
ನವದೆಹಲಿ(ಫೆ. 10) ಆರ್‌ಎಸ್‌ಎಸ್ ಹಿರಿಯ ನಾಯಕ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಆತ್ಮೀಯ ಸ್ನೇಹಿತ ಹರಿಭಾಯಿ ಆಧುನಿಕ್ (88 )ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತ ಇದ್ದರು.
ದ್ವಾರಕಾದ ಪ್ರಸಿದ್ಧ ದ್ವಾರಕಾಧೀಶ್ ದೇವಾಲಯದ ಆಡಳಿತ ಸಮಿತಿಯ ಸದಸ್ಯರಾಗಿದ್ದ ಹರಿಭಾಯ್ ನಾಯಕ್ ಬುಧವಾರ ಬೆಳಿಗ್ಗೆ ರಾಜ್‌ಕೋಟ್‌ನಲ್ಲಿರುವ ತಮ್ಮ ಮಗಳ ನಿವಾಸದಲ್ಲಿ ಕೊನೆಯುಸಿರೆಳೆದರು.
ದೇಶದ ಜನರಿಗೆ ಶಕ್ತಿ ತುಂಬಿದ ಮೋದಿ ಮಾತು
ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್), ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಯ ಸದಸ್ಯರಾಗಿ ಗುರುತಿಸಿಕೊಂಡಿದ್ದರು. ಜನಸಂಘದ ಕಾಲದಿಂದಲೂ ಜತೆಗಿದ್ದರು.
ಪ್ರಧಾನಿ ನರೇಂದ್ರ ಮೋದಿ ದ್ವಾರಕೆಗೆ ಭೇಟಿ ನೀಡಿದಾಘ ಆತ್ಮೀಯವಾಗಿ ಸ್ವಾಗತ ಮಾಡಿಕೊಳ್ಳುತ್ತಿದ್ದರು. ಸರಳ ಜೀವನನ ನಡೆಸುತ್ತಿದ್ದ ಉದಾತ್ತ ಚಿಂತನೆಯ ನಾಯಕ ಎಂದೇ ಹೆಸರು ಪಡೆದುಕೊಂಡಿದ್ದರು. ಗುರುವಾರ ಸಂಜೆ ದ್ವಾರಕಾದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಅನೇಕ ನಾಯಕರು ಕಂಬನಿ ಮಿಡಿದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ