
ನವದೆಹಲಿ(ಮೇ.23): ಅನಿಲ್ ಬೈಜಾಲ್ ರಾಜೀನಾಮೆಯಿಂದ ತೆರವಾಗಿದ್ದ ದೆಹಲಿ ಲೆಫ್ಟಿನೆಂಟ್ ಗವರ್ನರ್ ಸ್ಥಾನಕ್ಕೆ ಇದೀಗ ವಿನೈ ಕುಮಾರ್ ಸಕ್ಸೇನಾ ಅವರನ್ನು ನೇಮಕ ಮಾಡಲಾಗಿದೆ. ಅನಿಲ್ ಬೈಜಾಲ್ ರಾಜೀನಾಮೆಯನ್ನು ಅಂಗೀಕರಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್, ವಿನೈ ಕುಮಾರ್ ಸಕ್ಸೇನಾ ಅವರನ್ನು ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಿದೆ.
ಮೇ 18 ರಂದು ಅನಿಲ್ ಬೈಜಾಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ವೈಯುಕ್ತಿ ಕಾರಣ ನೀಡಿ ರಾಜೀನಾಮೆ ನೀಡಿದ್ದರು. ಇದೀಗ ನೂತನವಾಗಿ ನೇಮಕಗೊಂಡಿರುವ ವಿನೈ ಕುಮಾರ್ ಸಕ್ಸೇನ್ ಶೀಘ್ರದಲ್ಲೇ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.
ಸಿಎಂ ಅರವಿಂದ್ ಕೇಜ್ರಿವಾಲ್ ನಿದ್ದೆಗೆಡಿಸಿದ್ದ ದೆಹಲಿ ಲೆ.ಗವರ್ನರ್ ಅನಿಲ್ ರಾಜೀನಾಮೆ!
ಮಾರ್ಚ್ 23, 1958ರಲ್ಲಿ ಹುಟ್ಟಿದ ವಿನೈ ಕುಮಾರ್ ಸಕ್ಸೇನಾ, ಸದ್ಯ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಾನ್ಪುರ ವಿಶ್ವವಿದ್ಯಾಲಯದ ಹಳೆ ವಿದ್ಯಾರ್ಥಿಯಾಗಿರುವ ವಿನೈ ಕುಮಾರ್ ಸಕ್ಸೇನಾ, ಪೈಲೆಟ್ ಲೆಸೆನ್ಸ್ ಹೊಂದಿದ್ದಾರೆ. ಭಾರತದ 75ನೇ ವಾರ್ಷಿಕೋತ್ಸವದ ಸ್ಮರಣಾರ್ಥ ಸಮಿತಿಯ ಸದಸ್ಯರಾಗಿದ್ದರು.
2021ರ ಪದ್ಮ ಪ್ರಶಸ್ತಿ ಆಯ್ಕೆ ಸಮಿತಿಯ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ವಿನೈ ಕುಮಾರ್ ಸಕ್ಸೇನಾ ಇದೀಗ ಮತ್ತೊಂದು ಮಹತ್ತರ ಜವಾಬ್ದಾರಿ ವಹಿಸಿಕೊಳ್ಳುತ್ತಿದ್ದಾರೆ. ಕೈಗಾರಿಕಾ ಸಂಶೋಧನಾ ಮಂಡಳಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಜೆಕೆ ಗ್ರೂಪ್‌ನಲ್ಲಿ ಸಹಾಯಕ ಅಧಿಕಾರಿಯಾಗಿ ವತ್ತಿ ಜೀವನ ಆರಂಭಿಸಿದ ವಿನೈ ಕುಮಾರ್ ಸಕ್ಸೇನಾ ಸಿಇಓ ಆಗಿ ಬಡ್ತಿ ಪಡೆದು ಅತ್ಯುತ್ತಮ ಸೇವೆ ಸಲ್ಲಿಸಿದ್ದಾರೆ. ದೋಲರ್ ಪೋರ್ಟ್ ಯೋಜನೆಯ ನಿರ್ದೇಶಕರಾಗಿಯೂ ದುಡಿದಿದ್ದಾರೆ. ರಾಷ್ಟ್ರೀಯ ಮಕ್ಕಳ ಸಾಹಿತ್ಯ ಕೇಂದ್ರದ ಸ್ಥಾಪಕ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ