ಹತ್ಯೆ, ಕೋಮು ಸಂಘರ್ಷ, ಹಿಂದೂ ಕಾರ್ಯಕರ್ತರ ಅಸಮಧಾನ, ಬಿಜೆಪಿ ಕಾರ್ಯಕರ್ತರ ಅಸಹಾಯಕತೆ ಸೇರಿದಂತೆ ಹಲವು ಸಮಸ್ಯೆಗಳು ಮಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಯಲ್ಲಿ ಸದ್ದು ಮಾಡಿದೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಇದೀಗ ಮಂಗಳೂರು ಭೇಟಿಗೆ ಸಜ್ಜಾಗಿದ್ದಾರೆ.
ನವದೆಹಲಿ(ಆ.22): ಪ್ರಧಾನಿ ನರೇಂದ್ರ ಮೋದಿ ಮತ್ತೆ ಕರ್ನಾಟಕದತ್ತ ಮುಖ ಮಾಡಿದ್ದಾರೆ. ಈ ಬಾರಿ ಮಂಗಳೂರು ಪ್ರವಾಸ ಕೈಗೊಳ್ಳುತ್ತಿದ್ದಾರೆ. ಸೆಪ್ಟೆಂಬರ್ 2 ರಂದು ಮೋದಿ ಅಧಿಕೃತ ಸರ್ಕಾರಿ ಕಾರ್ಯಕ್ರಮಕ್ಕಾಗಿ ಮಂಗಳೂರಿಗೆ ಆಗಮಿಸುತ್ತಿದ್ದಾರೆ. ನವ ಮಂಗಳೂರು ಬಂದರು ಪ್ರಾಧಿಕಾರದ ಕಾರ್ಯಕ್ರಮಕ್ಕೆ ಮೋದಿಗೆ ಆಹ್ವಾನ ನೀಡಲಾಗಿದೆ. ಇದರ ಜೊತೆಗೆ ಎನ್ ಎಂಪಿಎ ಹಲವು ಯೋಜನೆಗಳ ಉದ್ಘಾಟನೆಗಾಗಿ ಮೋದಿಗೆ ಆಹ್ವಾನ ನೀಡಲಾಗಿದೆ. ಈ ಕಾರ್ಯಕ್ರಮಕ್ಕೆ ಆಗಮಿಸುವುದಾಗಿ ಮೋದಿ ಒಪ್ಪಿಕೊಂಡಿದ್ದಾರೆ. ಶೀಘ್ರದಲ್ಲೇ ಪ್ರಧಾನಿ ಕಾರ್ಯಾಲಯಿಂದ ಮೋದಿ ಮಂಗಳೂರು ಪ್ರವಾಸ ಅಧಿಕೃತ ಪ್ರಕಟಣೆ ಹೊರಬೀಳಲಿದೆ. ಪ್ರಧಾನಿ ನರೇಂದ್ರ ಸರ್ಕಾರಿ ಅಧಿಕೃತ ಕಾರ್ಯಕ್ರಮಕ್ಕಾಗಿ ಮಂಗಳೂರಿಗ ಭೇಟಿ ನೀಡಲಿದ್ದಾರೆ. ಇದರ ಜೊತೆಗೆ ಮಂಗಳೂರಿನಲ್ಲಿನ ಕೇಂದ್ರ ಸರ್ಕಾರದ ಹಲವು ಯೋಜನೆಗಳಿಗೆ ಚಾಲನೆ ಸಿಗಲಿದೆ. ಈ ಕಾರ್ಯಕ್ರಮಕಗಳಿಗಾಗಿ ಮೋದಿ ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಇದೇ ವೇಳೆ ಮಂಗಳೂರಿನಲ್ಲಿ ಪಕ್ಷದ ಕಾರ್ಯಕ್ರಮವನ್ನು ಆಯೋಜಿಸಲು ರಾಜ್ಯ ಬಿಜೆಪಿ ತಯಾರಿ ಮಾಡಿಕೊಂಡಿದೆ.
ಕೋಮು ಸಂಘರ್ಷ ಸೇರಿದಂತ ಹಲವು ಕಾರಣಗಳಿಂದ ಮಂಗಳೂರು ದೇಶದಲ್ಲಿ ಸುದ್ದಿಯಲ್ಲಿದೆ. ಇದರ ಜೊತೆಗೆ ಕಾರ್ಯಕರ್ತರ ಅಸಮಧಾನಗಳು ಬಿಜೆಪಿಗೆ ತೀವ್ರ ಹಿನ್ನಡೆಯನ್ನು ತಂದಿದೆ. ಈ ಎಲ್ಲಾ ಸಮಸ್ಯೆಗಳಿಗೆ ಫುಲ್ ಸ್ಟಾಪ್ ಹಾಕಿ, ಕರಾವಳಿ ಭದ್ರಕೋಟೆಯನ್ನು ಮತ್ತಷ್ಚು ಭದ್ರಪಡಿಸಲು ಬಿಜೆಪಿ ತಯಾರಿ ಮಾಡಿಕೊಂಡಿದೆ. ಇದಕ್ಕಾಗಿ ಮಂಗಳೂರಿನ ಹೊರವಲಯದಲ್ಲಿ ಪ್ರಧಾನಿ ನರೇಂದ್ರ ಮೋದಿಯ ಬೃಹತ್ ಸಮಾವೇಶವನ್ನು ಆಯೋಜಿಸಿದೆ. ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. ಇದೇ ವೇಳೆ ನಗರದ ಹೊರವಲಯ ಕೂಳೂರಿನಲ್ಲಿ ಪಕ್ಷದ ಕಾರ್ಯಕ್ರಮವನ್ನು ಆಯೋಜಿಸಲು ರಾಜ್ಯ ಬಿಜೆಪಿ ಪ್ಲಾನ್ ಮಾಡಿಕೊಂಡಿದೆ. ಈ ಮೂಲಕ ಬಿಜೆಪಿ ಕಾರ್ಯಕರ್ತರು, ಹಿಂದೂ ಕಾರ್ಯಕರ್ತರಿಗೆ ಹೊಸ ಹುರುಪು ನೀಡಲು ಬಿಜೆಪಿ ಮುಂದಾಗಿದೆ.
ಪ್ರಧಾನಿ ಮೋದಿ ಭೇಟಿ ವೇಳೆ ಪಂಜಾಬ್‌ನಲ್ಲಿ ಉಗ್ರ ದಾಳಿಗೆ ಸಂಚು, ಗುಪ್ತಚರ ಇಲಾಖೆ ಎಚ್ಚರಿಕೆ!
ಜೂನ್ ತಿಂಗಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಿ ಮೋದಿ ಕರ್ನಾಟಕ್ಕೆ ಆಗಮಿಸಿದ್ದರು. ಬೆಂಗಳೂರಿಗೆ ಆಗಮಿಸಿದ್ದ ಮೋದಿ, ಮೈಸೂರಿನಲ್ಲಿ ಯೋಗದಿನಾಚರಣೆ ಆಚರಿಸಿ ದೆಹಲಿಗೆ ಹಿಂತಿರುಗಿದ್ದರು. ಇದೀಗ ಮತ್ತೆ ಕರ್ನಾಟಕದತ್ತ ಮೋದಿ ಮುಖಮಾಡಿದ್ದಾರೆ. ಆಗಸ್ಟ್ 24 ರಂದು ಮೋದಿ ಪಂಜಾಬ್‌ಗೆ ಭೇಟಿ ನೀಡಲಿದ್ದಾರೆ. ಪಂಜಾಬ್‌ನಲ್ಲಿನ ಟಾಟಾ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆಗಾಗಿ ಮೊಹಾಲಿಗೆ ತೆರಳಿದ್ದಾರೆ. ಬಳಿಕ ದೆಹಲಿಗೆ ಮರಳಲಿರುವ ಮೋದಿ. ಸೆಪ್ಟೆಂಬರ್ 2 ರಂದು ಸರ್ಕಾರಿ ಅಧಿಕೃತ ಕಾರ್ಯಕ್ರಮಕ್ಕಾಗಿ ಮಂಗಳೂರಿಗೆ ಆಗಮಿಸುವ ಸಾಧ್ಯತೆಗಳಿವೆ.