ಕೆಲಸ ಅರಸುತ್ತಿರುವ Freshersಗಳಿಗೆ ಪ್ರಧಾನಿ ಮೋದಿ ಗುಡ್‌ನ್ಯೂಸ್‌

Published : Aug 15, 2025, 10:35 AM IST
pm modi tax

ಸಾರಾಂಶ

ಪ್ರಧಾನಿ ಮೋದಿ 77ನೇ ಸ್ವಾತಂತ್ರೋತ್ಸವ ಭಾಷಣದಲ್ಲಿ ಯುವ ಉದ್ಯೋಗಾಕಾಂಕ್ಷಿಗಳಿಗೆ 15,000 ರೂ. ನೀಡುವ ಹೊಸ ಉದ್ಯೋಗ ಯೋಜನೆಯನ್ನು ಘೋಷಿಸಿದ್ದಾರೆ. ಈ ಯೋಜನೆಯು 3.5 ಕೋಟಿಗೂ ಹೆಚ್ಚು ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಗುರಿ ಹೊಂದಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕೆಂಪುಕೋಟೆಯಲ್ಲಿ 79ನೇ ಸ್ವಾತಂತ್ರ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ್ದು, ಈ ವೇಳೆ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಇದರಲ್ಲಿ ಮುಖ್ಯವಾಗಿ ಹೊಸದಾಗಿ ಉದ್ಯೋಗ ಅರಸುವ ಯುವ ಸಮುದಾಯಕ್ಕೆ ಯೋಜನೆಯೊಂದನ್ನು ಘೋಷಣೆ ಮಾಡಿದ್ದಾರೆ. ಪ್ರಧಾನ ಮಂತ್ರಿ ವಿಕ್ಷಿತ್ ಭಾರತ್ ರೋಜ್ಗಾರ್ ಯೋಜನೆ ಎಂಹ ಹೆಸರಿನ ಯೋಜನೆ ಘೋಷಣೆ ಮಾಡಿದ್ದು, ಇದರ ಅಡಿ ಖಾಸಗಿ ವಲಯದಲ್ಲಿ ಮೊದಲ ಉದ್ಯೋಗ ಪಡೆಯುವವರಿಗೆ ಕೇಂದ್ರದಿಂದ 15,000 ರೂ.ಗಳನ್ನು ನೀಡಲಾಗುವುದು ಎಂದು ಹೇಳಿದರು. 1 ಲಕ್ಷ ಕೋಟಿ ರೂಪಾಯಿಗಳ ಈ ಯೋಜನೆ ತಕ್ಷಣದಿಂದ ಜಾರಿಗೆ ಬರಲಿದ್ದು, 3.5 ಕೋಟಿಗೂ ಹೆಚ್ಚು ಜನರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಅವರು ಹೇಳಿದರು.

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಉದ್ಯೋಗ ಸಂಬಂಧಿತ ಪ್ರೋತ್ಸಾಹಕ (ಇಎಲ್‌ಐ) ಯೋಜನೆಯನ್ನು ಅನುಮೋದಿಸಿದೆ ಎಂದು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಕಳೆದ ತಿಂಗಳು ತಿಳಿಸಿತ್ತು. ಅದನ್ನು ಈಗ ಸ್ವಾತಂತ್ರ ದಿನಾಚರಣೆ ಸಂಭ್ರಮದ ವೇಳೆ ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ. ಜುಲೈ 25 ರಂದು ಬಿಡುಗಡೆಯಾದ ಹೇಳಿಕೆಯಲ್ಲಿ, ಪ್ರಧಾನ ಮಂತ್ರಿ ವಿಕ್ಷಿತ್ ಭಾರತ್ ರೋಜ್‌ಗಾರ್ ಯೋಜನೆ (PMVBRY) ಎರಡು ವರ್ಷಗಳಲ್ಲಿ 3.5 ಕೋಟಿಗೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸಲು ಪ್ರೋತ್ಸಾಹಿಸುವ ಗುರಿಯನ್ನು ಹೊಂದಿದೆ. ಈ ಪೈಕಿ 1.92 ಕೋಟಿ ಫಲಾನುಭವಿಗಳು ಮೊದಲ ಬಾರಿಗೆ ಉದ್ಯೋಗಕ್ಕೆ ಸೇರುವವರಾಗಿರುತ್ತಾರೆ ಎಂದು ಮಾಹಿತಿ ನೀಡಿದೆ.

ಈ ಹೆಸರು ಸರ್ಕಾರದ 'ವಿಕ್ಷಿತ್ ಭಾರತ್ ಉಪಕ್ರಮ'ಯೋಜನೆಯ ಒಟ್ಟಾರೆ ಉದ್ದೇಶಗಳಿಗೆ ಹೊಂದಿಕೆಯಾಗುತ್ತದೆ ಮತ್ತು ದೇಶದಲ್ಲಿ ಸಮಗ್ರ ಮತ್ತು ಸುಸ್ಥಿರ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಸರ್ಕಾರದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಕೇಂದ್ರ ಸಚಿವಾಲಯ ತಿಳಿಸಿದೆ. ಈ ಯೋಜನೆಯು ಎರಡು ಭಾಗಗಳನ್ನು ಒಳಗೊಂಡಿದೆ, ಮೊದಲನೇ ಭಾಗದಲ್ಲಿ ಮೊದಲ ಬಾರಿಗೆ ಕೆಲಸ ಮಾಡುವವರ ಮೇಲೆ ಗಮನ ಕೇಂದ್ರೀಕೃತವಾಗಿದೆ ಹಾಗೂ ಭಾಗ 2 ಉದ್ಯೋಗದಾತರ ಮೇಲೆ ಕೇಂದ್ರೀಕೃತವಾಗಿದೆ.

ಮೊದಲ ಬಾರಿಗೆ ಕೆಲಸ ಮಾಡುವವರಿಗೆ ಪ್ರೋತ್ಸಾಹ ಧನ

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ)ಯಲ್ಲಿ ನೋಂದಾಯಿಸಿಕೊಂಡ ಮೊದಲ ಬಾರಿಯ ಅಂದರೆ ಶಿಕ್ಷಣದ ನಂತರ ಹೊಸದಾಗಿ ಕೆಲಸ ಆರಂಭಿಸಿದ ಉದ್ಯೋಗಿಗಳನ್ನು ಗುರಿಯಾಗಿಸಿಕೊಂಡು, ಭಾಗ ಎ ಒಂದು ತಿಂಗಳ ಇಪಿಎಫ್ ವೇತನವನ್ನು ಎರಡು ಕಂತುಗಳಲ್ಲಿ 15,000 ರೂ.ಗಳವರೆಗೆ ನೀಡುತ್ತದೆ. ಈ ಯೋಜನೆಗೆ 1 ಲಕ್ಷ ರೂ.ವರೆಗೆ ಸಂಬಳ ಪಡೆಯುವ ಉದ್ಯೋಗಿಗಳು ಅರ್ಹರಾಗಿರುತ್ತಾರೆ. ಮೊದಲ ಕಂತನ್ನು ಆರು ತಿಂಗಳ ಸೇವೆಯ ನಂತರ ಪಾವತಿಸಲಾಗುತ್ತದೆ ಮತ್ತು ಎರಡನೇ ಕಂತನ್ನು 12 ತಿಂಗಳ ಸೇವೆಯ ನಂತರ ಮತ್ತು ಉದ್ಯೋಗಿ ಆರ್ಥಿಕ ಸಾಕ್ಷರತಾ ಕಾರ್ಯಕ್ರಮವನ್ನು(financial literacy programme) ಪೂರ್ಣಗೊಳಿಸಿದ ನಂತರ ಪಾವತಿಸಲಾಗುತ್ತದೆ.

ಉಳಿತಾಯ ಮಾಡುವ ಗುಣವನ್ನು ಉತ್ತೇಜಿಸಲು, ಪ್ರೋತ್ಸಾಹದ ಒಂದು ಭಾಗವನ್ನು ಉಳಿತಾಯ ಸಾಧನ ಅಥವಾ ಠೇವಣಿ ಖಾತೆಯಲ್ಲಿ ನಿಗದಿತ ಅವಧಿಗೆ ಇಡಲಾಗುತ್ತದೆ ಮತ್ತು ನಂತರದ ದಿನಾಂಕದಂದು ಉದ್ಯೋಗಿ ಅದನ್ನು ಹಿಂಪಡೆಯಬಹುದಾಗಿದೆ. ಮೊದಲ ಬಾರಿಗೆ ಉದ್ಯೋಗಿಗಳಿಗೆ ಎಲ್ಲಾ ಪಾವತಿಗಳನ್ನು ಆಧಾರ್ ಬ್ರಿಡ್ಜ್ ಪಾವತಿ ವ್ಯವಸ್ಥೆ (ABPS)ಬಳಸಿಕೊಂಡು DBT (Direct Benefit Transfer) ವಿಧಾನದ ಮೂಲಕ ಮಾಡಲಾಗುತ್ತದೆ.

ಭಾಗ ಬಿಯಲ್ಲಿ ಉದ್ಯೋಗದಾತರು ತಮ್ಮ ಸಂಸ್ಥೆಯ ಎಲ್ಲಾ ವಲಯಗಳಲ್ಲಿ ಹೆಚ್ಚುವರಿ ಉದ್ಯೋಗ ಸೃಷ್ಟಿ ಹಾಗೂ ಉತ್ಪಾದನಾ ವಲಯದ ಮೇಲೆ ವಿಶೇಷ ಗಮನ ನೀಡಲಾಗುತ್ತದೆ. 1 ಲಕ್ಷ ರೂ.ವರೆಗಿನ ಸಂಬಳ ಪಡೆಯುವ ಉದ್ಯೋಗಿಗಳಿಗೆ ಸಂಬಂಧಿಸಿದಂತೆ ಉದ್ಯೋಗದಾತರು ಪ್ರೋತ್ಸಾಹ ಧನವನ್ನು ಪಡೆಯುತ್ತಾರೆ.

ಕನಿಷ್ಠ ಆರು ತಿಂಗಳ ಕಾಲ ನಿರಂತರ ಉದ್ಯೋಗ ಹೊಂದಿರುವ ಪ್ರತಿ ಹೆಚ್ಚುವರಿ ಉದ್ಯೋಗಿಗೆ ಎರಡು ವರ್ಷಗಳವರೆಗೆ ಕೇಂದ್ರವು ಉದ್ಯೋಗದಾತರಿಗೆ ತಿಂಗಳಿಗೆ ರೂ 3,000 ವರೆಗೆ ಪ್ರೋತ್ಸಾಹ ಧನ ನೀಡುತ್ತದೆ. ಉತ್ಪಾದನಾ ವಲಯಕ್ಕೆ, ಪ್ರೋತ್ಸಾಹ ಧನವನ್ನು ಮೂರನೇ ಮತ್ತು ನಾಲ್ಕನೇ ವರ್ಷಗಳವರೆಗೆ ವಿಸ್ತರಿಸುತ್ತದೆ.

ಇಪಿಎಫ್‌ಒದಲ್ಲಿ ನೋಂದಾಯಿಸಲಾದ ಸಂಸ್ಥೆಗಳು ಕನಿಷ್ಠ ಆರು ತಿಂಗಳವರೆಗೆ ನಿರಂತರವಾಗಿ ಕನಿಷ್ಠ ಇಬ್ಬರು ಹೆಚ್ಚುವರಿ ಉದ್ಯೋಗಿಗಳನ್ನು (50 ಕ್ಕಿಂತ ಕಡಿಮೆ ಉದ್ಯೋಗಿಗಳನ್ನು ಹೊಂದಿರುವ ಉದ್ಯೋಗದಾತರಿಗೆ) ಅಥವಾ ಐದು ಹೆಚ್ಚುವರಿ ಉದ್ಯೋಗಿಗಳನ್ನು (50 ಅಥವಾ ಅದಕ್ಕಿಂತ ಹೆಚ್ಚಿನ ಉದ್ಯೋಗಿಗಳನ್ನು ಹೊಂದಿರುವ ಉದ್ಯೋಗದಾತರಿಗೆ) ನೇಮಿಸಿಕೊಳ್ಳಬೇಕಾಗುತ್ತದೆ ಎಂದು ಸಚಿವಾಲಯ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
ಪುಟಿನ್ ಔತಣಕೂಟಕ್ಕೆ ರಾಹುಲ್ ಗಾಂಧಿ-ಖರ್ಗೆಗಿಲ್ಲ ಆಮಂತ್ರಣ, ಶಶಿ ತರೂರ್‌ಗೆ ಜಾಕ್‌ಪಾಟ್