ಕರ್ನಾಟಕ ಗೆಲುವಿನ ಬಳಿಕ ಕಾಂಗ್ರೆಸ್‌ಗೆ ಅಲರ್ಟ್‌ ನೀಡಿದ ರಾಜಕೀಯ ತಂತ್ರಗಾರ ಪ್ರಶಾಂತ್‌ ಕಿಶೋರ್‌!

Published : May 17, 2023, 07:43 PM ISTUpdated : May 17, 2023, 07:49 PM IST
ಕರ್ನಾಟಕ ಗೆಲುವಿನ ಬಳಿಕ ಕಾಂಗ್ರೆಸ್‌ಗೆ ಅಲರ್ಟ್‌ ನೀಡಿದ ರಾಜಕೀಯ ತಂತ್ರಗಾರ ಪ್ರಶಾಂತ್‌ ಕಿಶೋರ್‌!

ಸಾರಾಂಶ

ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಸ್ಪಷ್ಟ ಗೆಲುವಿಗೆ ಅಭಿನಂದನೆ ಸಲ್ಲಿಸಿರುವ ರಾಜಕೀಯ ತಂತ್ರಗಾರ ಪ್ರಶಾಂತ್‌ ಕಿಶೋರ್‌, ಇದೆ ವೇಳೆ ಕಾಂಗ್ರೆಸ್‌ ಪಕ್ಷಕ್ಕೆ ಸ್ಪಷ್ಟಕ್ಕೆ ಎಚ್ಚರಿಕೆಯನ್ನೂ ನೀಡಿದ್ದಾರೆ.

ನವದೆಹಲಿ (ಮೇ.17): ಇತ್ತೀಚೆಗಷ್ಟೇ ಮುಕ್ತಾಯಗೊಂಡ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶಗಳನ್ನು ಮುಂದಿನ ವರ್ಷದ ಲೋಕಸಭಾ ಚುನಾವಣೆಗೆ ಸಿಕ್ಕ ಸೂಚನೆ ಎನ್ನುವುದರ ವಿರುದ್ಧ ರಾಜಕೀಯ ತಂತ್ರಗಾರ ಮತ್ತು ಕಾರ್ಯಕರ್ತ ಪ್ರಶಾಂತ್ ಕಿಶೋರ್ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಎಚ್ಚರಿಕೆ ನೀಡಿದ್ದಾರೆ. ತಮ್ಮ ರಾಜಕೀಯ ಪ್ರಚಾರದ ಜನ್‌ ಸೂರಜ್‌ ಯಾತ್ರೆಯಲ್ಲಿರುವ ಪ್ರಶಾಂತ್‌ ಕಿಶೋರ್‌ ಇದರ ನಡುವೆಯೇ ದೇಶದ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಮಾತನಾಡಿದರು. ಈಗ ದೇಶದ ಚುನಾವಣೆಗಳ ಮಾದರಿಗಳ ಬಗ್ಗೆ ತಿಳಿಸಿದ ಅವರು, ವಿಧಾನಸಭಾ ಚುನಾವಣಾ ಫಲಿತಾಂಶಗಳನ್ನು ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಸಾಧನೆಗೆ ಪೂರ್ವಭಾವಿಯಾಗಿ ತೆಗೆದುಕೊಳ್ಳಬಾರದೆಂದು ಸಲಹೆ ನೀಡಿದರು. ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ ಸಾಧಿಸಿರುವ ಯಶಸ್ಸಿಗೆ ಖಂಡಿತವಾಗಿ ಅಭಿನಂದಿಸುತ್ತೇನೆ. ಆದರೆ, ವಿಧಾನಸಭೆ ಚುನಾವಣೆಯ ಫಲಿತಾಂಶವನ್ನು ಲೋಕಸಭೆ ಚುನಾವಣೆಯ ಮಾದರಿ ಫಲಿತಾಂಶ ಎಂದು ತಪ್ಪಾಗಿ ಗ್ರಹಿಸದಂತೆ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಗೆ ಎಚ್ಚರಿಕೆ ನೀಡಲು ಬಯಸುತ್ತೇನೆ' ಎಂದು ಪ್ರಶಾಂತ್‌ ಕಿಶೋರ್‌ ಹೇಳಿದ್ದಾರೆ. ಎಡಗಾಲಿನ ಸ್ನಾಯು ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ರಾಜ್ಯಾದ್ಯಂತ ನಡೆಯುತ್ತಿರುವ ಪಾದಯಾತ್ರೆಗೆ ಅವರು ವಿರಾಮ ನೀಡಿದ್ದಾರೆ. ಆ ಬಳಿಕ ಅವರು ಅಜ್ಞಾತ ಸ್ಥಳದಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

2013ರಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿದ್ದರೂ 2014 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡಿತು. ಇನ್ನು 2019ರಲ್ಲಿ ಬಿಜೆಪಿಯಿಂದ ಮೂರು ಪ್ರಮುಖ ರಾಜ್ಯಗಳಾದ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢವನ್ನು ವಶಪಡಿಸಿಕೊಂಡ ಕೆಲವೇ ತಿಂಗಳಲ್ಲಿ ಕಾಂಗ್ರೆಸ್‌ ಲೋಕಸಭಾ ಚುನಾವಣೆಯಲ್ಲಿ ಸೋಲು ಕಂಡಿತ್ತು ಎಂದು ಕಿಶೋರ್‌ ಹೈಲೈಟ್‌ ಮಾಡಿ ಹೇಳಿದ್ದಾರೆ.

"2012 ರಲ್ಲಿ ಸಮಾಜವಾದಿ ಪಕ್ಷವು ಉತ್ತರ ಪ್ರದೇಶದಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿತ್ತು ಅನ್ನೋದನ್ನ ಇಲ್ಲಿ ಸ್ಮರಿಸಿಕೊಳ್ಳುತ್ತೇನೆ. ಆದರೆ ಎರಡೇ ವರ್ಷಗಳ ನಂತರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಸಿಡ ರಾಜ್ಯದಲ್ಲಿ 80 ಸ್ಥಾನಗಳಲ್ಲಿ 73 ಸ್ಥಾನಗಳನ್ನು ಗೆದ್ದುಕೊಂಡಿತು," ಎಂದಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಭವಿಷ್ಯವನ್ನು ಒತ್ತಿಹೇಳಲು ಅಂಕಿಅಂಶಗಳನ್ನು ತಿಳಿಸಿದ ಕಿಶೋರ್, "2018 ರ ವಿಧಾನಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ತನ್ನ ಯಶಸ್ಸನ್ನು ನೆನಪಿಸಿಕೊಳ್ಳುವುದು ಒಳ್ಳೆಯದು. ಈ ಚುನಾವಣೆ ನಡೆದ ಕೆಲವೇ ತಿಂಗಳಲ್ಲಿ ನಡೆದ 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ದಯನೀಯ ಪ್ರದರ್ಶನ ತೋರಿತ್ತು' ಎಂದಿದ್ದಾರೆ.

ಕಿಶೋರ್ ಅವರು 2011 ರಲ್ಲಿ ಗುಜರಾತ್ ರಾಜ್ಯ ಚುನಾವಣೆಯಲ್ಲಿ ನರೇಂದ್ರ ಮೋದಿಯವರ ಪ್ರಚಾರ ಕಾರ್ಯಕ್ರಮಗಳಲ್ಲಿ ಪ್ರಮುಖ ತಂತ್ರಗಾರರಾಗಿ ಕೆಲಸ ಮಾಡಿದ ಬಳಿಕ ಪ್ರಖ್ಯಾತಿ ಪಡೆದಿದ್ದರು. ನಂತರ ಅವರು 2014 ರ ರಾಷ್ಟ್ರೀಯ ಚುನಾವಣೆಗಳಲ್ಲಿ ಪ್ರಧಾನಮಂತ್ರಿ ಮೋದಿಯವರ ಯಶಸ್ವಿ ಪ್ರಯತ್ನದಲ್ಲಿ ನಿರ್ಣಾಯಕ ಪಾತ್ರ ವಹಿಸಿದರು. 45 ವರ್ಷ ವಯಸ್ಸಿನ ರಾಜಕೀಯ ವಿಶ್ಲೇಷಕ ಅಂದಿನಿಂದ ನಿತೀಶ್ ಕುಮಾರ್, ಅರವಿಂದ್ ಕೇಜ್ರಿವಾಲ್, ಎಂ ಕೆ ಸ್ಟಾಲಿನ್, ಜಗನ್ಮೋಹನ್ ರೆಡ್ಡಿ ಮತ್ತು ಮಮತಾ ಬ್ಯಾನರ್ಜಿಯಂತಹ ವಿವಿಧ ನಾಯಕರ ಚುನಾವಣಾ ಪ್ರಚಾರಗಳನ್ನು ನಿರ್ವಹಿಸಿದ್ದಾರೆ.

'ಮೊದ್ಲು ನಿಮ್ಮ ಸೀಟ್‌ ಉಳಿಸಿಕೊಳ್ಳಿ, ನಂತರ ವಿಪಕ್ಷ ಸಂಘಟನೆ ಮಾತು..' ನಿತೀಶ್‌ ಕುಮಾರ್‌ಗೆ ಪ್ರಶಾಂತ್‌ ಕಿಶೋರ್‌ ಟಾಂಗ್‌!

2021 ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ನಂತರ ಅವರು ರಾಜಕೀಯ ತಂತ್ರಗಾರಿಕೆ ಕೆಲಸಕ್ಕೆ ವಿದಾಯ ಹೇಳಿದ್ದರು. ಆದರೆ, ಅದಾದ ಬಳಿಕ ಕಾಂಗ್ರೆಸ್‌ ಪಕ್ಷಕ್ಕೆ ಮರುಜೀವ ನೀಡುವ ನಿಟ್ಟಿನಲ್ಲಿ ಮಾಡಿದ ಪ್ರಯತ್ನ ಫಲಕಾರಿಯಾಗದ ಬಳಿಕ ಜನ್‌ ಸೂರಜ್‌ಅನ್ನು ಆರಂಭಿಸಿ ಅದರ ಪ್ರಚಾರದಲ್ಲಿ ನಿರತರಾಗಿದ್ದಾರೆ.

ಪೊಲಿಟಿಕಲ್ ಮಾಸ್ಟರ್ ಮೈಂಡ್ ಪ್ರಶಾಂತ್ ಕಿಶೋರ್ ಭೇಟಿಯಾದ ಸವದತ್ತಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ..!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

India Latest News Live: ಭಾರತದಲ್ಲಿ ಭರ್ಜರಿ ಹೂಡಿಕೆಯ ಘೋಷಣೆ ಮಾಡಿದ ದೈತ್ಯ ಕಂಪನಿಗಳು
ಗುಜರಾತ್‌ನಲ್ಲೊಂದು ನಿರ್ಭಯಾ ಪ್ರಕರಣ