* ಪಂಜಾಬ್ ಚುನಾವಣೆಗೆ ಎಲ್ಲಾ ಪಕ್ಷಗಳ ಭರದ ಸಿದ್ಧತೆ
* ಚುನಾವಣಾ ಕಣದಲ್ಲಿ ಗೆಲ್ಲಲು ಪಕ್ಷಗಳ ತಂತ್ರಗಾರಿಕೆ
* ಕಾಂಗ್ರೆಸ್ ಜೊತೆ ಕೈಜೋಡಿಸ್ತಾರಾ ಪ್ರಶಾಂತ್ ಕಿಶೋರ್?
ಚಂಡೀಗಢ(ನ.06): ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ (Poll strategist Prashant Kishor) 2017 ರ ವಿಧಾನಸಭಾ ಚುನಾವಣೆಯಲ್ಲಿ ಅಮರಿಂದರ್ ಸಿಂಗ್ (Amarinder Singh) ಅವರ ಪ್ರಚಾರದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು. ಪಂಜಾಬ್‌ನಲ್ಲಿ 2017ರ ಚುನಾವಣೆಯಲ್ಲಿ ಕಾಂಗ್ರೆಸ್ (Congress) ಪ್ರಚಂಡ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿತ್ತು. ಇದಾಧ ಬಳಿಕ ಈ ಹಿಂದೆ ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ (Punjab Chief Minister Charanjit Singh Channi) ಅವರು ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ನ ಪ್ರಚಾರದ ರಣತಂತ್ರ ಸಿದ್ಧಪಡಿಸಲು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರ ಸೇವೆಯನ್ನು ಬಳಸಿಕೊಳ್ಳಬಹುದು ಎಂದು ಸೂಚಿಸಿದ್ದರು. ಹೀಗಿರುವಾಗ ರಾಜ್ಯದಲ್ಲಿ ಪ್ರಶಾಂತ್ ಕಿಶೋರ್ ಅವರ ಸಹಾಯ ಕಾಂಗ್ರೆಸ್ ತೆಗೆದುಕೊಳ್ಳುತ್ತದೆಯೇ ಎಂದು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ (PPCC) ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರನ್ನು ಪ್ರಶ್ನಿಸಿದಾಗ ಅವರು ಈ ಬಗ್ಗೆ ಉತ್ತರ ಕೊಟ್ಟಿದ್ದಾರೆ.
ಹೌದು ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ (Prashant Kishor) ಅವರ ಬೆಂಬಲವನ್ನು ತೆಗೆದುಕೊಳ್ಳುತ್ತದೆಯೇ ಎಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ, ಹೀಗೆಂದು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ (ಪಿಪಿಸಿಸಿ) ಅಧ್ಯಕ್ಷ ನವಜೋತ್ ಸಿಂಗ್ ಸಿಧು (Navjot Singh Sidhu) ಶುಕ್ರವಾರ ತಿಳಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಪಕ್ಷವು ಪ್ರಶಾಂತ್ ಕಿಶೋರ್ ಅವರ ಸೇವೆಯನ್ನು ತೆಗೆದುಕೊಳ್ಳುತ್ತದೆ ಎಂದು ಸಿಎಂ ಚರಂಜಿತ್ ಸಿಂಗ್ ಚನ್ನಿ ಈ ಹಿಂದೆ ಸೂಚಿಸಿದ್ದ ಬೆನ್ನಲ್ಲೇ ಸಮಯದಲ್ಲಿ ಸಿಧು ಇಂತಹುದ್ದೊಂದು ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಅವರ ವಿಡಿಯೋ ಕೂಡಾ ವೈರಲ್ ಆಗಿದ್ದು, ಸಿದ್ದು, 'ಪಕ್ಷ ನಿರ್ಧರಿಸುತ್ತದೆ... ಮುಖ್ಯಮಂತ್ರಿ ಅವರನ್ನು ನೇಮಿಸಲು ಬಯಸಿದರೆ, ಈ ಬಗ್ಗೆ ಅಂತಿಮ ನಿರ್ಧಾರ ಪಕ್ಷದ ಹೈಕಮಾಂಡ್ (ಅವರು) ತೆಗೆದುಕೊಳ್ಳುತ್ತದೆ' ಎಂದು ಹೇಳಿದ್ದಾರೆ. ಈ ವೇಳೆ ಪಕ್ಷಕ್ಕೆ ಅಲ್ಟಿಮೇಟಮ್ ಕೂಡ ನಿಡಿದ್ದಾರೆ.
ಇನ್ನು ಪಕ್ಷದ ಪಂಜಾಬ್ ಘಟಕದ ಅಧ್ಯಕ್ಷ ಸ್ಥಾನಕ್ಕೆ ತಾನು ಕೊಟ್ಟಿದ್ದ ರಾಜೀನಾಮೆಯನ್ನು ಹಿಂಪಡೆದಿರುವುದಾಗಿ ಶುಕ್ರವಾರ ತಿಳಿಸಿರುವ ಸಿಧು, ಹೊಸ ರಾಜ್ಯದ ಅಡ್ವೊಕೇಟ್ ಜನರಲ್ ಅವರನ್ನು ತೆಗೆದುಹಾಕುವವರೆಗೆ ಮತ್ತೆ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಿಲ್ಲ ಎಂದು ಘೋಷಿಸಿದ್ದಾರೆ. ಪಂಜಾಬ್ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯನ್ನು ಹಿಂಪಡೆಯುವುದಾಗಿ ಘೋಷಿಸಿದ ಬಳಿಕವೂ ಚರಣ್‌ಜಿತ್ ಸಿಂಗ್ ಚನ್ನಿ ನೇತೃತ್ವದ ನೂತನ ಸರ್ಕಾರವನ್ನು ಸಿಧು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ್ದಾರೆ.
ಪಕ್ಷಕ್ಕೆ ಅಲ್ಟಿಮೇಟಂ ನೀಡಿದ ಸಿಧು
ಪಕ್ಷವು ಮುಂದಿನ ವಿಧಾನಸಭಾ ಚುನಾವಣೆಗೆ ತಯಾರಿ ನಡೆಸುತ್ತಿರುವಾಗಲೇ ಪಂಜಾಬ್ ಘಟಕದಲ್ಲಿ ಹೊಸ ಬಿಕ್ಕಟ್ಟನ್ನು ಉಂಟುಮಾಡಿದ ಸಿಧು ಸೆಪ್ಟೆಂಬರ್ 28 ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದಾಗ್ಯೂ, ಕೆಲವು ದಿನಗಳ ನಂತರ ಕಾಂಗ್ರೆಸ್ ನಾಯಕರು ಆಗಿನ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರೊಂದಿಗಿನ ಅಧಿಕಾರದ ಹೋರಾಟದ ನಡುವೆ ಅವರಿಗೆ ನೀಡಲಾದ ಜವಾಬ್ದಾರಿಯನ್ನು ಮುಂದುವರಿಸುತ್ತಾರೆ ಎಂಬ ಭರವಸೆ ನೀಡಿದ್ದರು.
'ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ಸಿಪಾಯಿರಾಜೀನಾಮೆಯನ್ನು ಹಿಂಪಡೆದಿದ್ದಾರೆ ಎಂದು ಹೇಳುವ ಮೂಲಕ ನಾನು ಪ್ರಾರಂಭಿಸಲು ಬಯಸುತ್ತೇನೆ' ಎಂದು ಹೇಳಿದ ಸಿಧು, 'ನಾನು ನನ್ನ ರಾಜೀನಾಮೆಯನ್ನು ಹಿಂಪಡೆದಿದ್ದೇನೆ. ಮತ್ತು ಹೊಸ ಅಡ್ವೊಕೇಟ್ ಜನರಲ್ ನೇಮಕವಾದ ದಿನ ನಾನು ಅಧಿಕಾರ ವಹಿಸಿಕೊಳ್ಳುತ್ತೇನೆ ಹಾಗೂ ನಿಭಾಯಿಸುತ್ತೇನೆ ಎಂದು ಸ್ಪಷ್ಟವಾಗಿ ಹೇಳುತ್ತೇನೆ ಎಂದಿದ್ದಾರೆ.
.