ಪ್ರಜ್ವಲ್‌ ರೇವಣ್ಣ ಕುರಿತಾಗಿ ಮೊದಲ ಬಾರಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

By Santosh Naik  |  First Published May 6, 2024, 10:24 PM IST

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾಗಿರುವ ಸೆಕ್ಸ್‌ ವಿಡಿಯೋಗಳ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಮಾತನಾಡಿದ್ದು, ಇಂಥ ವ್ಯಕ್ತಿಗಳ ವಿರುದ್ಧ ನಾವು ಶೂನ್ಯ ಸಹಿಷ್ಣುತೆ ಹೊಂದಿದ್ದೇವೆ ಎಂದು ಹೇಳಿದ್ದಾರೆ.
 


ನವದೆಹಲಿ (ಮೇ.6): ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾಗುತ್ತಿರುವ ಸೆಕ್ಸ್‌ ವಿಡಿಯೋ ಕೇಸ್‌ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಮಾತನಾಡಿದ್ದಾರೆ. ಪ್ರಜ್ವಲ್‌ ರೇವಣ್ಣರಂಥ ವ್ಯಕ್ತಿಗಳ ವಿರುದ್ಧ ಶೂನ್ಯ ಸಹಿಷ್ಣುತೆ ಹೊಂದಿರಬೇಕು ಎಂದು ಹೇಳಿದ ನರೇಂದ್ರ ಮೋದಿ, ಕರ್ನಾಟಕದ ಕಾಂಗ್ರೆಸ್‌ ಸರ್ಕಾರವೇ ಜೆಡಿಎಸ್‌ ಸಂಸದ ದೇಶದಿಂದ ಹೊರಗೆ ಹೋಗಲು ಅವಕಾಶ ಮಾಡಿಕೊಟ್ಟಿದೆ. ಒಕ್ಕಲಿಗರು ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಚುನಾವಣೆ ಮುಗಿದ ನಂತರವೇ ಆತನ ವಿರುದ್ಧ ದೋಷಾರೋಪಣೆ ಮಾಡುವ ಲೈಂಗಿಕ ದೌರ್ಜನ್ಯದ ವಿಡಿಯೋಗಳನ್ನು ಬಿಡುಗಡೆ ಮಾಡಿದೆ ಎಂದು ಹೇಳಿದ್ದಾರೆ. ಬ್ರಾಡ್‌ಕಾಸ್ಟರ್ ಒದಗಿಸಿದ ಸಂದರ್ಶನದ ಪ್ರಕಾರ, ಇದು ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಯಾಗಿರುವುದರಿಂದ ರೇಜಿಂಗ್ ವಿಷಯದಲ್ಲಿ ಕ್ರಮ ಕೈಗೊಳ್ಳುವ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲಿದೆ ಎಂದು ಪ್ರಧಾನಿ ಮೋದಿ ಟೈಮ್ಸ್ ನೌಗೆ ತಿಳಿಸಿದ್ದಾರೆ. ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾಗಿರುವ ವಿಡಿಯೋಗಳು ಇರುವುದು ಕಾಂಗ್ರೆಸ್‌ ಆಗೂ ಜೆಡಿಎಸ್‌ ಮೈತ್ರಿ ಮಾಡಿಕೊಂಡಿರುವ ಕಾಲದ್ದು ಎಂದು ಹೇಳಲಾಗುತ್ತಿದೆ. ಅವರು ಅಧಿಕಾರದಲ್ಲಿದ್ದಾಗ ಇದನ್ನು ಸಂಗ್ರಹ ಮಾಡಿದ್ದರು. ಈ ಬಾರಿ ಒಕ್ಕಲಿಗರು ಪ್ರಾಬಲ್ಯವಿರುವ ಕ್ಷೇತ್ರದಲ್ಲಿ ಚುನಾವಣೆಗ ನಡೆದ ಬಳಿಕ ಈ ವಿಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ ಎಂದು ಮೋದಿ ಆರೋಪಿಸಿದ್ದಾರೆ.

ಆತ ದೇಶದಿಂದ ಹೊರಹೋದ ಬೆನ್ನಲ್ಲಿಯೇ ಈ ವಿಡಿಯೋಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಡೀ ಬೆಳವಣಿಗೆ ಬಹಳ ಅನುಮಾನಾಸ್ಪದವಾಗಿದೆ ಎಂದು ಮೋದಿ ಹೇಳಿದ್ದಾರೆ.  ರಾಜ್ಯ ಸರಕಾರಕ್ಕೆ ಮಾಹಿತಿ ಇದ್ದಿದ್ದರೆ ನಿಗಾ ಇಡಬೇಕಿತ್ತು ಮತ್ತು ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಪೊಲೀಸರನ್ನು ಇಡಬೇಕಿತ್ತು ಎಂದಿದ್ದಾರೆ.

Tap to resize

Latest Videos

ನೀವು (ಕಾಂಗ್ರೆಸ್‌ ಸರ್ಕಾರ) ಏನನ್ನೂ ಮಾಡಲಿಲ್ಲ. ಕನಿಷ್ಠ ಪಕ್ಷ ಭಾರತ ಸರ್ಕಾರಕ್ಕೂ ಇದರ ಮಾಹಿತಿ ನೀಡಲಿಲ್ಲ. ಅಂದರೆ ಇದು ಪೊಲಿಟಿಕಲ್ ಗೇಮ್ ಆಗಿತ್ತು. ಅವರೊಂದಿಗೆ ಮೈತ್ರಿ ಇದ್ದ ಕಾಲದಿಂದಲೂ ಈ ವಿಡಿಯೋಗಳನ್ನು ಸಂಗ್ರಹಿಸಿ ಇಡಲಾಗಿತ್ತು. ಹಾಗಂತ ನಮ್ಮ ವಿಚಾರ ಇದಲ್ಲ. ಯಾವುದೇ ಅಪರಾಧಿಗಳನ್ನು ಬಿಡಬಾರದು ಎನ್ನುವುದಷ್ಟೇ ನಮ್ಮ ಉದ್ದೇಶ. ನಮ್ಮ ದೇಶದಲ್ಲಿ ಇಂಥ ರಾಜಕೀಯ ಆಟಗಳನ್ನು ನಿಲ್ಲಿಸಬೇಕಾದ ಅನಿವಾರ್ಯತೆ ಇದೆ ಎಂದು ಮೋದಿ ಹೇಳಿದ್ದಾರೆ.

ದೇವರಾಜೇಗೌಡ ಬಿಜೆಪಿ ಕಾರ್ಯಕರ್ತ ಮೈತ್ರಿ ನಾಯಕರ ಅಣತಿಯಂತೆ ನನ್ನ ವಿರುದ್ಧ ಸುಳ್ಳು ಅಪಾದನೆ: ಡಿಕೆ ಶಿವಕುಮಾರ

ಮೋದಿಯವರಿಗೆ ಸಂಬಂಧಿಸಿದಂತೆ, ಬಿಜೆಪಿಗೆ ಸಂಬಂಧಿಸಿದಂತೆ, ನಮ್ಮ ಸಂವಿಧಾನಕ್ಕೆ ಸಂಬಂಧಿಸಿದಂತೆ, ಅಂತಹವರ ವಿರುದ್ಧ ಶೂನ್ಯ ಸಹಿಷ್ಣುತೆ ಇರಬೇಕೆಂದು ನನ್ನ ಸ್ಪಷ್ಟ ಅಭಿಪ್ರಾಯವಿದೆ, ಲಭ್ಯವಿರುವ ಕಾನೂನು ಆಯ್ಕೆಗಳಲ್ಲಿ ಇಂಥವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಹೇಳಿದ್ದಾರೆ. ನಾವು ಆತನನ್ನು ವಾಪಾಸ್‌ ಕರೆತರಬೇಕು. ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇದರಲ್ಲಿ ಯಾವುದೇ ಅನುಮಾನಗಳೂ ಇರಕೂಡದು ಎಂದು ಮೋದಿ ಹೇಳಿದ್ದಾರೆ. 2018 ರ ಚುನಾವಣೆಯ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜನತಾ ದಳ (ಜಾತ್ಯತೀತ) ಮೈತ್ರಿ ಸರ್ಕಾರವನ್ನು ನಡೆಸಿತು ಮತ್ತು 2019 ರ ಲೋಕಸಭಾ ಚುನಾವಣೆಯಲ್ಲಿ ಒಟ್ಟಾಗಿ ಹೋರಾಡಿದ ನಂತರ ಬೇರ್ಪಟ್ಟಿತು.

ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್; ಡಿಕೆಶಿ ಆಡಿಯೋ ಡಿಲೀಟ್‌ಗೆ ಎಸ್‌ಐಟಿ ಅಧಿಕಾರಿಯಿಂದಲೇ ಬೆದರಿಕೆ: ವಕೀಲ ದೇವರಾಜೇಗೌಡ

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ನೇತೃತ್ವದ ಪಕ್ಷ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿತು ಮತ್ತು ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಅವರು ಒಟ್ಟಾಗಿ ಹೋರಾಡುತ್ತಿದ್ದಾರೆ.

: 'किसी भी गुनहगार को बख्शा नहीं जाना चाहिए. कड़ी से कड़ी कारवाई होनी चाहिए..' सुनिए, को लेकर प्रधानमंत्री ने क्या कहा pic.twitter.com/piWYuurxRm

— Times Now Navbharat (@TNNavbharat)
click me!