2047ಕ್ಕೆ ಭಾರತವನ್ನು ಇಸ್ಲಾಮಿಕ್‌ ದೇಶ ಮಾಡುವುದು ಪಿಎಫ್‌ಐ ಗುರಿ: ಎನ್‌ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಆರೋಪ..!

Published : Mar 18, 2023, 12:42 PM IST
2047ಕ್ಕೆ ಭಾರತವನ್ನು ಇಸ್ಲಾಮಿಕ್‌ ದೇಶ ಮಾಡುವುದು ಪಿಎಫ್‌ಐ ಗುರಿ: ಎನ್‌ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಆರೋಪ..!

ಸಾರಾಂಶ

ಕಳೆದ ಸೆಪ್ಟೆಂಬರ್‌ನಲ್ಲಿ ಎನ್‌ಐಎ ದೇಶವ್ಯಾಪಿ ದಾಳಿ ನಡೆಸಿ ಹಲವು ಪಿಎಫ್‌ಐ ಕಾರ್ಯಕರ್ತರನ್ನು ಬಂಧಿಸಿತ್ತು. ಈ ಪ್ರಕರಣಗಳ ಸಂಬಂಧ ಆರೋಪ ಪಟ್ಟಿ ಸಲ್ಲಿಕೆಯಾದ ಕೇರಳ, ಮಹಾರಾಷ್ಟ್ರ ಸೇರಿದಂತೆ ಬಹುತೇಕ ಎಲ್ಲಾ ರಾಜ್ಯಗಳಲ್ಲೂ ಪಿಎಫ್‌ಐ ಕಾರ್ಯಕರ್ತರು 2047ಕ್ಕೆ ಭಾರತವನ್ನು ಇಸ್ಲಾಮಿಕ್‌ ದೇಶವನ್ನಾಗಿ ಪರಿವರ್ತಿಸುವ ಗುರಿ ಹೊಂದಿದ್ದರು ಎಂಬ ಅಂಶವನ್ನು ಪ್ರಸ್ತಾಪಿಸಿದೆ.

ನವದೆಹಲಿ (ಮಾರ್ಚ್‌ 18, 2023): ಕಳೆದ ವರ್ಷ ಹೈದರಾಬಾದ್‌ನಲ್ಲಿ ಬಂಧಿತ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾದ (ಪಿಎಫ್‌ಐ) 5 ಕಾರ್ಯಕರ್ತರು, ಮುಸ್ಲಿಂ ಯುವಕರನ್ನು ತಮ್ಮ ಸಂಘಟನೆಗೆ ಸೇರಿಸಿಕೊಂಡು ಅವರನ್ನು ಮತೀಯವಾಗಿ ಪ್ರಚೋದಿಸುವ ಕೆಲಸ ಮಾಡುತ್ತಿದ್ದರು. ಜೊತೆಗೆ ವಿಶೇಷವಾಗಿ ಆಯೋಜಿತ ಶಸ್ತ್ರಾಸ್ತ್ರ ತರಬೇತಿ ಕೇಂದ್ರಗಳಲ್ಲಿ ಅವರಿಗೆ ತರಬೇತಿ ನೀಡುತ್ತಿದ್ದರು. ಅವರ ಉದ್ದೇಶ 2047ರ ವೇಳೆಗೆ ಭಾರತವನ್ನು ಇಸ್ಲಾಮಿಕ್‌ ದೇಶವನ್ನಾಗಿ ಮಾಡುವುದಾಗಿತ್ತು ಎಂದು ರಾಷ್ಟ್ರೀಯ ತನಿಖಾ ದಳ ಆರೋಪಿಸಿದೆ. ಬಂಧಿತರ ವಿರುದ್ಧ ಗುರುವಾರ ಸ್ಥಳೀಯ ನ್ಯಾಯಾಲಯಕ್ಕೆ ಸಲ್ಲಿಸಲಾದ ಹೆಚ್ಚುವರಿ ಆರೋಪ ಪಟ್ಟಿಯಲ್ಲಿ ಎನ್‌ಐಎ ಈ ಮಾಹಿತಿ ನೀಡಿದೆ.

ಕಳೆದ ಸೆಪ್ಟೆಂಬರ್‌ನಲ್ಲಿ ಎನ್‌ಐಎ ದೇಶವ್ಯಾಪಿ ದಾಳಿ ನಡೆಸಿ ಹಲವು ಪಿಎಫ್‌ಐ ಕಾರ್ಯಕರ್ತರನ್ನು ಬಂಧಿಸಿತ್ತು. ಈ ಪ್ರಕರಣಗಳ ಸಂಬಂಧ ಆರೋಪ ಪಟ್ಟಿ ಸಲ್ಲಿಕೆಯಾದ ಕೇರಳ, ಮಹಾರಾಷ್ಟ್ರ ಸೇರಿದಂತೆ ಬಹುತೇಕ ಎಲ್ಲಾ ರಾಜ್ಯಗಳಲ್ಲೂ ಪಿಎಫ್‌ಐ ಕಾರ್ಯಕರ್ತರು 2047ಕ್ಕೆ ಭಾರತವನ್ನು ಇಸ್ಲಾಮಿಕ್‌ ದೇಶವನ್ನಾಗಿ ಪರಿವರ್ತಿಸುವ ಗುರಿ ಹೊಂದಿದ್ದರು ಎಂಬ ಅಂಶವನ್ನು ಪ್ರಸ್ತಾಪಿಸಿದೆ.

ಇದನ್ನು ಓದಿ: ಪಿಎಫ್‌ಐ ಬ್ಯಾನ್‌ ಬಳಿಕ ಕರ್ನಾಟಕದಲ್ಲಿ ಹೆಚ್ಚಾದ ಕೋಮು ಸಂಘರ್ಷ ಪ್ರಕರಣಗಳು: 12 ದಿನಕ್ಕೊಂದು ಕೇಸ್‌..!

ದೇಶ ವಿರೋಧಿ ಕೃತ್ಯ ನಡೆಸುತ್ತಿದ್ದ ಆರೋಪದ ಮೇಲೆ ಶೇಖ್‌ ರಹೀಂ, ಶೇಖ್‌ ವಹೈದ್‌ ಅಲಿ, ಜಫ್ರುಲ್ಲಾ ಖಾನ್‌ ಪಠಾಣ್‌, ಶೇಖ್‌ ರಿಯಾಜ್‌ ಮತ್ತು ಅಬ್ದುಲ್‌ ವಾರಿಸ್‌ ಎಂಬ ಪಿಎಫ್‌ಐ ಕಾರ್ಯಕರ್ತರನ್ನು ಕಳೆದ ವರ್ಷ ತೆಲಂಗಾಣ ಪೊಲೀಸರು ಬಂಧಿಸಿದ್ದರು. ಆದರೆ ಕಳೆದ ಆಗಸ್ಟ್‌ನಲ್ಲಿ ಈ ಪ್ರಕರಣವನ್ನು ತನ್ನ ತೆಕ್ಕೆಗೆ ಪಡೆದುಕೊಂಡಿದ್ದ ಎನ್‌ಐಎ ಕಳೆದ ಡಿಸೆಂಬರ್‌ನಲ್ಲಿ ಮೊದಲ ಆರೋಪ ಪಟ್ಟಿ ಸಲ್ಲಿಸಿತ್ತು.

ಬಂಧಿತ ಐದೂ ಜನರು ಕ್ರಿಮಿನಲ್‌ ಸಂಚು, ಧಾರ್ಮಿಕ ಆಧಾರದಲ್ಲಿ ವಿವಿಧ ಗುಂಪುಗಳ ನಡುವೆ ದ್ವೇಷ ಹಬ್ಬಿಸುವ ಕೆಲಸ ಮಾಡುತ್ತಿದ್ದರು. ಧಾರ್ಮಿಕ ಪುಸ್ತಕಗಳನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದ ಇವರು, ಭಾರತದಲ್ಲಿ ಮುಸ್ಲಿಮರು ಅನುಭವಿಸುತ್ತಿರುವ ತೊಂದರೆ ನಿವಾರಣೆಗೆ ಹಿಂಸಾತ್ಮಕ ಮಾರ್ಗದ ಜಿಹಾದ್‌ ಅನಿವಾರ್ಯ ಎಂದು ನಂಬಿದ್ದರು. ದೇಶಾದ್ಯಂತ ಹಿಂಸಾತ್ಮಕ ಭಯೋತ್ಪಾದನಾ ಕೃತ್ಯಗಳನ್ನು ಎಸಗುವುದು ಇವರ ಗುರಿಯಾಗಿತ್ತು. ಇದಕ್ಕೆಂದೇ ಇವರಿಗೆಲ್ಲಾ ವಿಶೇಷ ತರಬೇತಿ ನೀಡಲಾಗುತ್ತಿತ್ತು. ಅಲ್ಲಿ ನಿರ್ದಿಷ್ಟ ಗುರಿಗಳ ಕುತ್ತಿಗೆ, ಹೊಟ್ಟೆ, ತಲೆ ಮೊದಲಾದ ಆಯಕಟ್ಟಿನ ಭಾಗಗಳ ಮೇಲೆ ದಾಳಿ ನಡೆಸುವುದು ಕಲಿಸಿಕೊಡಲಾಗುತ್ತಿತ್ತು. ಒಟ್ಟಾರೆ ಇವರ ಅಂತಿಮ ಗುರಿ 2047ರ ವೇಳೆಗೆ ಭಾರತವನ್ನು ಇಸ್ಲಾಮಿಕ್‌ ದೇಶ ಮಾಡುವುದಾಗಿತ್ತು’ ಎಂದು ಎನ್‌ಐಎ ಆರೋಪಪಟ್ಟಿಯಲ್ಲಿ ದಾಖಲಿಸಿದೆ.

ರಾಮಮಂದಿರ ಸ್ಫೋಟಕ್ಕೆ PFI ಸಂಚು! ಮಹಾರಾಷ್ಟ್ರ ಉಗ್ರನಿಗ್ರಹ ದಳದಿಂದ ಸ್ಫೋಟಕ ಮಾಹಿತಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್‌ ಮ್ಯಾನೇಜರ್‌, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌!
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್