ವಿದೇಶದಿಂದ ಭಾರತದಲ್ಲಿ ತಲ್ಲಣ ಸೃಷ್ಟಿಸುವ ಪ್ರಯತ್ನಗಳು ಈ ಬಾರಿ ನಡೆದಿಲ್ಲ: ಪ್ರಧಾನಿ ಮೋದಿ

Published : Feb 01, 2025, 09:05 AM ISTUpdated : Feb 01, 2025, 11:03 AM IST
ವಿದೇಶದಿಂದ ಭಾರತದಲ್ಲಿ ತಲ್ಲಣ ಸೃಷ್ಟಿಸುವ ಪ್ರಯತ್ನಗಳು ಈ ಬಾರಿ ನಡೆದಿಲ್ಲ: ಪ್ರಧಾನಿ ಮೋದಿ

ಸಾರಾಂಶ

ಸಂಸತ್‌ ಅಧಿವೇಶನಕ್ಕೂ ಮುನ್ನ ವಿದೇಶದಿಂದ ಭಾರತದಲ್ಲಿ ತಲ್ಲಣ ಸೃಷ್ಟಿಸುವ ಪ್ರಯತ್ನಗಳು ಈ ಬಾರಿ ನಡೆದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ನವದೆಹಲಿ: ‘ಪ್ರತೀ ಬಾರಿ ಸಂಸತ್‌ ಅಧಿವೇಶನಕ್ಕೂ ಮುನ್ನ ಭಾರತದಲ್ಲಿ ತಲ್ಲಣ ಸೃಷ್ಟಿಸುವಂತಹ ಕೆಲಸ ಮಾಡಲು ವಿದೇಶದಲ್ಲಿ ಯಾರಾದರೂ ತಯಾರಿರುತ್ತಿದ್ದರು. ಆದರೆ 10 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಅಂತಹ ಪ್ರಯತ್ನಗಳು ನಡೆದಿಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಬಜೆಟ್‌ ಅಧಿವೇಶನಕ್ಕೂ ಮುನ್ನ ಮಾತನಾಡಿದ ಮೋದಿ, ‘2014ರಿಂದ ಮೊದಲ ಬಾರಿ, ಅಧಿವೇಶನಕ್ಕೂ ಒಂದೆರಡು ದಿನದ ಹಿಂದೆ ವಿದೇಶದಲ್ಲಿ ಕಿಡಿ ಹತ್ತಿ, ಭಾರತದಲ್ಲಿ ಬೆಂಕಿ ಹಚ್ಚುವ ಕೆಲಸ ನಡೆದಿಲ್ಲ’ ಎನ್ನುವ ಮೂಲಕ ಪರೋಕ್ಷವಾಗಿ ವಿಪಕ್ಷ ಕಾಂಗ್ರೆಸ್‌ನ ಕಾಲೆಳೆದಿದ್ದಾರೆ.

ಕಳೆದ ಕೆಲ ವರ್ಷಗಳಿಂದ ಸಂಸತ್‌ ಅಧಿವೇಶನಕ್ಕೂ ಮುನ್ನ ವಿದೇಶಿ ಸಂಸ್ಥೆಗಳು ಭಾರತ, ಭಾರತೀಯರ ವಿರುದ್ಧ, ಭಾರತ ಸರ್ಕಾರದ ವಿರುದ್ಧ ವರದಿಗಳನ್ನು ಪ್ರಕಟಿಸುತ್ತಿದ್ದವು. ಅದು ಭಾರೀ ಗದ್ದಲಕ್ಕೆ ಕಾರಣವಾಗಿ ಇಡೀ ಅಧಿವೇಶನವನ್ನೇ ಬಲಿ ಪಡೆಯುತ್ತಿತ್ತು. ಇದರ ಜೊತೆಗೆ ಕಳೆದ ವರ್ಷ ರಾಹುಲ್‌ ಗಾಂಧಿ ತಮ್ಮ ಲಂಡನ್‌ ಭೇಟಿ ವೇಳೆ ಭಾರತದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಹೇಳಿದ ಸುದ್ದಿ ಕೂಡಾ ಭಾರೀ ಗದ್ದಲಕ್ಕೆ ಕಾರಣವಾಗಿತ್ತು. ಹಿಂಡನ್‌ಬರ್ಗ್‌ ವರದಿ ಕೂಡಾ ಇಂಥದ್ದೇ ಗದ್ದಲಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: ರಾಷ್ಟ್ರಪತಿಯನ್ನೇ ಬಡಪಾಯಿ ಮಹಿಳೆ ಎಂದ ಸೋನಿಯಾ ಗಾಂಧಿ: ಬುಡಕಟ್ಟು ಜನರಿಗೆ ಅಪಮಾನ ಎಂದ ಮೋದಿ

ಪ್ರಧಾನಿಯವರ ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಸಂಸದೆ ಪ್ರಿಯಾಂಕಾ ಗಾಂಧಿ, ‘ಅವರು (ಮೋದಿ) ಎಂದೂ ಜನರ ಸಮಸ್ಯೆಗಳ ಬಗ್ಗೆ ಮಾತನಾಡಿ, ಅವುಗಳನ್ನು ಬಗೆಹರಿಸುವುದಿಲ್ಲ. ಕಳೆದ ಬಾರಿಯ ಅಧಿವೇಶನದಲ್ಲೂ ಚರ್ಚೆಗೆ ಅನುವು ಮಾಡಿಕೊಡಲಿಲ್ಲ’ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಮೋದಿ ಸರ್ಕಾರ ಹಿಂದೆಗಿಂತ 3 ಪಟ್ಟು ವೇಗದಲ್ಲಿ ಕೆಲಸ : ರಾಷ್ಟ್ರಪತಿ ದ್ರೌಪದಿ ಮುರ್ಮು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
ಪುಟಿನ್ ಔತಣಕೂಟಕ್ಕೆ ರಾಹುಲ್ ಗಾಂಧಿ-ಖರ್ಗೆಗಿಲ್ಲ ಆಮಂತ್ರಣ, ಶಶಿ ತರೂರ್‌ಗೆ ಜಾಕ್‌ಪಾಟ್