ತೆಲಂಗಾಣದಲ್ಲಿ ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಬಾಲಕಿ ಗರ್ಭಿಣಿ

By Ravi Janekal  |  First Published Sep 9, 2024, 8:28 PM IST

ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಮೂವರು ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ನಡೆದಿದ್ದು, ಇದೀಗ ಬಾಲಕಿ ಗರ್ಭಿಣಿಯಾಗಿರುವ ವಿಚಾರ ಪೋಷಕರಿಗೆ ಆಘಾತಕ್ಕೊಳಗಾಗಿದ್ದಾರೆ


ತೆಲಂಗಾಣ (ಸೆ.9): ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಮೂವರು ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ನಡೆದಿದ್ದು, ಇದೀಗ ಬಾಲಕಿ ಗರ್ಭಿಣಿಯಾಗಿರುವ ವಿಚಾರ ಪೋಷಕರಿಗೆ ಆಘಾತಕ್ಕೊಳಗಾಗಿದ್ದಾರೆ.

ದುಬಕ್ಕ ಮಂಡಲದ ಒಬ್ಬ, ಅಕ್ಬರ್‌ಪೇಟ್-ಭೂಂಪಲ್ಲಿ ಮಂಡಲದ ಇಬ್ಬರು ಸೇರಿದಂತೆ ಒಟ್ಟು ಮೂವರು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಸಂತ್ರಸ್ತೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಘಟನೆ ಸಂಬಂಧ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಗಳ ವಿರುದ್ಧ ಫೋಕ್ಸೊ ಕೇಸ್ ದಾಖಲಿಸಿ ತನಿಖೆಗೆ ಮುಂದಾಗಿರುವ ಪೊಲೀಸರು.

Tap to resize

Latest Videos

ಶಿವಸೇನೆಯಿಂದ ಮುಸ್ಲಿಂ ಮಹಿಳೆಯರಿಗೆ ಉಚಿತ ಬುರ್ಖಾ ಹಂಚಿಕೆ; ಶಿಂಧೆ ಬಣದ ವಿರುದ್ಧ ಸಂಜಯ್ ರಾವುತ್ ಕೆಂಡ!

ಪೊಲೀಸ್ ಅಧಿಕಾರಿಗಳು ಹೇಳುವಂತೆ, ತೆಲಂಗಾಣದ ದುಬ್ಬಕ್ಕ ಮಂಡಲ ಗ್ರಾಮದ ವಿದ್ಯಾರ್ಥಿನಿಯಾಗಿರುವ  ಸಂತ್ರಸ್ತೆ. ಬಾಲಕಿಯ ತಂದೆ ತೀರಿಕೊಂಡಿದ್ದು, ತಾಯಿ ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡ ಕಾರ್ಮಿಕರು. ವಿದ್ಯಾರ್ಥಿನಿ ತಾಯಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದಂತೆ ಮನೆಗೆ ಬರುತ್ತಿದ್ದ ಆರೋಪಿಗಳು. ಮಾರ್ಚ್, ಏಪ್ರಿಲ್ ತಿಂಗಳಲ್ಲಿ ಮನೆಯಲ್ಲಿ ವಿದ್ಯಾರ್ಥಿನಿ ತಾಯಿ ಇಲ್ಲದ ಸಮಯ ನೋಡಿಕೊಂಡು ಬರುತ್ತಿದ್ದ ಆರೋಪಿಗಳು ವಿದ್ಯಾರ್ಥಿನಿಗೆ ಆಸೆ ಆಮಿಷೆ ತೋರಿಸಿ ನಿರಂತರವಾಗಿ ಅತ್ಯಾಚಾರವೆಸಗಿದ್ದಾರೆ. ಅದರ ಪರಿಣಾಮ ಬಾಲಕಿಗೆ ಇತ್ತೀಚೆಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಹೊಟ್ಟೆ ನೋವಾಗುತ್ತಿರುವ ಬಗ್ಗೆ ಪೋಷಕರಿಗೆ ತಿಳಿಸಿರುವ ವಿದ್ಯಾರ್ಥಿನಿ. ಹೀಗಾಗಿ ಪೋಷಕರು ಆಸ್ಪತ್ರೆಗೆ ಕರೆದೊಯ್ದಾಗ ಗರ್ಭಿಣಿಯಾಗಿರುವ ಸತ್ಯ ಬೆಳಕಿಗೆ ಬಂದಿದೆ.

ಉಜ್ಜಯಿನಿ ಮಹಾಕಾಳಿ ನೆಲದಲ್ಲೂ ಹೆಣ್ಮಕ್ಕಳು ಸೇಫ್ ಇಲ್ವಾ? ಚಿಂದಿ ಆಯುವ ಮಹಿಳೆಗೆ ಮದ್ಯ ಕುಡಿಸಿ ಫುಟ್‌ಪಾತ್‌ನಲ್ಲೇ ಅತ್ಯಾಚಾರ!

ಸದ್ಯ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಘಟನೆ ಸಂಬಂಧ ಓರ್ವ ಆರೋಪಿಯನ್ನ ಬಂಧಿಸಿ ತಲೆಮರೆಸಿಕೊಂಡಿರುವ  ಆರೋಪಿಗಳ ಪತ್ತೆಗೆ ಮುಂದಾಗಿರುವ ಪೊಲೀಸರು.

click me!