ಹೊಸದಿಲ್ಲಿ: ರಾಜಸ್ಥಾನದ ಉದಯಪುರದಲ್ಲಿ ಟೈಲರ್‌ನನ್ನು ಶಿರಚ್ಛೇದ ಮಾಡಿ ಹತ್ಯೆಗೈದ ಇಬ್ಬರು ಹಂತಕರು ಪೊಲೀಸರಿಗೆ ಸಿಕ್ಕಿ ಬೀಳುವ ಮುನ್ನ ಬೈಕ್‌ನಲ್ಲಿ ಪರಾರಿಯಾಗಲು ಯತ್ನಿಸುತ್ತಿರುವ ವಿಡಿಯೋ ಎಂದು ಹೇಳಲಾಗುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಹೊಸದಿಲ್ಲಿ: ರಾಜಸ್ಥಾನದ ಉದಯಪುರದಲ್ಲಿ ಟೈಲರ್‌ನನ್ನು ಶಿರಚ್ಛೇದ ಮಾಡಿ ಹತ್ಯೆಗೈದ ಇಬ್ಬರು ಹಂತಕರು ಪೊಲೀಸರಿಗೆ ಸಿಕ್ಕಿ ಬೀಳುವ ಮುನ್ನ ಬೈಕ್‌ನಲ್ಲಿ ಪರಾರಿಯಾಗಲು ಯತ್ನಿಸುತ್ತಿರುವ ವಿಡಿಯೋ ಎಂದು ಹೇಳಲಾಗುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಪ್ರವಾದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಬಿಜೆಪಿ ನಾಯಕಿ ನೂಪುರ್ ಶರ್ಮಾ ಪರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾನೆ ಎಂದು ಆರೋಪಿಸಿ ಟೈಲರ್ ವೃತ್ತಿ ನಡೆಸುತ್ತಿದ್ದ ಕನ್ಹಯ್ಯಾ ಲಾಲ್ ಎಂಬ ವ್ಯಕ್ತಿಯನ್ನು ಮುಸ್ಲಿಂ ಆತಂಕವಾದಿಗಳು ಐಸಿಸ್ ಮಾದರಿಯಲ್ಲಿ ಶಿರಚ್ಛೇದನ ಮಾಡಿ ಹತ್ಯೆಗೈದಿದ್ದರು. ರಾಜಸ್ಥಾನದ ಉದಯಪುರ ನಗರದ ಧನ್ ಮಂಡಿ ಪ್ರದೇಶದಲ್ಲಿ ಈ ಭಯಾನಕ ಘಟನೆ ನಡೆದಿತ್ತು.
ಹತ್ಯೆ ಮಾಡಿದ ನಂತರ ಇಬ್ಬರು ವ್ಯಕ್ತಿಗಳು ಕನ್ಹಯ್ಯಾ ಲಾಲ್‌ನನ್ನು ಕೊಂದು ಇಸ್ಲಾಂ ಧರ್ಮಕ್ಕೆ ಮಾಡಿದ ಅವಮಾನಕ್ಕೆ ಪ್ರತೀಕಾರ ತೀರಿಸಿಕೊಳ್ಳುತ್ತಿದ್ದಾರೆ ಎಂದು ಹೇಳುವ ವೀಡಿಯೊಗಳನ್ನು ನಿನ್ನೆ ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಿದ್ದರು. ಆರೋಪಿಗಳು ಕನ್ಹಯ್ಯಾ ಲಾಲ್ ಅವರ ಅಂಗಡಿಗೆ ಗ್ರಾಹಕರಂತೆ ಆಗಮಿಸಿದ್ದರು. ಕನ್ಹಯ್ಯಾ ಲಾಲ್ ಅಳತೆ ತೆಗೆದುಕೊಳ್ಳುತ್ತಿದ್ದಾಗ ಅವರಲ್ಲೊಬ್ಬ ಚಾಕುವಿನಿಂದ ದಾಳಿ ನಡೆಸಿದ್ದ. ನಂತರ ಅವರು ಕೊಲೆಯ ಭಯಾನಕ ದೃಶ್ಯವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು.
राजस्थान पुलिस ने उदयपुर हत्याकांड के दोनों हत्यारों को पकड़ लिया हैं ।
राजस्थान पुलिस ने मौक़े पर ही खातिरदारी की है। अभी और भी ख़ातिरदारी होनी है।
यह कांग्रेस शासित राजस्थान हैं यहाँ असामाजिक तत्व बिल्कुल भी बर्दाश्त नहीं किये जायेगे। pic.twitter.com/kBflQ0qzdB
ಘಟನೆಯ ಬಳಿಕ ಆರೋಪಿಗಳಾದ ರಿಯಾಜ್ ಅಖ್ತರಿ ಮತ್ತು ಘೌಸ್ ಮೊಹಮ್ಮದ್ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಂದು ವಿಡಿಯೋದಲ್ಲಿ ಈ ಹಂತಕರು ಪ್ರಧಾನಿ ನರೇಂದ್ರ ಮೋದಿ ಹಾಗೂ ಹಲವು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ ಹಾಕಿದ್ದಾರೆ. ಈ ಭಯಾನಕ ಘಟನೆಯ ತನಿಖೆ ಕೈಗೊಳ್ಳುವಂತೆ ಗೃಹ ಸಚಿವಾಲಯ (MHA) ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಗೆ ನಿರ್ದೇಶನ ನೀಡಿದೆ.
ಉದಯಪುರ ಹತ್ಯೆ ಖಂಡಿಸಿದ ಮುಸ್ಲಿಂ ಧರ್ಮಗುರುಗಳು, ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹ!
ಈ ಮಧ್ಯೆ ಹತ್ಯೆಯ ಬಳಿಕ ಇಬ್ಬರು ವ್ಯಕ್ತಿಗಳು ಮೋಟಾರ್ ಸೈಕಲ್‌ನಲ್ಲಿ ಪರಾರಿಯಾಗಲು ಪ್ರಯತ್ನಿಸುತ್ತಿದ್ದರು. ತಮ್ಮ ಮುಖವನ್ನು ಮುಚ್ಚಿ ತಲೆಗೆ ಹೆಲ್ಮೆಟ್ ಧರಿಸಿದ್ದರು. ಅವರಿಬ್ಬರನ್ನು ರಾಜ್‌ಸಮಂದ್ (Rajsamand) ಜಿಲ್ಲೆಯ ಭೀಮ್ ಪ್ರದೇಶದಿಂದ ಬಂಧಿಸಲಾಗಿದೆ ಎಂದು ರಾಜ್‌ಸಮಂದ್‌ನ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಚೌಧರಿ (Sudheer Chaudhary) ಹೇಳಿದ್ದಾರೆ. ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ಪೊಲೀಸರು ಬೆನ್ನಟ್ಟಿ ಸೆರೆ ಹಿಡಿದರು ಎನ್ನಲಾದ ಈ ವಿಡಿಯೋವನ್ನು ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ಸಂಯೋಜಕ ನಿತಿನ್ ಅಗರವಾಲ್ ಟ್ವೀಟ್ ಮಾಡಿದ್ದಾರೆ. ಟೈಲರ್ ಹತ್ಯೆಯೂ ರಾಜಸ್ಥಾನದ ಉದಯಪುರದಲ್ಲಿ ಉದ್ವಿಗ್ನತೆ ಸೃಷ್ಟಿಸಿದೆ.
ಉದಯಪುರ ಟೈಲರ್ ಹತ್ಯೆ ಭಯೋತ್ಪಾದಕ ಘಟನೆ ಎಂದ ಕೇಂದ್ರ, NIA ತಂಡ ರವಾನೆ!
ಕಾಂಗ್ರೆಸ್ ಆಡಳಿತದಲ್ಲಿ ರಾಜಸ್ತಾದನಲ್ಲಿ ರಾಜ್ಯದಾದ್ಯಂತ ಒಂದು ತಿಂಗಳ ಕಾಲ ದೊಡ್ಡ ಸಭೆಗಳನ್ನು ನಿಷೇಧಿಸಲು ಮತ್ತು 24 ಗಂಟೆಗಳ ಕಾಲ ಮೊಬೈಲ್ ಇಂಟರ್ನೆಟ್ ಅನ್ನು ಬಂದ್ ಮಾಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಘಟನೆ ಖಂಡಿಸಿ ರಾಜ್ಯದಲ್ಲಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದ್ದು, ತುಷ್ಟೀಕರಣ ನೀತಿಯ ಫಲವಾಗಿ ಟೈಲರ್ ಹತ್ಯೆಯಾಗಿದೆ ಎಂದು ಬಿಜೆಪಿ ಆರೋಪಿಸಿದೆ. ರಾಜಸ್ತಾನದ ಹಲವೆಡೆ ಹಿಂದೂಗಳ ಮೇಲೆ ಹತ್ಯೆಯಾಗುತ್ತಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ಅವರ ತುಷ್ಟೀಕರಣದ ರಾಜಕೀಯದ ಪರಿಣಾಮ ಇದು ಎಂದು ರಾಜ್ಯ ಬಿಜೆಪಿ ಮುಖ್ಯಸ್ಥ ಸತೀಶ್ ಪೂನಿಯಾ (Satish Poonia) ಆರೋಪಿಸಿದ್ದಾರೆ.