ಫ್ರಾನ್ಸ್ ಅಧ್ಯಕ್ಷರೊಂದಿಗೆ ಮೋದಿ ದೂರವಾಣಿ ಮಾತುಕತೆ, ಭಯೋತ್ಪಾದನೆ ಹತ್ತಿಕ್ಕಲು ಚರ್ಚೆ!

Published : Sep 21, 2021, 08:50 PM IST
ಫ್ರಾನ್ಸ್ ಅಧ್ಯಕ್ಷರೊಂದಿಗೆ ಮೋದಿ ದೂರವಾಣಿ ಮಾತುಕತೆ, ಭಯೋತ್ಪಾದನೆ ಹತ್ತಿಕ್ಕಲು ಚರ್ಚೆ!

ಸಾರಾಂಶ

ಭಯೋತ್ಪಾದನೆ,ಮಾದಕ ದ್ರವ್ಯಗಳು, ಅಕ್ರಮ ಶಸ್ತ್ರಾಸ್ತ್ರ ವಿರುದ್ಧ ಕ್ರಮ ಮಕ್ಕಳ ಹಕ್ಕು ರಕ್ಷಣೆಗೆ ಅಗತ್ಯ ಕ್ರಮಗಳ ಕುರಿತು ಮೋದಿ ಚರ್ಚೆ ದ್ವಿಪಕ್ಷೀಯ ಸಹಯೋಗ ಭಾರತ-ಫ್ರಾನ್ಸ್ ಪಾಲುದಾರಿಕೆ ಕುರಿತು ಚರ್ಚೆ

ನವದೆಹಲಿ(ಸೆ.21): ಭಯೋತ್ಪಾದನೆ ಎಲ್ಲಾ ದೇಶಕ್ಕೆ ಅತೀ ದೊಡ್ಡ ಸವಾಲಾಗಿ ಪರಿಣಮಿಸಿದೆ. ಇದರ ಜೊತೆಗೆ ಮಾದಕ ದ್ರವ್ಯಗಳು, ಅಕ್ರಮ ಶಸ್ತ್ರಾಸ್ತ್ರಗಳು ಮತ್ತು ಮಾನವ ಕಳ್ಳಸಾಗಾಣಿಕೆಯೂ ದೇಶದ ಭದ್ರತಗೆ ಸವಾಲಾಗಿ ಪರಿಣಮಿಸುತ್ತಿದೆ. ಈ ವಿಚಾರ ಕುರಿತು ಪ್ರಧಾನಿ ನರೇಂದ್ರ ಮೋದಿ, ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರಾನ್ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.

ರಕ್ಷಣಾ ಪಡೆಯ 7,000 ಉದ್ಯೋಗಿಗಳಿಗೆ 2 ಐಷಾರಾಮಿ ಕಾಂಪ್ಲೆಕ್ಸ್, ಮೋದಿಯಿಂದ ಉದ್ಘಾಟನೆ!

ಅಫ್ಘಾನಿಸ್ತಾನದ ಇತ್ತೀಚಿನ ಬೆಳವಣಿಗೆಗಳು ಸೇರಿದಂತೆ ಪ್ರಾದೇಶಿಕ ವಿಷಯಗಳ ಬಗ್ಗೆ ಉಭಯ ನಾಯಕರು ಚರ್ಚಿಸಿದರು. ಈ ನಿಟ್ಟಿನಲ್ಲಿ ಭಯೋತ್ಪಾದನೆ, ಮಾದಕ ದ್ರವ್ಯಗಳು, ಅಕ್ರಮ ಶಸ್ತ್ರಾಸ್ತ್ರಗಳು ಮತ್ತು ಮಾನವ ಕಳ್ಳಸಾಗಾಣಿಕೆ ಬಗ್ಗೆ ಉಭಯ ನಾಯಕರೂ ಪರಸ್ಪರ ಕಳವಳ ವ್ಯಕ್ತಪಡಿಸಿದರು. ಜೊತೆಗೆ ಮಾನವ ಹಕ್ಕುಗಳು, ಮಹಿಳೆಯರು ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸಬೇಕಾದ ಅಗತ್ಯದ ಬಗ್ಗೆ ಅವರು ಮಾತನಾಡಿದರು

ಇಂಡೋ-ಪೆಸಿಫಿಕ್ ವಲಯದಲ್ಲಿ ಹೆಚ್ಚುತ್ತಿರುವ ದ್ವಿಪಕ್ಷೀಯ ಸಹಯೋಗ ಮತ್ತು ಈ ಪ್ರದೇಶದಲ್ಲಿ ಸ್ಥಿರತೆ ಮತ್ತು ಭದ್ರತೆಯನ್ನು ಉತ್ತೇಜಿಸುವಲ್ಲಿ ಭಾರತ-ಫ್ರಾನ್ಸ್ ಪಾಲುದಾರಿಕೆ ವಹಿಸುವ ಪ್ರಮುಖ ಪಾತ್ರವನ್ನು ಉಭಯ ನಾಯಕರು ಪರಿಶೀಲಿಸಿದರು.

ತಾಲಿಬಾನ್‌ ವಿರುದ್ಧ ಒಂದಾದ ರಷ್ಯಾ- ಭಾರತ; ಜಗತ್ತಿಗೆ ಕ್ಯಾಪ್ಟನ್ ಆಗುತ್ತಾ ಭಾರತ..?

ಉಭಯ ದೇಶಗಳು ಆಳವಾಗಿ ಆದರಿಸುವ ʻಭಾರತ-ಫ್ರಾನ್ಸ್ ವ್ಯೂಹಾತ್ಮಕ ಪಾಲುದಾರಿಕೆʼಯ ಸ್ಫೂರ್ತಿಯೊಂದಿಗೆ ನಿಕಟ ಮತ್ತು ನಿಯಮಿತ ಸಮಾಲೋಚನೆಗಳನ್ನು ಮುಂದುವರಿಸಲು ನಾಯಕರು ಪರಸ್ಪರ ಸಮ್ಮತಿಸಿದರು.

ಆಫ್ಘಾನಿಸ್ತಾನದಲ್ಲಿನ ಭಯೋತ್ಪಾದನೆ ಹೆಚ್ಚಾಗುತ್ತಿದೆ. ಇದಕ್ಕೆ ಪಾಕಿಸ್ತಾನ ನೆರವು ನೀಡುತ್ತಿದೆ. ಪಾಕಿಸ್ತಾನ ಬೆಂಬಲಿತ ತಾಲಿಬಾನ್ ಉಗ್ರರ ಆಡಳಿತ ಆಫ್ಘಾನಿಸ್ತಾನದಲ್ಲಿ ಅಸ್ತಿತ್ವಕ್ಕೆ ಬಂದಿದೆ. ಇದು ಭಾರತಕ್ಕೆ ಅತೀ ದೊಡ್ಡ ಸವಾಲಾಗಿದೆ. ಕಾರಣ ಕಾಶ್ಮೀರ ಕಣಿವೆಯಲ್ಲಿ ಉಗ್ರ ಚಟುವಟಿಕೆಯನ್ನು ಜೀವಂತವಾಗಿರಿಸಲು ಪ್ರಯತ್ನಿಸುತ್ತಿರುವ ಪಾಕಿಸ್ತಾನ ಇದೀಗ ತಾಲಿಬಾನ್ ನೆರವಿನೊಂದಿಗೆ ಕೃತ್ಯ ಎಸಗಲು ಸಜ್ಜಾಗಿದೆ.

ಭಾರತದಲ್ಲಿ ಮಾದಕ ವಸ್ತುಗಳ ಕಳ್ಳ ಸಾಗಾಣೆ ಕೂಡ ಸಮಸ್ಯೆಯಾಗಿದೆ. ಈಗಾಗಲೇ ಆಫ್ಘಾನಿಸ್ತಾನದಿಂದ ಕಳ್ಳ ಸಾಗಾಣಿಕೆ ಮೂಲಕ ಭಾರತದ ಗುಜರಾತ್ ಪ್ರವೇಶಿಸಿದ ಮಾದಕ ವಸ್ತುವನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದೆ. ಇದು ಭಾರತದ ಮಾತ್ರವಲ್ಲ, ಫ್ರಾನ್ಸ್ ಸೇರಿದಂತೆ ಹಲವು ದೇಶಗಳು ಎದುರಿಸುತ್ತಿರುವ ಜ್ವಲಂತ ಸಮಸ್ಯೆಯಾಗಿ ಪರಿಣಿಮಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?