
ನವದೆಹಲಿ (ಏ.19): ಗಂಟೆಗೆ 250 ಕಿ.ಮೀ. ವೇಗದಲ್ಲಿ ಸಂಚರಿಸುವ ಸ್ವದೇಶಿ ಬುಲೆಟ್ ರೈಲು ಅಭಿವೃದ್ಧಿಪಡಿಸುವ ಕೆಲಸವನ್ನು ಕೇಂದ್ರ ಸರ್ಕಾರ ಸದ್ದಿಲ್ಲದೆ ಪ್ರಾರಂಭಿಸಿದೆ. ದೇಶದಲ್ಲಿ ಸದ್ಯ ಯಾವ ರೈಲು ಕೂಡ ಇಷ್ಟು ವೇಗವನ್ನು ಹೊಂದಿಲ್ಲ. ವಂದೇ ಭಾರತ್ ಮಾದರಿಯಲ್ಲೇ ಹೊಸ ರೈಲನ್ನು ನಿರ್ಮಾಣ ಮಾಡಲಾಗುತ್ತಿದೆ. ವಂದೇ ಭಾರತ್ ರೈಲು ಗಂಟೆಗೆ ಗರಿಷ್ಠ 220 ಕಿ.ಮೀ. ವೇಗದಲ್ಲಿ ಓಡುವ ಸಾಮರ್ಥ್ಯ ಹೊಂದಿದೆ ಎಂದು ರೈಲ್ವೆ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ಆಂಗ್ಲಪತ್ರಿಕೆಯೊಂದು ವರದಿ ಮಾಡಿದೆ.
ಚೆನ್ನೈನಲ್ಲಿರುವ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್)ಯಲ್ಲಿ ಸ್ವದೇಶಿ ಬುಲೆಟ್ ರೈಲಿನ ವಿನ್ಯಾಸ ಹಂತ ಭಾರತೀಯ ರೈಲ್ವೆಯ ಮೇಲುಸ್ತುವಾರಿಯಲ್ಲಿ ನಡೆಯುತ್ತಿದೆ ಎಂದು ವರದಿ ತಿಳಿಸಿದೆ. ಗಂಟೆಗೆ 250 ಕಿ.ಮೀ.ಗಿಂತ ಅಧಿಕ ವೇಗದಲ್ಲಿ ಸಾಗುವ ರೈಲುಗಳನ್ನು ಜಾಗತಿಕವಾಗಿ ಬುಲೆಟ್ ರೈಲು ಎಂದು ಪರಿಗಣಿಸಲಾಗುತ್ತದೆ. ಫ್ರಾನ್ಸ್‌ನ ಟ್ರೇನ್ ಎ ಗ್ರ್ಯಾಂಡೆ ವಿಟೆಸ್ಸಿ ಹಾಗೂ ಜಪಾನ್‌ನ ಶಿಂಕಾನ್ಸೇನ್ ರೈಲು ಇದೇ ವರ್ಗಕ್ಕೆ ಬರುತ್ತವೆ.
ನಾನ್ಯಾಕೆ ಆದಿಚುಂಚನಗಿರಿ ಸ್ವಾಮೀಜಿ ಪೋನ್ ಟ್ಯಾಪ್ ಮಾಡಲಿ: ಎಚ್.ಡಿ.ಕುಮಾರಸ್ವಾಮಿ
ಜಪಾನ್ ತಂತ್ರಜ್ಞಾನವನ್ನೇ ಬಳಸಿಕೊಂಡು ಭಾರತವು ಅಹಮದಾಬಾದ್- ಮುಂಬೈ ನಡುವೆ ದೇಶದ ಮೊದಲ ಬುಲೆಟ್ ರೈಲು ಮಾರ್ಗ ನಿರ್ಮಾಣ ಮಾಡುತ್ತಿದೆ. ಗಂಟೆಗೆ 320 ಕಿ.ಮೀ. ವೇಗದಲ್ಲಿ ರೈಲುಗಳು ಇಲ್ಲಿ ಸಂಚರಿಸುತ್ತವೆ. ಅದೇ ಮಾರ್ಗದಂತೆ ದೇಶದ ಉತ್ತರ, ದಕ್ಷಿಣ ಹಾಗೂ ಪೂರ್ವ ಭಾಗದಲ್ಲೂ ಬುಲೆಟ್ ರೈಲು ಸಂಚಾರ ಆರಂಭಿಸುವುದಾಗಿ ಇತ್ತೀಚೆಗೆ ಪ್ರಧಾನಿ ಘೋಷಿಸಿದ್ದು, ಅಲ್ಲಿ ಸ್ವದೇಶಿ ಬುಲೆಟ್ ರೈಲು ಬಳಕೆಯಾಗುವ ಸಾಧ್ಯತೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ