ರಾಷ್ಟ್ರಪತಿ ಕೋವಿಂದ್‌ಗೆ ಎದೆನೋವು, ಆಸ್ಪತ್ರೆಗೆ ದಾಖಲು!

Published : Mar 26, 2021, 02:28 PM IST
ರಾಷ್ಟ್ರಪತಿ ಕೋವಿಂದ್‌ಗೆ ಎದೆನೋವು, ಆಸ್ಪತ್ರೆಗೆ ದಾಖಲು!

ಸಾರಾಂಶ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆರೋಗ್ಯದಲ್ಲಿ ಚೇತರಿಕೆ| ಎದೆ ನೋವಿನ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿದ್ದ ಕೋವಿಂದ್| ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೋವಿಂದ್| ನಿನ್ನೆ ಸೇನಾ ಆಸ್ಪತ್ರೆಗೆ ದಾಖಲಾಗಿದ್ದ ಕೋವಿಂದ್

ನವದೆಹಲಿ(ಮಾ.26): ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ.

ಹೌದು ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ರಾಷ್ಟ್ರಪತಿ ಕೋವಿಂದ್‌ರವರು ಗುರುವಾರ ದೆಹಲಿಯ ಸೇನಾ ಆಸ್ಪತ್ರೆಗೆ ದಾಖಲಾಗಿದ್ದರು. ಇಲ್ಲಿ ಎಂದಿನಂತೆ ಆರೊಗ್ಯ ಪರಿಶೀಲಿಸಿದ ವೈದ್ಯರು, ತೀವ್ರ ನಿಗಾ ವಹಿಸಿ  ಚಿಕಿತ್ಸೆ ಆರಂಭಿಸಿದ್ದರು.

ಇಂದು ಕೋವಿಂದ್ ಆರೋಗ್ಯ ಚೇತರಿಕೆಯಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆಗಳಿವೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸ್ಮಶಾನದಲ್ಲಿ ನಿಗೂಢ ಕೃತ್ಯ : ಚಿತೆಯ ಮೇಲೆ ಕುರಿ ತಲೆಬುರುಡೆ; ಮದ್ಯದ ಬಾಟಲಿಗಳು, ಬೆಚ್ಚಿಬಿದ್ದ ಗ್ರಾಮಸ್ಥರು
Gold Rate Today: ಬಂಗಾರದ ಬೆಲೆ ದಿಢೀರ್ ₹1,860 ಇಳಿಕೆ! ಗೃಹಿಣಿಯರು ಫುಲ್ ಖುಷ್, ಇಂದಿನ ರೇಟ್ ಎಷ್ಟು?