ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣದ ಮುಖ್ಯಾಂಶಗಳು - ಜೈಹಿಂದ್

Published : Aug 14, 2021, 08:06 PM ISTUpdated : Aug 14, 2021, 09:31 PM IST
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣದ ಮುಖ್ಯಾಂಶಗಳು - ಜೈಹಿಂದ್

ಸಾರಾಂಶ

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಾಷ್ಟ್ರವನ್ನುದ್ದೇಶಿ ಕೋವಿಂದ್ ಭಾಷಣ ಸಮಸ್ತ ಭಾರತೀಯರಿಗೆ ಸ್ವಾತಂತ್ರ್ಯ ದಿನಾಚರಣೆ ಶುಭಾಶಯ ತಿಳಿಸಿದ ರಾಷ್ಟ್ರಪತಿ ಭಾರತದ ಸ್ವಾತಂತ್ರ್ಯ ಹೋರಾಟ ನೆನೆಪಿಸಿದ ಕೋವಿಂದ್

ನವದೆಹಲಿ(ಆ.14): ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ದೇಶವನ್ನುದ್ದೇಶಿ ಭಾಷಣ ಮಾಡಿದ್ದಾರೆ.  ಈ ಬಾರಿ ಭಾರತ ಅಮೃತ ಮಹೋತ್ಸವ ಸಂಭ್ರಮದಲ್ಲಿದೆ. ಭಾಷಣದ ಆರಂಭದಲ್ಲೇ ಕೋವಿಂದ್ ದೇಶ-ವಿದೇಶಗಳಲ್ಲಿರುವ ಸಮಸ್ತ ಭಾರತೀಯರಿಗೆ ಸ್ವಾತಂತ್ರ್ಯ ದಿನಾಚರಣೆ ಶುಭಾಶಯ ತಿಳಿಸಿದ್ದಾರೆ.  

ಪ್ಲಾಸ್ಟಿಕ್ಕಿಂದ ತಯಾರಿಸಿದ ರಾಷ್ಟ್ರಧ್ವಜ ಬಳಸಬೇಡಿ: ರಾಜ್ಯಗಳಿಗೆ ಸೂಚನೆ!

ಈ ವರ್ಷದಿಂದ ಭಾರತದ ಸ್ವಾತಂತ್ರ್ಯ ದಿನಾಚರಣೆ ಹಲವು ವಿಶೇಷತೆಗಳಿಂದ ಆಚರಿಸಲಾಗುತ್ತಿದೆ. ಕಾರಣ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಸ್ಮರಣೀಯವಾಗಿದೆ ಎಂದು ಕೋವಿಂದ್ ಹೇಳಿದರು. ನಾವು ಸ್ವಾತಂತ್ರ್ಯ ಸಿಕ್ಕ ದಿನವನ್ನು ಸಂಭ್ರಮದಿಂದ ಆಚರಿಸುತ್ತೇವೆ. ಆದರೆ ಈ ದಿನದ ಹಿಂದೆ ಹಲವರ ತ್ಯಾಗ ಬಲಿದಾನಗಳಿವೆ. ದೇಶ ಕಾಣದ ಹಲವರ ಹೋರಾಟ, ತಿಳಿಯದೇ, ಅರಿಯದೇ ಹೋದ ಹಲವರ ಬಲಿದಾನಗಳಿವೆ ಎಂದು ಕೋವಿಂದ್ ಹೇಳಿದರು.

ಭಾರತ ಆಚರಿಸುತ್ತಿರುವುದು 74 ಅಥವಾ 75ನೇ ಸ್ವಾತಂತ್ರ್ಯ ದಿನಾಚರಣೆ? ಗೊಂದಲಕ್ಕೆ ಇಲ್ಲಿದೆ ಉತ್ತರ!

ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ, ಹೋರಾಟ ಮಾಡಿದ ಸ್ವಾತಂತ್ರ್ಯ ವೀರರಿಗೆ ನನ್ನ ನಮನಗಳು. ಈ ಸಂದರ್ಭದಲ್ಲಿ ನಿಂತು ಹಿಂದಿನ 75 ವರ್ಷಗಳನ್ನು ಮೆಲುಕು ಹಾಕಿದರೆ ನಾವೆಷ್ಟು ದೂರ ಸಾಗಿದ್ದೇವೆ ಅನ್ನೋದು ಅರಿವಾಗುತ್ತದೆ. ಹಲವು ಅಡೆ ತಡೆಗಳನ್ನು ಮೆಟ್ಟಿ ನಿಂತು ಒಗ್ಗಟ್ಟಾಗಿ ಹೋರಾಡಿದ್ದೇವೆ. ಸವಾಲುಗಳನ್ನು ಒಗ್ಗಟ್ಟಾಗಿ ಎದುರಿಸಿದ್ದೇವೆ. ನೋವು ನಲಿವುಗಳನ್ನು ಸಮನಾಗಿ ಹಂಚಿದ್ದೇವೆ ಎಂದರು.

 

ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಸಾಧನೆ ಬಾರಿಯ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮತ್ತಷ್ಟು ಹೆಚ್ಚಿಸಿದೆ. 121 ವರ್ಷಗಳ ಒಲಿಂಪಿಕ್ಸ್ ಇತಿಹಾಸದಲ್ಲಿ ಈ ಬಾರಿ ಭಾರತ ಅತೀ ಹೆಚ್ಚು ಸ್ಪರ್ದಿಗಳನ್ನು ಕ್ರೀಡಾಕೂಟಕ್ಕೆ ಕಳುಹಿಸಿದೆ. ಇಷ್ಟೇ ಅಲ್ಲ ಪದಕ ಭೇಟೆಯಲ್ಲೂ ಭಾರತದ ಗಣನೀಯ ಸಾಧನೆ ಮಾಡಿದೆ ಎಂದರು.

ಸ್ವಾತಂತ್ರ್ಯ ದಿನಕ್ಕೂ ಮೊದಲು ರಾಷ್ಟ್ರಪತಿ ಕೋವಿಂದ್‌ಗೆ VR9 ಭದ್ರತೆಯ ಹೊಸ ಮರ್ಸಿಡಿಸ್ ಕಾರು!

ಅಮೃತ ಮಹೋತ್ಸವದಲ್ಲಿರುವ ನಮಗೆ ಸಂಭ್ರಮ ಹೆಚ್ಚಿದೆ. ಆದರೆ ದೇಶದಲ್ಲಿ ಕೊರೋನಾ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ ಎಚ್ಚರ ಮರೆಯಬಾರದು. ಮುಂಜಾಗ್ರತ ಕ್ರಮ ಕೈಗೊಳ್ಳಬೇಕು. ಕೊರೋನಾ ಮಾರ್ಗಸೂಚಿ ಪಾಲಿಸಬೇಕು ಎಂದು ಕೋವಿಂದ್ ಎಚ್ಚರಿಕೆ ನೀಡಿದರು. ಪ್ರತಿಯೊಬ್ಬರು ಕೊರೋನಾ ಹೋರಾಟದಲ್ಲಿ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

India Latest News Live: ಕೆಎಸ್‌ಸಿಎ ಚುನಾವಣೆ - ಅಸ್ತಿತ್ವದಲ್ಲೇ ಇಲ್ಲದ ಕ್ಲಬ್‌ಗಳ ಹೆಸರು ಮತದಾನ ಪಟ್ಟಿಯಲ್ಲಿ ಪತ್ತೆ!
ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಡಿಕೆಗೆ ದಿಲ್ಲಿ ಪೊಲೀಸ್‌ ನೋಟಿಸ್‌