ಆಸ್ಪ್ರೇಲಿಯಾದಲ್ಲಿ ದೇಗುಲಗಳ ಮೇಲಿನ ದಾಳಿಗೆ ಪ್ರಧಾನಿ ಮೋದಿ ಆಕ್ಷೇಪ

Published : Mar 11, 2023, 06:55 AM IST
ಆಸ್ಪ್ರೇಲಿಯಾದಲ್ಲಿ ದೇಗುಲಗಳ ಮೇಲಿನ ದಾಳಿಗೆ ಪ್ರಧಾನಿ ಮೋದಿ ಆಕ್ಷೇಪ

ಸಾರಾಂಶ

ಇತ್ತೀಚೆಗೆ ಆಸ್ಪ್ರೇಲಿಯಾದಲ್ಲಿ ನಡೆಯುತ್ತಿರುವ ದೇವಾಲಯಗಳ ಮೇಲಿನ ದಾಳಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭಾರತದ ಪ್ರವಾಸದಲ್ಲಿರುವ ಆಸ್ಪ್ರೇಲಿಯಾ ಪ್ರಧಾನಿ ಆ್ಯಂಟನಿ ಅಲ್ಬನೀಸ್‌ ಸಮ್ಮುಖದಲ್ಲೇ ಮೋದಿ ಈ ಕುರಿತು ಆಕ್ಷೇಪಿಸಿದ್ದಾರೆ. 

ನವದೆಹಲಿ (ಮಾ.11): ಇತ್ತೀಚೆಗೆ ಆಸ್ಪ್ರೇಲಿಯಾದಲ್ಲಿ ನಡೆಯುತ್ತಿರುವ ದೇವಾಲಯಗಳ ಮೇಲಿನ ದಾಳಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭಾರತದ ಪ್ರವಾಸದಲ್ಲಿರುವ ಆಸ್ಪ್ರೇಲಿಯಾ ಪ್ರಧಾನಿ ಆ್ಯಂಟನಿ ಅಲ್ಬನೀಸ್‌ ಸಮ್ಮುಖದಲ್ಲೇ ಮೋದಿ ಈ ಕುರಿತು ಆಕ್ಷೇಪಿಸಿದ್ದಾರೆ. ಇದೇ ವೇಳೆ ಉಭಯ ದೇಶಗಳ ನಡುವೆ ನಾಲ್ಕು ಮಹತ್ವದ ಒಪ್ಪಂದಗಳಿಗೂ ಸಹಿ ಹಾಕಲಾಗಿದೆ.

ಶುಕ್ರವಾರ ಉಭಯ ನಾಯಕರ ನಡುವಿನ ಮಾತುಕತೆಯ ಬಳಿಕ ಪ್ರಧಾನಿ ಮೋದಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ, ‘ಆಸ್ಪ್ರೇಲಿಯಾದಲ್ಲಿ ಕಳೆದ ಕೆಲವು ವಾರಗಳಿಂದ ನಿರಂತರವಾಗಿ ದೇವಾಲಯಗಳ ಮೇಲೆ ದಾಳಿ ನಡೆಯುತ್ತಿರುವ ಸುದ್ದಿಗಳು ಬರುತ್ತಿವೆ. ಇದು ವಿಷಾದನೀಯ. ಇಂತಹ ವಿಷಯಗಳು ಸಹಜವಾಗಿಯೇ ಭಾರತದಲ್ಲಿ ಎಲ್ಲರಿಗೂ ಕಳವಳ ಉಂಟುಮಾಡುತ್ತವೆ. 

2022ರ ಆರ್ಥಿಕ ವರ್ಷದಲ್ಲಿ ಪ್ರಧಾನಿ ಮೋದಿ ಆಸ್ತಿ, ಸಂಭಾವನೆ, ಬ್ಯಾಂಕ್ ಬ್ಯಾಲೆನ್ಸ್ ಎಷ್ಟಿದೆ?

ಜೊತೆಗೆ, ನಮ್ಮ ಮನಸ್ಸನ್ನು ವಿಚಲಿತಗೊಳಿಸುತ್ತವೆ. ಹೀಗಾಗಿ ಆಸ್ಪ್ರೇಲಿಯಾದಲ್ಲಿರುವ ಭಾರತೀಯ ಸಮುದಾಯಕ್ಕೆ ಭದ್ರತೆ ಒದಗಿಸುವಂತೆ ಪ್ರಧಾನಿ ಅಲ್ಬನೀಸ್‌ ಬಳಿ ಮನವಿ ಮಾಡಿದ್ದೇನೆ’ ಎಂದು ಹೇಳಿದರು. ಇತ್ತೀಚೆಗೆ ಖಲಿಸ್ತಾನಿ ಪರ ಉಗ್ರರು ಆಸ್ಪ್ರೇಲಿಯಾದ ಅನೇಕ ದೇಗುಲಗಳ ಮೇಲೆ ಭಾರತ ಹಾಗೂ ಮೋದಿ ವಿರೋಧಿ ಬರಹ ಬರೆದಿದ್ದರು. ಖಲಿಸ್ತಾನಿ ರಾಷ್ಟ್ರ ಪರ ಘೋಷಣೆಗಳನ್ನೂ ಗೀಚಿದ್ದರು.

ಒಪ್ಪಂದಕೆ ಸಹಿ: ಇದಕ್ಕೂ ಮುನ್ನ ಉಭಯ ದೇಶಗಳು ಕ್ರೀಡೆ, ಸೃಜನಶೀಲತೆ, ಆಡಿಯೋ-ವಿಷುವಲ್‌ ಪ್ರೊಡಕ್ಷನ್‌ ಮತ್ತು ಸೌರಶಕ್ತಿ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ನಾಲ್ಕು ಮಹತ್ವದ ಒಪ್ಪಂದಗಳಿಗೆ ಮೋದಿ ಹಾಗೂ ಅಲ್ಬನೀಸ್‌ ಸಮ್ಮುಖದಲ್ಲಿ ಸಹಿ ಹಾಕಲಾಯಿತು. ಜೊತೆಗೆ ಉಭಯ ಪ್ರಧಾನಿಗಳ ನಡುವೆ ಸ್ವಚ್ಛ ಇಂಧನ, ವ್ಯಾಪಾರ ಮತ್ತು ಹೂಡಿಕೆ, ರಕ್ಷಣಾ ಕ್ಷೇತ್ರ, ಪ್ರಮುಖ ಖನಿಜಗಳು, ವಲಸೆ, ಪೂರೈಕೆ, ಶಿಕ್ಷಣ, ಸಂಸ್ಕೃತಿ ಮತ್ತು ಕ್ರೀಡೆಯ ಬಗ್ಗೆ ಮಾತುಕತೆ ನಡೆಯಿತು. 

ಓಯೋ ರೂಮ್ಸ್ ಸಂಸ್ಥಾಪಕನ ತಂದೆ ದುರಂತ ಅಂತ್ಯ, 20ನೇ ಮಹಡಿಯಿಂದ ಬಿದ್ದು ಸಾವು!

ಜೊತೆಗೆ ಇಂಡೋ-ಪೆಸಿಫಿಕ್‌ ವಲಯದಲ್ಲಿ ಹೆಚ್ಚುತ್ತಿರುವ ಚೀನಾದ ಮಿಲಿಟರಿ ಚಟುವಟಿಕೆಗಳ ಬಗ್ಗೆಯೂ ಚರ್ಚೆ ನಡೆಯಿತು ಎಂದು ಹೇಳಲಾಗಿದೆ. ಆಸ್ಪ್ರೇಲಿಯಾ ಪ್ರಧಾನಿ ಅಲ್ಬನೀಸ್‌ ಮಾತನಾಡಿ, ಭಾರತದ ಜೊತೆಗಿನ ದ್ವಿಪಕ್ಷೀಯ ಸಹಕಾರ ಒಪ್ಪಂದಗಳು ಉತ್ತಮ ದಿಸೆಯಲ್ಲಿ ಸಾಗುತ್ತಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Morphing Wing: ಹಾರಾಡುವಾಗಲೇ ಕ್ಷಣ ಮಾತ್ರದಲ್ಲಿ ಬದಲಾಗುತ್ತೆ ಫೈಟರ್‌ ಜೆಟ್‌ ಶೇಪ್‌, ಹೊಸ ಟೆಕ್ನಾಲಜಿ ಪರೀಕ್ಷಿಸಿದ ಡಿಆರ್‌ಡಿಓ
ವೈರಲ್ ಮೀಮ್ಸ್ ಆಗಿದ್ದ ಯುವಕನ ಫೋಟೋದ ಹಿಂದಿದೆ ನೋವಿನ ಕತೆ: 38 ವರ್ಷ ಬರೀ ದ್ರವಾಹಾರದಲ್ಲೇ ಬದುಕಿದ್ದ ಪಂಚಾಲ್