ಬೆಟ್ಟಿಂಗ್ ಆ್ಯಪ್‌ ಕೇಸು : ನಟ ಪ್ರಕಾಶ್ ರಾಜ್‌ಗೆ ಇ.ಡಿ. ಬಿಸಿ

Kannadaprabha News   | Kannada Prabha
Published : Jul 31, 2025, 06:44 AM IST
Prakash Raj

ಸಾರಾಂಶ

ಅಕ್ರಮ ಹಣ ಗಳಿಸಿರುವ ಆನ್ಲೈನ್ ಬೆಟ್ಟಿಂಗ್ ಆ್ಯಪ್‌ಗಳ ಪರ ಪ್ರಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಪ್ರಕಾಶ್ ರಾಜ್ ಜಾರಿ ನಿರ್ದೇಶನಾಲಯದ (ಇ.ಡಿ.) ವಿಚಾರಣೆಗೆ ಬುಧವಾರ ಹಾಜರಾಗಿ ವಿಚಾರಣೆ ಎದುರಿಸಿದರು.

ಹೈದರಾಬಾದ್: ಅಕ್ರಮ ಹಣ ಗಳಿಸಿರುವ ಆನ್ಲೈನ್ ಬೆಟ್ಟಿಂಗ್ ಆ್ಯಪ್‌ಗಳ ಪರ ಪ್ರಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಪ್ರಕಾಶ್ ರಾಜ್ ಜಾರಿ ನಿರ್ದೇಶನಾಲಯದ (ಇ.ಡಿ.) ವಿಚಾರಣೆಗೆ ಬುಧವಾರ ಹಾಜರಾಗಿ ವಿಚಾರಣೆ ಎದುರಿಸಿದರು.

ವಿಚಾರಣೆ ಬಳಿಕ ಮಾತನಾಡಿದ ಅವರು, ‘ಇದು ಬೆಟ್ಟಿಂಗ್ ಆ್ಯಪ್‌ಗಳ ಹಣ ವರ್ಗಾವಣೆ ಪ್ರಕರಣ. 2016ರಲ್ಲಿ ನಾನಿದರಲ್ಲಿ ತೊಡಗಿಕೊಂಡಿದ್ದೆ (ಪ್ರಚಾರದಲ್ಲಿ). ನೈತಿಕತೆಯ ಆಧಾರದ ಮೇಲೆ, ನಾನು ಅದನ್ನು ಮುಂದುವರಿಸಲಿಲ್ಲ. ನಾನು ಅದರಿಂದ ಹಣ ಗಳಿಸಲು ಬಯಸದ ಕಾರಣ ನನಗೆ ಯಾವುದೇ ಹಣ ಬಂದಿಲ್ಲ ಎಂದು ನಾನು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇನೆ.

ಅವರು ಎಲ್ಲಾ ವಿವರಗಳನ್ನು ತೆಗೆದುಕೊಂಡು ವಿಚಾರಣೆಯನ್ನು ಪೂರ್ಣಗೊಳಿಸಿದ್ದಾರೆ. ಅಧಿಕಾರಿಗಳು ತಮ್ಮ ಕೆಲಸವನ್ನು ಮಾಡುತ್ತಿದ್ದಾರೆ ಮತ್ತು ನಾಗರಿಕನಾಗಿ ನಾನು ಸಹಕರಿಸಬೇಕು ಮತ್ತು ಅವರ ಪ್ರಶ್ನೆಗಳಿಗೆ ಉತ್ತರಿಸಬೇಕು. ಇದರಲ್ಲಿ ಯಾವುದೇ ಮಾಟಗಾರಿಕೆಯೋ, ರಾಜಕೀಯ ಪ್ರೇರಣೆಯೋ ಇಲ್ಲ’ ಎಂದರು.ಪ್ರಕಾಶ್ ರಾಜ್ ಜೊತೆಗೆ ನಟ ರಾಣಾ ದಗ್ಗುಬಾಟಿ, ವಿಜಯ್ ದೇವರಕೊಂಡ, ನಟಿ ಪ್ರಣೀತಾ ಸುಭಾಷ್, ಲಕ್ಷ್ಮೀ ಮಂಚು ಸೇರಿ 29 ಚಿತ್ರತಾರೆಯರು, ಸಾಮಾಜಿಕ ಜಾಲತಾಣ ಪ್ರಭಾವಿಗಳು ವಿಚಾರಣೆಗೆ ಹಾಜರಾಗುವಂತೆ ಜು.10ರಂದು ಇ.ಡಿ ಸಮನ್ಸ್ ಜಾರಿಗೊಳಿಸಿತ್ತು.

ಆ.6ರಂದು ದೇವರಕೊಂಡ, ಆ.3ರಂದು ಲಕ್ಷ್ಮೀ ಮಂಚು, ಆ,11ಕ್ಕೆ ದಗ್ಗುಬಾಟಿ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಇ.ಡಿ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರತನ್ ಟಾಟಾ ಮಲತಾಯಿ, ಲ್ಯಾಕ್‌ಮೆ ಫ್ಯಾಶನ್ ಸಂಸ್ಥಾಪಕಿ ಸೈಮನ್ ಟಾಟಾ ನಿಧನ
ಭಾರತದ 2 ಬಿಲಿಯನ್ ಡಾಲರ್ ಪರಮಾಣು ಜಲಾಂತರ್ಗಾಮಿ ಒಪ್ಪಂದ ಅಂತಿಮಗೊಳಿಸಿದ ಪುಟಿನ್ ಭೇಟಿ