ಇಂದಿರಾ ಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿ ವಿರೋಧಿಸಿ ಸಂವಿಧಾನ ಹತ್ಯಾ ದಿನ ಘೋಷಿಸಿದ ಮೋದಿ ಸರ್ಕಾರ

Published : Jul 12, 2024, 05:29 PM ISTUpdated : Jul 12, 2024, 05:33 PM IST
ಇಂದಿರಾ ಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿ ವಿರೋಧಿಸಿ ಸಂವಿಧಾನ ಹತ್ಯಾ ದಿನ ಘೋಷಿಸಿದ ಮೋದಿ ಸರ್ಕಾರ

ಸಾರಾಂಶ

ಅಂದಿನ ಪ್ರಧಾನಿ ದಿವಂಗತ ಇಂದಿರಾಗಾಂಧಿಯವರು 1975 ರಲ್ಲಿ ದೇಶದ ಮೇಲೆ ತುರ್ತು ಪರಿಸ್ಥಿತಿಯನ್ನು ಹೇರಿದ್ದನ್ನು ವಿರೋಧಿಸಿ ಕೇಂದ್ರ ಸರ್ಕಾರ ಜೂನ್ 25ರ ದಿನವನ್ನು 'ಸಂವಿಧಾನ ಹತ್ಯಾ ದಿನ'  ಎಂದು  ಘೋಷಿಸಿದೆ.

ನವದೆಹಲಿ (ಜು.12): ಅಂದಿನ ಪ್ರಧಾನಿ ದಿವಂಗತ ಇಂದಿರಾಗಾಂಧಿಯವರು 1975 ರಲ್ಲಿ ದೇಶದ ಮೇಲೆ ತುರ್ತು ಪರಿಸ್ಥಿತಿಯನ್ನು ಹೇರಿದ್ದನ್ನು ವಿರೋಧಿಸಿ ಕೇಂದ್ರ ಸರ್ಕಾರ ಜೂನ್ 25ರ ದಿನವನ್ನು 'ಸಂವಿಧಾನ ಹತ್ಯಾ ದಿನ'  ಎಂದು  ಘೋಷಿಸಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಬಗ್ಗೆ ಮಾತನಾಡಿ 1975 ರಲ್ಲಿ ಇಂದಿರಾ ಗಾಂಧಿ ಘೋಷಿಸಿದ ತುರ್ತು ಪರಿಸ್ಥಿತಿಯಿಂದ ದೇಶದ ಜನತೆ  ಅತ್ಯಂತ ಅಮಾನವೀಯ ನೋವುಗಳನ್ನು ಸಹಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಕೊಡುಗೆಗಳನ್ನು ಸ್ಮರಿಸುವ ನಿಟ್ಟಿನಲ್ಲಿ  ಸಂವಿಧಾನ ಹತ್ಯಾ ದಿವಸ್‌ ಆಚರಣೆ ಮಾಡಲು ನಿರ್ಧರಿಸಲಾಗಿದೆ ಎಂದರು.

ಅಂಬಾನಿ ಮಗನ ಮದುವೆಯಲ್ಲಿ ಭಾಗಿಯಾದ ಯಶ್ ರಾಧಿಕಾ ಪಂಡಿತ್, ನಟ ಕೂದಲಿಗೆ ಕತ್ತರಿ ಹಾಕಿದ್ದು ರಿವೀಲ್!

ಈ ಮಹತ್ವದ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತೆಗೆದುಕೊಂಡಿದೆ. ತುರ್ತು ಪರಿಸ್ಥಿತಿಯ ಸಮಯದಲ್ಲಿ ಹೇಳಲಾಗದ ನೋವು, ಕಿರುಕುಳ ಅನುಭವಿಸಿ ಪ್ರಜಾಪ್ರಭುತ್ವವನ್ನು ಮತ್ತೆ ಪುನರ್‌ ನಿರ್ಮಿಸಲು ಹೋರಾಡಿದ ಲಕ್ಷಾಂತರ ಆತ್ಮಗಳಿಗೆ ಮತ್ತು ಅವರನ್ನು ಗೌರವಿಸುವ ಉದ್ದೇಶದಿಂದ ಸಂವಿಧಾನ ಹತ್ಯಾ ದಿನ ಆಚರಿಸಲಾಗುವುದು.

ಈ ಮೂಲಕ ಭಾರತದ ಪ್ರತಿಯೊಬ್ಬ ಪ್ರಜೆಯ ವೈಯಕ್ತಿಕ ಸ್ವಾತಂತ್ರ್ಯ ಮತ್ತು  ಪ್ರಜಾಪ್ರಭುತ್ವದ ರಕ್ಷಣೆಯನ್ನು ಜೀವಂತವಾಗಿಡಲು ಅನುಕೂಲವಾಗಲಿದೆ. ಇದು ಕಾಂಗ್ರೆಸ್ ನ ಸರ್ವಾಧಿಕಾರ ಮತ್ತು ಭಯಾನಕ ಆಡಳಿತ ಮರುಕಳಿಸದಂತೆ ತಡೆಯುತ್ತದೆ ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

ತಮಿಳುನಾಡಿಗೆ ನಿತ್ಯ 1 ಟಿಎಂಸಿ ಕಾವೇರಿ ನದಿ ನೀರು ಬಿಡಲು ಕರ್ನಾಟಕಕ್ಕೆ ಶಿಫಾರಸು!

ಭಾರತದಲ್ಲಿ ತುರ್ತು ಪರಿಸ್ಥಿತಿಯನ್ನು ಜೂನ್ 25, 1975 ರಿಂದ ಮಾರ್ಚ್ 21, 1977 ರ ಅವಧಿಗಳ ಕಾಲ ಹೇರಲಾಗಿತ್ತು. ಆಂತರಿಕ ಮತ್ತು ಬಾಹ್ಯ ಬೆದರಿಕೆಗಳನ್ನು ಉಲ್ಲೇಖಿಸಿ ಇಂದಿರಾ ಗಾಂಧಿ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದರು. ಪ್ರಧಾನಿಯ ಸಲಹೆಯ ಮೇರೆಗೆ ರಾಷ್ಟ್ರಪತಿ ಫಕ್ರುದ್ದೀನ್ ಅಲಿ ಅಹ್ಮದ್ ಅವರು  ತುರ್ತು ಪರಿಸ್ಥಿತಿ ಅಂಗೀಕರಿಸಿದರು.  ಈ ಸಮಯದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಇಂದಿರಾ ಗಾಂಧಿ ತಮ್ಮ ಬಹುಪಾಲು ರಾಜಕೀಯ ವಿರೋಧಿಗಳನ್ನು ಜೈಲಿಗಟ್ಟಿದ್ದರು. ಈ ಸಮಯದಲ್ಲಿ ಮಾಧ್ಯಮಕ್ಕೆ ನಿರ್ಬಂಧ ಹೇರಲಾಗಿತ್ತು.


 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇಡಿಯಿಂದ ಮತ್ತೆ ಅನಿಲ್ ಅಂಬಾನಿ 1120 ಕೋಟಿ ಹೆಚ್ಚುವರಿ ಆಸ್ತಿ ಮುಟ್ಟುಗೋಲು
ಮನೆ ಮುಂದೆ ದನ ಸೆಗಣಿ ಹಾಕಿದ್ದಕ್ಕೆ ಯುವಕನ ಕೊಲೆ