
ದೆಹಲಿ(ಆ.20): ಮೀಸಲು ಅಧಿಕಾರವನ್ನು ರಾಜ್ಯಗಳಿಗೆ ನೀಡುವ ಮಹತ್ವದ ಮಸೂದೆಗೆ ರಾಷ್ಟ್ರಪತಿ ರಮನಾಥ್ ಕೋವಿಂದ್ ಒಪ್ಪಿಗೆ ಸೂಚಿಸಿದ್ದಾರೆ. ಈ ಮಸೂದೆಯಡಿ ರಾಜ್ಯಗಳಿಗೆ ಹಿಂದುಳಿದ ವರ್ಗ, ಹಿಂದುಳಿದ ಜಾತಿ, ಪಂಗಡಗಳನ್ನು ಗುರುತಿಸಿ ಮೀಸಲು ನೀಡುವ ಅಧಿಕಾರವನ್ನು ನೀಡಲಾಗುತ್ತದೆ. ರಾಮನಾಥ ಕೋವಿಂದ್ ಆಗಸ್ಟ್ 18, 2021 ರಂದು ಸಂವಿಧಾನ (105 ನೇ ತಿದ್ದುಪಡಿ) ಕಾಯ್ದೆ, 2021 ಕ್ಕೆ ತಮ್ಮ ಒಪ್ಪಿಗೆ ನೀಡಿದ್ದಾರೆ.
ಈ ಮಸೂದೆಯಡಿಯಲ್ಲಿ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳನ್ನು ಗುರುತಿಸಿ ಮೀಸಲು ನೀಡುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಸಿಗಲಿದೆ. ಸಂವಿಧಾನ(105) ಮಸೂದೆ 2021 ಸಂಸತ್ತಿನಲ್ಲಿ ಆಗಸ್ಟ್ 11ರಂದು ಪಾಸಾಗಿತ್ತು. ಸಾಂವಿಧಾನಿಕ ತಿದ್ದುಪಡಿ ಮಸೂದೆಗೆ ಆ.11ರಂದು ರಾಜ್ಯಸಭೆ ಸರ್ವಾನುಮತದ ಅಂಗೀಕಾರ ನೀಡಿತ್ತು. ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಗೊಂಡ ಈ ಮಹತ್ವದ ಸಾಂವಿಧಾನಿಕ ತಿದ್ದುಪಡಿ ಮಸೂದೆ ಕಾಯ್ದೆಯಾಗಿ ರೂಪುಗೊಳ್ಳಲು ಈಗ ರಾಷ್ಟ್ರಪತಿಗಳ ಒಪ್ಪಿಗೆಯೂ ದೊರೆತಾಗಿದೆ.
ಒಬಿಸಿ ಮಸೂದೆಗೆ ರಾಷ್ಟ್ರಪತಿ ಸಹಿ ಬಾಕಿ: ರಾಜ್ಯಸಭೆಯಲ್ಲೂ ವಿಧೇಯಕ ಅಂಗೀಕಾರ
ಕಾಯಿದೆಯ ಪ್ರಕಾರ ಪ್ರತಿ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶವು ಕಾನೂನಿನ ಪ್ರಕಾರ, ತನ್ನ ಸ್ವಂತ ಉದ್ದೇಶಗಳಿಗಾಗಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ ಪಟ್ಟಿಯನ್ನು ಸಿದ್ಧಪಡಿಸಬಹುದು ಮತ್ತು ನಿರ್ವಹಿಸಬಹುದು. ಇದು ಕೇಂದ್ರ ಪಟ್ಟಿಯಿಂದ ಭಿನ್ನವಾಗಿರಬಹುದು.
ಈ ಹಿಂದೆ, ಮರಾಠಾ ಕೋಟಾ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯವು 2018 ರಲ್ಲಿ ಮಹಾರಾಷ್ಟ್ರ ಸರ್ಕಾರದಿಂದ ತರಲಾದ ಮರಾಠ ಸಮುದಾಯಕ್ಕೆ ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿಯನ್ನು ರದ್ದುಗೊಳಿಸಿತು. ಇದು ಮೊದಲು ವಿಧಿಸಲಾಗಿದ್ದ ಶೇಕಡಾ 50 ರ ಮಿತಿಯನ್ನು ಮೀರಿದೆ ಎಂದು ಹೇಳಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ