ಪ್ರಶಾಂತ್‌ ಕಿಶೋರ್‌ ವಿರುದ್ಧ ಗಂಭೀರ ಆರೋಪ, FIR ದಾಖಲು!

Published : Feb 28, 2020, 01:26 PM IST
ಪ್ರಶಾಂತ್‌ ಕಿಶೋರ್‌ ವಿರುದ್ಧ ಗಂಭೀರ ಆರೋಪ, FIR ದಾಖಲು!

ಸಾರಾಂಶ

ಬಿಹಾರದಲ್ಲಿ ನಿತೀಶ್, ದೆಹಲಿಯಲ್ಲಿ ಕೇಜ್ರೀವಾಲ್‌ಗೆ ಗೆಲುವು ತಂದುಕೊಟ್ಟ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ.

ಪಟನಾ[ಫೆ.28]: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ನೇತೃತ್ವದ ಜೆಡಿಯು ವಿರುದ್ಧ ವಿಪಕ್ಷಗಳ ಸಂಘಟನೆಗಾಗಿ ಕರೆ ನೀಡಲಾಗಿದ್ದ ಬಾತ್‌ ಬಿಹಾರ್‌ ಕೀ ಅಭಿಯಾನ ಸಂಬಂಧ ಚುನಾವಣಾ ರಣತಂತ್ರಗಾರ ಪ್ರಶಾಂತ್‌ ಕಿಶೋರ್‌ ವಿರುದ್ಧ ಕೃತಿಚೌರ್ಯ ಕೇಸ್‌ ದಾಖಲಾಗಿದೆ.

ಕಾಂಗ್ರೆಸ್‌ ಜೊತೆ ಡೇಟಾ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿರುವ ಶಾಶ್ವತ್‌ ಗೌತಂ ಎಂಬುವರು ಈ ಸಂಬಂಧ ಪಾಟಲೀಪುತ್ರ ಠಾಣೆಗೆ ದೂರು ದಾಖಲಿಸಿದ್ದು, ಪ್ರಶಾಂತ್‌ ಕಿಶೋರ್‌ ಅವರು ಬಳಸಿರುವ ಬಾತ್‌ ಬಿಹಾರ್‌ ಕೀ ಪದ ಬಳಕೆಯು ತಮ್ಮದು ಎಂದು ಪ್ರತಿಪಾದಿಸಿದ್ದಾರೆ.

ಅಲ್ಲದೆ, ಈ ಹಿಂದೆ ತಮ್ಮ ಆಪ್ತನಾಗಿದ್ದ ಒಸಮಾ ಎಂಬಾತನೇ ಈ ಪದ ಪ್ರಶಾಂತ್‌ ಅವರಿಗೆ ಸಿಗುವಂತೆ ಮಾಡಿರುವಲ್ಲಿ ಪಾತ್ರ ವಹಿಸಿರಬಹುದು ಎಂದು ಶಂಕಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Dhurandhar Review: ಹಿಂದೂಗಳಿಗೆ ಪ್ರಥಮ ಶತ್ರು ಹಿಂದೂ-ಮೊಬೈಲ್‌ ಕೂಡ ನೋಡದಂತೆ ಮಾಡೋ ರಣ್‌ವೀರ್‌ ಸಿಂಗ್‌ ಸಿನಿಮಾ!
ಟೀ ಶರ್ಟ್ ಬಿಟ್ಟು ಖಾದಿ ಧರಿಸಿ ಬಂದು ರಾಜಕೀಯ ಸಂದೇಶ ರವಾನಿಸಿದ ರಾಹುಲ್ ಗಾಂಧಿ