ಸಿಡಿಲಿನಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಮೋದಿ

By Suvarna NewsFirst Published Jul 12, 2021, 2:32 PM IST
Highlights
  • ಸಿಡಿಲಿನಿಂದ 40ಕ್ಕೂ ಹೆಚ್ಚು ಜನರು ಸಾವು
  • ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

ದೆಹಲಿ(ಜು.12): ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದ ಕೆಲವು ಭಾಗಗಳಲ್ಲಿ ಸಿಡಿಲಿನಿಂದ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪರಿಹಾರ ಘೋಷಿಸಿದ್ದಾರೆ.

ಪಿಎಂ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ತಲಾ ₹ 2 ಲಕ್ಷ ಪರಿಹಾರ ನೀಡುವುದಾಗಿ ಮತ್ತು.ಮೂರು ರಾಜ್ಯಗಳಲ್ಲಿ ಮಿಂಚಿನಿಂದ ಗಾಯಗೊಂಡ ವ್ಯಕ್ತಿಗಳಿಗೆ ₹ 50,000 ಪರಿಹಾ ನೀಡಲಾಗುವುದು ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

20 ಜನ ಸಿಡಿಲಿಗೆ ಬಲಿ, ಇವರಲ್ಲಿ 11 ಜನರೂ ಸೆಲ್ಫೀ ತೆಗೀತಿದ್ರು..!

ಉತ್ತರ ಪ್ರದೇಶದ 11 ಜಿಲ್ಲೆಗಳಲ್ಲಿ ಭಾನುವಾರ ಸಂಭವಿಸಿದ ಪ್ರತ್ಯೇಕ ಮಿಂಚಿನ ಘಟನೆಗಳಲ್ಲಿ ಕನಿಷ್ಠ 40 ಜನರು ಸಾವನ್ನಪ್ಪಿದ್ದಾರೆ. ಕಾನ್ಪುರ ಮತ್ತು ಪಕ್ಕದ ಜಿಲ್ಲೆಗಳಲ್ಲಿ ಹದಿನೆಂಟು ಜನರು ಸಾವನ್ನಪ್ಪಿದ್ದರೆ, ಪ್ರಯಾಗರಾಜ್‌ನಲ್ಲಿ 14 ಜನರು ಸಾವನ್ನಪ್ಪಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೃತ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು, ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ಮೊತ್ತವನ್ನು ತಕ್ಷಣ ವಿತರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

PM has announced an ex-gratia of Rs. 2 lakh each from PMNRF to the next of kin of those who lost their lives due to lightning in parts of Rajasthan. Rs. 50,000 would be provided to the injured.

— PMO India (@PMOIndia)

ಮಧ್ಯಪ್ರದೇಶದ ಕೆಲವು ಭಾಗಗಳಲ್ಲಿ ಭಾನುವಾರ ಸಂಭವಿಸಿದ ಮಿಂಚಿನಿಂದ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ. ಈ ಪೈಕಿ ಶಿಯೋಪುರ್ ಮತ್ತು ಗ್ವಾಲಿಯರ್ ಜಿಲ್ಲೆಗಳಲ್ಲಿ ತಲಾ ಇಬ್ಬರು ಸಾವನ್ನಪ್ಪಿದ್ದಾರೆ

click me!