PM Modi: ಮತ್ತೆ ದಕ್ಷಿಣದತ್ತ ಮುಖ ಮಾಡಿದ ಪ್ರಧಾನಿ: ರಾಜಕೀಯ ಮಹತ್ವ ಪಡೆದ ಮೋದಿ ನಡೆ

Published : Dec 15, 2025, 09:32 AM IST
PM Modi

ಸಾರಾಂಶ

ಪ್ರಧಾನಿ ಮೋದಿ ತಮಿಳುನಾಡು ಪ್ರವಾಸ ಕೈಗೊಂಡು ರೈತರೊಂದಿಗೆ ಪೊಂಗಲ್ ಆಚರಿಸುವ ಸಾಧ್ಯತೆಯಿದ್ದು, ಇದು ರಾಜಕೀಯ ಮಹತ್ವ ಪಡೆದಿದೆ. ತಮಿಳುನಾಡಿನ ಗ್ರಾಮೀಣ ಮತ್ತು ರೈತಾಪಿ ವರ್ಗದ ಮತ ಸೆಳೆಯಲೂ ಮುಂದಾಗಲಿದ್ದಾರೆ ಎಂದು ಮೂಲಗಳು ಹೇಳಿವೆ.

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅವರು ಜ.13-15ರವರೆಗೆ ತಮಿಳುನಾಡಿನ ಪ್ರವಾಸ ಕೈಗೊಳ್ಳಲಿದ್ದು, ಅಲ್ಲಿನ ರೈತರೊಂದಿಗೆ ಪೊಂಗಲ್‌ ಹಬ್ಬವನ್ನು ಆಚರಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ತಮಿಳುನಾಡು ಭೇಟಿ ವೇಳೆ ಅವರು ರಾಮೇಶ್ವರದಲ್ಲಿ ನಡೆಯಲಿರುವ ಕಾಶಿ ತಮಿಳ್‌ ಸಂಗಮಂ 4.0 ಸಮಾರೋಪದಲ್ಲಿ ಹಾಗೂ ಇತರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ರೈತರ ಜತೆ ಪೊಂಗಲ್‌ ಆಚರಿಸಲಿದ್ದಾರೆ ಎಂದು ಹೇಳಲಾಗಿದೆ.

ಗ್ರಾಮೀಣ ಮತ್ತು ರೈತಾಪಿ ವರ್ಗದ ಮತ ಸೆಳೆಯುವ ಪ್ರಯತ್ನ!

2026ರಲ್ಲಿ ವಿಧಾನಸಭೆ ಚುನಾವಣೆ ಎದುರಿಸಲಿರುವ ತಮಿಳುನಾಡಿನಲ್ಲಿ ಪ್ರಧಾನಿ ಭೇಟಿಯು ಬಹುಮುಖ್ಯ ಪಾತ್ರ ವಹಿಸಲಿದೆ. ಭೇಟಿ ವೇಳೆ ಅವರು ಹಲವು ರಾಜ್ಯ ನಾಯಕರೊಂದಿಗೆ ಬಿಜೆಪಿ ಜತೆ ಮೈತ್ರಿ ಕುರಿತು ಚರ್ಚೆ ನಡೆಸಬಹುದು . ತಮಿಳುನಾಡಿನ ಗ್ರಾಮೀಣ ಮತ್ತು ರೈತಾಪಿ ವರ್ಗದ ಮತ ಸೆಳೆಯಲೂ ಮುಂದಾಗಲಿದ್ದಾರೆ ಎಂದು ಮೂಲಗಳು ಹೇಳಿವೆ.

ಶಬರಿಮಲೆಯಲ್ಲಿ ಹೃದಯಾಘಾತಕ್ಕೆ ತುತ್ತಾಗಿದ್ದ 81 ಭಕ್ತರ ರಕ್ಷಣೆ

ಪಟ್ಟಣಂತಿಟ್ಟ (ಕೇರಳ): ಶಬರಿಮಲೆಯಲ್ಲಿ ಆರೋಗ್ಯ ಇಲಾಖೆ ಸ್ಥಾಪಿಸಿರುವ ವೈದ್ಯಕೀಯ ನೆರವು ಕೇಂದ್ರಗಳು ಹೃದಯಾಘಾತಕ್ಕೆ ತುತ್ತಾಗಿದ್ದ 81 ಯಾತ್ರಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿವೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.ಪ್ರಸಿದ್ಧ ಶಬರಿಮಲೆ ಅಯ್ಯಪ್ಪಸ್ವಾಮಿ ಯಾತ್ರೆ ಆರಂಭವಾದ ಹಿನ್ನೆಲೆಯಲ್ಲಿ ಭಕ್ತಾದಿಗಳ ನೆರವಿಗಾಗಿ ಸರ್ಕಾರ 22 ತುರ್ತು ವೈದ್ಯಕೀಯ ಚಿಕಿತ್ಸಾ ಕೇಂದ್ರಗಳನ್ನು ಸ್ಥಾಪಿಸಿತ್ತು. ತಜ್ಞ ವೈದ್ಯರು, ಅರೆವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ವರದಿಯಾದ ಒಟ್ಟು 103 ಹೃದಯಾಘಾತ ಪ್ರಕರಣಗಳಲ್ಲಿ, 81 ರೋಗಿಗಳಿಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಗಿದೆ. ಹೃದಯಸ್ತಂಭನಕ್ಕೆ (ಕಾರ್ಡಿಯಾಕ್ ಅರೆಸ್ಟ್‌) ಒಳಗಾದ 25 ಮಂದಿಯಲ್ಲಿ 6 ಜನರನ್ನು ಬದುಕಿಸಲಾಗಿದೆ. ಇಲ್ಲಿಯವರೆಗೆ, ಶಬರಿಮಲೆ ಮತ್ತು ಹತ್ತಿರದ ಆಸ್ಪತ್ರೆಗಳಲ್ಲಿ ಒಟ್ಟು 95,385 ಹೊರರೋಗಿಗಳು ಚಿಕಿತ್ಸೆ ಪಡೆದಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಭಾರತಕ್ಕೆ ಶೀಘ್ರ ಹೊಸ ಪ್ರಧಾನಿ: ಕಾಂಗ್ರೆಸ್ಸಿಗ ಚವಾಣ್‌ ಬಾಂಬ್

ಪುಣೆ: ‘ಡಿ.19ಕ್ಕೆ ಅಮೆರಿಕದಲ್ಲಿ ವಿವಾದಾತ್ಮಕ ಜೆಫ್ರಿ ಎಪ್‌ಸ್ಟೀನ್‌ ಲೈಂ*ಗಿಕ ಕಡತಗಳು ಬಿಡುಗಡೆಯಾಗಲಿವೆ. ಅದು ಭಾರತದ ರಾಜಕೀಯದ ಮೇಲೆ ಪರಿಣಾಮ ಬೀರಲಿದೆ. ಹಾಗೇನಾದರೂ ಆದರೆ ಪ್ರಧಾನಿ ನರೇಂದ್ರ ಮೋದಿ ಅಧಿಕಾರದಿಂದ ಕೆಳಗಿಳಿಯುತ್ತಾರೆ. ಮಹಾರಾಷ್ಟ್ರದಿಂದಲೇ ಒಬ್ಬರು ಪ್ರಧಾನಿಯಾಗುವ ಸಾಧ್ಯತೆಯಿದೆ’ ಎಂದು ಹಿರಿಯ ಕಾಂಗ್ರೆಸ್‌ ನಾಯಕ ಪೃಥ್ವಿರಾಜ್‌ ಚವಾಣ್ ಹೊಸ ಬಾಂಬ್‌ ಸಿಡಿಸಿದ್ದಾರೆ.

ಇದನ್ನೂ ಓದಿ: Delhi Air Quality: ನಿಬಂಧನೆಗಳು ಜಾರಿಯಲ್ಲಿದ್ರೂ ಪಾತಾಳಕ್ಕೆ ಕುಸಿದ ದೆಹಲಿ ವಾಯು ಗುಣಮಟ್ಟ

ಜೆಫ್ರಿ ಎಪ್‌ಸ್ಟೀನ್ ಅಮೆರಿಕದ ಲೈಂ*ಗಿಕ ಅಪರಾಧಿ. ಅಪ್ರಾಪ್ತ ಬಾಲಕಿಯರನ್ನು ಲೈಂ*ಗಿಕ ದೌರ್ಜನ್ಯಕ್ಕೆ ಒಳಪಡಿಸಿದ ಆರೋಪದ ಮೇಲೆ 2019ರಲ್ಲಿ ಜೈಲಿನಲ್ಲಿದ್ದಾಗಲೇ ಸಾವನ್ನಪ್ಪಿದ್ದ. ಆತನ ಲೈಂಗಿಕ ಹಗರಣಗಳ ರಹಸ್ಯ ದಾಖಲೆಗಳನ್ನು ಬಿಡುಗಡೆ ಮಾಡುವ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಟ್ರಂಪ್ ಸಹಿ ಹಾಕಿದ್ದಾರೆ. ಇದರಲ್ಲಿ ಅನೇಕ ಗಣ್ಯರ ಹೆಸರಿವೆ ಎನ್ನಲಾಗಿದೆ. ಇದರ ಬೆನ್ನಲ್ಲೇ ಚವಾಣ್‌ ಈ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: 62 ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಡೆಸಿ ಗೆದ್ದ 82ರ ವೃದ್ಧ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Delhi Air Quality: ನಿಬಂಧನೆಗಳು ಜಾರಿಯಲ್ಲಿದ್ರೂ ಪಾತಾಳಕ್ಕೆ ಕುಸಿದ ದೆಹಲಿ ವಾಯುಗುಣಮಟ್ಟ
62 ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಡೆಸಿ ಗೆದ್ದ 82ರ ವೃದ್ಧ