
ನವದೆಹಲಲಿ(ಆ.23): ಮೆದುಳಿನ ಶಸ್ತ್ರಚಿಕಿತ್ಸೆ ಬಳಿಕ ತೀವ್ರ ಅಸ್ವಸ್ಥಗೊಂಡಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ದೀರ್ಘ ಕೋಮಾಗೆ ಜಾರಿದ್ದಾರೆಂದು ದೆಹಲಿಯ ಸೇನಾ ರೆಫೆರಲ್ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.
ಪ್ರಣಬ್, ಎಸ್‌ಪಿಬಿ ಆರೋಗ್ಯ ಸ್ಥಿತಿ ಗಂಭೀರ..!
ಆಸ್ಪತ್ರೆ ಆಡಳಿತ ಮಂಡಳಿ ಪ್ರಣಬ್ ಮುಖರ್ಜಿ ಅವರ ಆರೋಗ್ಯದ ಕುರಿತು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಆರೋಗ್ಯ ಸುಧಾರಿಸಿಲ್ಲ. ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡ ನಂತರ ದೀರ್ಘ ಕೋಮಾ ಸ್ಥಿತಿಯಲ್ಲಿದ್ದಾರೆ ಎಂದು ತಿಳಿಸಿದ್ದಾರೆ.
ಹಳ್ಳಿಯ ಹಲಸು ಕೇಳಿದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ..!
ಎರಡು ವಾರಗಳ ಹಿಂದಷ್ಟೇ ಮುಖರ್ಜಿಗೆ ಮೆದುಳು ಶಸ್ತ್ರ ಚಿಕಿತ್ಸೆ ನಡೆದಿತ್ತು. ಈ ಸರ್ಜರಿ ಯಶಸ್ವಿಯಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿದ್ದವು. ಆದರೆ ಇದಾದ ಬಿಕ ಅವರ ಆರೋಗ್ಯ ಸ್ಥಿತಿ ದಿನೇ ದಿನೇ ಹದಗೆಡಲಾರಂಭಿಸಿದೆ. ಇನ್ನು ಸರ್ಜರಿಗೂ ಮುನ್ನ ನಡೆದಿದ್ದ ಕೊರೋನಾ ಪರೀಕ್ಷೆಯಲ್ಲಿ ಅರಿಗೆ ಸೊಂಕು ತಗುಲಿರುವುದು ದೃಢಪಟ್ಟಿತ್ತು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ