡಿದ್ದವು. ಇದೀಗ ಯು-ಟರ್ನ್ ಒಡೆದು, ದುರುದ್ದೇಶಪೂರಿತ ತಪ್ಪು ಮಾಹಿತಿಯನ್ನು ಪಸರಿಸುತ್ತಿವೆ ಎಂದು ‘ಓಪನ್’ ನಿಯತಕಾಲಿಕೆಗೆ ನೀಡಿರುವ ಸಂದರ್ಶನದಲ್ಲಿ(Interview) ತಿಳಿಸಿದ್ದಾರೆ.
ಭಾರತೀಯರಿಗೆ ಏನೆಲ್ಲಾ ಸೌಲಭ್ಯ ದಕ್ಕಬೇಕೋ, ದಶಕಗಳ ಹಿಂದೆಯೇ ಸಿಗಬೇಕಿತ್ತೋ ಅವಿನ್ನೂ ಲಭಿಸಿಲ್ಲ. ಜನರು ಇನ್ನಷ್ಟುಕಾಯುವಂತೆ ನಾವು ಮಾಡಬಾರದು. ಹೀಗಾಗಿ ದೊಡ್ಡ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಅಗತ್ಯ ಬಿದ್ದರೆ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ. ಕೃಷಿ ಕಾಯ್ದೆ ಹಿಂಪಡೆಯುತ್ತೀರಾ ಎಂಬ ಪ್ರಶ್ನೆಗೆ ಅವರು ಈ ಉತ್ತರ ನೀಡಿದ್ದಾರೆ.
ಪ್ರತಿಭಟನಾ ನಿರತ ರೈತರ ಜತೆ ಮಾತುಕತೆಗೆ ಸಿದ್ಧ. ಯಾವ ವಿಷಯದಲ್ಲಿ ಸಹಮತ ಇಲ್ಲವೋ ಆ ಬಗ್ಗೆ ಚರ್ಚೆ ಮಾಡಲು ಸಿದ್ಧ ಎಂದು ಹೇಳುತ್ತಲೇ ಬಂದಿದ್ದೇವೆ. ಆದರೆ ಈವರೆಗೆ ಯಾರೊಬ್ಬರೂ ತಮಗೆ ಇಂತಹ ವಿಷಯದ ಬಗ್ಗೆ ಒಪ್ಪಿಗೆ ಇಲ್ಲ ಎಂದು ಹೇಳಿಲ್ಲ ಎಂದು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ