ಇವ ಗೋವಾದ ಪ್ರಜ್ವಲ್ ರೇವಣ್ಣ: 30ಕ್ಕೂ ಹೆಚ್ಚು ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ

Published : Mar 26, 2026, 10:37 PM IST
Goa sex scandal

ಸಾರಾಂಶ

ಗೋವಾದಲ್ಲಿ 30ಕ್ಕೂ ಹೆಚ್ಚು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಬಿಜೆಪಿ ಮುನ್ಸಿಪಲ್ ಕೌನ್ಸಿಲರ್ ಪುತ್ರ ಸೋಹಮ್ ಸುಶಾಂತ್ ನಾಯ್ಕ್‌ನನ್ನು ಬಂಧಿಸಲಾಗಿದೆ. ಈ ಪ್ರಕರಣವನ್ನು ಕರ್ನಾಟಕದ ಪ್ರಜ್ವಲ್ ರೇವಣ್ಣ  ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಹೋಲಿಸಲಾಗುತ್ತಿದೆ.

30ಕ್ಕೂ ಹೆಚ್ಚು ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ:

ಗೋವಾದಲ್ಲಿ ಹಲವು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲಿನ ಬಿಜೆಪಿ ಮುನ್ಸಿಪಲ್ ಕೌನ್ಸಿಲರ್ ಓರ್ವನನ್ನು ಬಂಧಿಸಲಾಗಿದೆ. ಬಗೆದಷ್ಟು ಬಯಲಾಗುತ್ತಿರುವ ಈತನ ಲೈಂಗಿಕ ಅಪರಾಧದ ಕೃತ್ಯದಿಂದಾಗಿ ಈಗ ಈತನನ್ನು ಕರ್ನಾಟಕದ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಹೋಲಿಸಲಾಗುತ್ತಿದೆ. ಬಂಧಿತ ಯುವಕನನ್ನು 20 ವರ್ಷದ ಸೋಹಮ್ ಸುಶಾಂತ್ ನಾಯ್ಕ್ ಎಂದು ಗುರುತಿಸಲಾಗಿದೆ. ಈ ಪ್ರಕರಣದ ವಿವರವಾದ ತನಿಖೆಗಾಗಿ ಈ ಪ್ರಕರಣವನ್ನು ಈಗ ಗೋವಾದ ಅಪರಾಧ ಶಾಖೆಗೆ ವರ್ಗಾಯಿಸಲಾಗಿದೆ. ಆರೋಪಿ ಮೂರು ವರ್ಷಗಳಲ್ಲಿ 30ಕ್ಕೂ ಹೆಚ್ಚು ಅಪ್ರಾಪ್ತ ಬಾಲಕಿಯರನ್ನು ತನ್ನ ಲೈಂಗಿಕವಾಗಿ ಶೋಷಣೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

ಸೋಹಮ್ ಸುಶಾಂತ್  ಕರ್ಚೋರೆಮ್ ಕಾಕೋರಾ ಮುನ್ಸಿಪಲ್ ಕೌನ್ಸಿಲ್‌ನ ಕೌನ್ಸಿಲರ್ ಪುತ್ರ:

ಗೋವಾದ ಕರ್ಚೋರೆಮ್‌ನಲ್ಲಿ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಮೂರು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಸಂತ್ರಸ್ತರ ಹೇಳಿಕೆಗಳನ್ನು ದಾಖಲಿಸಲಾಗಿದ್ದು, ಆರೋಪಿಗಳು ಹಾಗೂ ಸಂತ್ರಸ್ತರು ಇಬ್ಬರೂ ಘಟನೆ ನಡೆದ ಸಮಯದಲ್ಲಿ ಅಪ್ರಾಪ್ತರಾಗಿದ್ದರು ಎಂಬುದು ತನಿಖೆಯಿಂದ ತಿಳಿದು ಬಂದಿದೆ. ಪ್ರಕರಣವು ಮೂರು ವರ್ಷಗಳ ಹಿಂದೆ ಕಾಲೇಜಿನಲ್ಲಿ ಓದುತ್ತಿದ್ದಾಗ ನಡೆದಿದೆ ಎನ್ನಲಾಗಿದೆ. ಆರೋಪಿ ಸೋಹಮ್ ಸುಶಾಂತ್ ನಾಯ್ಕ್ ಕಾಕೋರಾದ ಮಧೇಗಲ್ ನಿವಾಸಿ ಮತ್ತು ಕರ್ಚೋರೆಮ್ ಕಾಕೋರಾ ಮುನ್ಸಿಪಲ್ ಕೌನ್ಸಿಲ್‌ನ ಕೌನ್ಸಿಲರ್ ಒಬ್ಬರ ಪುತ್ರನಾಗಿದ್ದಾನೆ.

ಸ್ಥಳೀಯರ ಪ್ರತಿಭಟನೆ ಬಳಿಕ ಬಂಧನ:

ಅಪ್ರಾಪ್ತೆಯರ ಲೈಂಗಿಕ ಶೋಷಣೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ನಂತರ ಆತನನ್ನು ಬಂಧಿಸಲಾಗಿದೆ. ಸ್ಥಳೀಯರು ಪೊಲೀಸ್ ಠಾಣೆಯ ಹೊರಗೆ ಜಮಾಯಿಸಿ ತಕ್ಷಣ ಆತನ ವಿರುದ್ಧಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು. ಆರಂಭದಲ್ಲಿ ಈತನ ವಿರುದ್ಧ ಒಂದು ಪ್ರಕರಣ ದಾಖಲಾಗಿತ್ತು. ನಂತರದ ಹೇಳಿಕೆಗಳ ಆಧಾರದ ಮೇಲೆ ಇನ್ನೂ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ದಕ್ಷಿಣ ಗೋವಾ ಎಸ್‌ಪಿ ಸಂತೋಷ್ ದೇಸಾಯಿ ತಿಳಿಸಿದ್ದಾರೆ. ರಾಜ್ಯದ ಪರವಾಗಿ ಮೊದಲ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಸ್ತುತ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಇತರ ಹಲವರನ್ನು ಸಹ ವಿಚಾರಣೆ ನಡೆಸಲಾಗುತ್ತಿದೆ.

ತನಿಖೆಯನ್ನು ಪರಿಶೀಲಿಸಿದ ಉಪ ಪೊಲೀಸ್ ಮಹಾನಿರ್ದೇಶಕಿ ವರ್ಷಾ ಶರ್ಮಾ, ಸಂತ್ರಸ್ತರ ಹೇಳಿಕೆಯ ಆಧಾರದ ಮೇಲೆ ಹೆಚ್ಚುವರಿ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಆರೋಪಿಯ ಮೊಬೈಲ್ ಫೋನ್ ಅನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಹೇಳಿದರು.

ವೀಡಿಯೋ ಬಳಸಿ ಸಂತ್ರಸ್ತ ಬಾಲಕಿಯರಿಗೆ ಬ್ಲಾಕ್‌ಮೇಲ್

ಕುಡ್ಚಡೆ ಪೊಲೀಸ್ ಠಾಣೆಯ ಹೊರಗೆ ಸ್ಥಳೀಯ ನಿವಾಸಿಗಳು ಮತ್ತು ರಾಜಕೀಯ ನಾಯಕರ ಪ್ರತಿಭಟನೆಯ ನಂತರ ಸೋಮವಾರ ಮುಂಜಾನೆ ಮಡೆಗಲ್-ಕಾಕೋರಾದ ನಿವಾಸಿ ನಾಯಕ್ ಅವರನ್ನು ವಶಕ್ಕೆ ಪಡೆಯಲಾಗಿತ್ತು. ಆರೋಪಿ ಸುಶಾಂತ್ ಅಪ್ರಾಪ್ತರ ಜೊತೆ ಲೈಂಗಿಕ ಚಟುವಟಿಕೆಯಲ್ಲಿ ಭಾಗಿಯಾಗಿದ್ದಲ್ಲದೇ ಆ ದೃಶ್ಯವನ್ನು ತನ್ನ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದನು. ಈ ವೀಡಿಯೋಗಳನ್ನು ಬಳಸಿ ಆತ ಸಂತ್ರಸ್ತರನ್ನು ಬ್ಲಾಕ್‌ಮೇಲ್ ಮಾಡಲು ಬಳಸಿದ್ದನು ಎಂಬ ಆರೋಪ ಕೇಳಿ ಬಂದಿದೆ. ಇತ್ತೀಚೆಗೆ ನಡೆದ ಡ್ರಿಂಕ್ಸ್ ಪಾರ್ಟಿಯೊಂದರಲ್ಲಿ ಆರೋಪಿ ತನ್ನ ಕೃತ್ಯದ ಸ್ಪಷ್ಟ ವೀಡಿಯೊಗಳನ್ನು ಸ್ನೇಹಿತರಿಗೆ ತೋರಿಸಿ ಅವರ ಜೊತೆ ಹಂಚಿಕೊಂಡ ಬಳಿಕ ಈ ಪ್ರಕರಣ ತೀವ್ರ ಸಂಚಲನಕ್ಕೆ ಕಾರಣವಾಯ್ತು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಪತ್ನಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಪತಿ: ತಿಂಗಳ ಬಳಿಕ ಲವರ್ ಜೊತೆ ಸಿಕ್ಕ ಹೆಂಡ್ತಿ

ಸಮುದಾಯದ ಸದಸ್ಯರು ತಕ್ಷಣ ಸ್ವಯಂಪ್ರೇರಿತ ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಿದ್ದಲ್ಲದೇ, ಎರಡು ದಿನಗಳಲ್ಲಿ ಬಂಧನಗಳನ್ನು ಮಾಡದಿದ್ದರೆ ಬಂದ್ ಮಾಡುವುದಾಗಿ ಎಚ್ಚರಿಸಿದ್ದರು. ಗೋವಾದಲ್ಲಿ ವಿರೋಧ ಪಕ್ಷ ಕಾಂಗ್ರೆಸ್ ತ್ವರಿತ ಮತ್ತು ಪಕ್ಷಪಾತವಿಲ್ಲದ ತನಿಖೆಗೆ ಕರೆ ನೀಡಿದ್ದು, ಪಕ್ಷದ ಮುಖ್ಯಸ್ಥ ಅಮಿತ್ ಪಾಟ್ಕರ್ ಅಧಿಕಾರಿಗಳು ತ್ವರಿತವಾಗಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಫೋಕ್ಸೋ ಕಾಯ್ದೆಯ ಹಲವು ಸೆಕ್ಷನ್‌ಗಳಡಿ ಆರೋಪಿ ಸುಮಂತ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತನನ್ನು 4 ದಿನಗಳ ಕಾಲ ಕಸ್ಟಡಿಗೆ ನೀಡಲಾಗಿದೆ.

ಇದನ್ನೂ ಓದಿ: ಚಾಮರಾಜನಗರ: ಬಿ‌ಆರ್‌ಟಿಯ ಹಲವು ಕಡೆಗಳಲ್ಲಿ ಭಾರಿ ಬೆಂಕಿ: ಧಗಧಗನೇ ಹೊತ್ತಿ ಉರಿಯುತ್ತಿರುವ ಹುಲಿ ಸಂರಕ್ಷಿತ ಪ್ರದೇಶ

ದಕ್ಷಿಣ ಗೋವಾ ಎಸ್ಪಿ ಸಂತೋಷ್ ದೇಸಾಯಿ ಅವರು ಮಾತನಾಡಿ, ಹೊಸ ಪುರಾವೆಗಳು ಹೊರಬಂದಾಗ ಹೆಚ್ಚಿನ ಸೆಕ್ಷನ್‌ಗಳನ್ನು ಸೇರಿಸಲಾಗುವುದು. ಅಗತ್ಯವಿದ್ದರೆ, ಹೆಚ್ಚುವರಿ ಪ್ರಕರಣಗಳನ್ನು ದಾಖಲಿಸಲಾಗುವುದು. ಕಾನೂನು ಅಗತ್ಯಕ್ಕೆ ಅನುಗುಣವಾಗಿ ಪ್ರತ್ಯೇಕ ವೈಯಕ್ತಿಕ ಪ್ರಕರಣಗಳನ್ನು ಸಹ ದಾಖಲಿಸಬಹುದು ಎಂದು ಹೇಳಿದ್ದಾರೆ. ಈ ಪ್ರಕರಣವನ್ನು ಈಗ 2024ರಲ್ಲಿ ಬಯಲಾದ ಪ್ರಜ್ವಲ್ ರೇವಣ್ಣ ಕೇಸ್‌ಗೆ ಹೋಲಿಸಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಸಾರ್ವಜನಿಕ ಸಮಾವೇಶ ಮುಗಿಸಿ ವಾಪಸಾಗುತ್ತಿದ್ದ ಬಸ್‌ ಟ್ರಕ್‌ಗೆ ಢಿಕ್ಕಿ, 10 ಮಂದಿ ದಾರುಣ ಸಾವು!
ಪತ್ನಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಪತಿ: ತಿಂಗಳ ಬಳಿಕ ಲವರ್ ಜೊತೆ ಸಿಕ್ಕ ಹೆಂಡ್ತಿ