
ದೆಹಲಿ(ಏ.23); ಕೊರೋನಾ ವೈರಸ್ ಬರದಂತೆ ತಡೆಯಲು ಸಾಮಾಜಿಕ ಅಂತರ, ಶುಚಿತ್ವ ಜೊತೆಗೆ ಮುಖಕ್ಕೆ ಮಾಸ್ಕ್ ಅವಶ್ಯಕ. ಆದರೆ ಲಾಕ್‌ಡೌನ್‌ನಿಂದ ಒಂದು ಹೊತ್ತಿನ ಊಟಕ್ಕೆ ಪರದಾಡುವವರಿಗೆ ಮಾಸ್ಕ್ ಖರೀದಿ ಅಸಾಧ್ಯ. ಇದೀಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪತ್ನಿ ಸವಿತಾ ಕೋವಿಂದ್ ತಾವೇ ಖುದ್ದ ಮಾಸ್ಕ್ ಹೊಲಿದು ಬಡವರಿಗೆ ವಿತರಿಸುತ್ತಿದ್ದಾರೆ. ಇವರ ಕಾರ್ಯಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಅಭಿವೃದ್ಧಿಯಲ್ಲಿ ದೇಶಕ್ಕೇ ಮಾದರಿ ಗುಜರಾತ್, ಕೊರೋನಾ ತಡೆಯುವಲ್ಲಿ ಹಿಂದೆ
ದೆಹಲಿಯಲ್ಲಿನ ಬಡವರು, ನಿರ್ಗತಿಕರಿಗೆ ಸವಿತಾ ಕೋವಿಂದ್ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಖುದ್ದು ಮಾಸ್ಕ್ ತಯಾರಿಸಿ ಉಚಿತವಾಗಿ ವಿತರಿಸುತ್ತಿದ್ದಾರೆ. ಈ ಮೂಲಕ ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ತಾವು ಪಾಲ್ಗೊಂಡಿದ್ದಾರೆ.
ರಾಷ್ಟ್ರಪತಿ ನಿವಾಸದಲ್ಲಿ ಶಕ್ತಿ ಹಾಟ್‌ನಲ್ಲಿ ಸವಿತಾ ಕೋವಿಂದ್ ಖುದ್ದಾಗಿ ಮಾಸ್ಕ್ ಹೊಲಿಯುತ್ತಿದ್ದಾರೆ. ತಾವು ಮಾಸ್ಕ್ ಹಾಕಿಕೊಂಡು ಮಾಸ್ಕ್ ಹೊಲಿಯುತ್ತಿದ್ದಾರೆ. ಈ ಚಿತ್ರವನ್ನು ಕರ್ನಾಟಕ ಬಿಜೆಪಿ ಅಧೀಕೃತ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದೆ. ಕೆಲವೇ ಕ್ಷಣಗಳಲ್ಲಿ ಸವಿತಾ ಕೋವಿಂದ್ ಕಾರ್ಯವನ್ನು ಶ್ಲಾಘಿಸಿದ್ದಾರೆ.
ಸವಿತಾ ಕೋವಿಂದ್ ಅವರ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಬಂದ ಪ್ರತಿಕ್ರಿಯೆಗಳು ಇಲ್ಲಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ