ರಾಜೀನಾಮೆ ಸ್ವೀಕರಿಸಿದ ದ್ರೌಪದಿ ಮುರ್ಮು, ಮುಂದಿನ ಸರ್ಕಾರ ರಚನೆಯಾಗುವರೆಗೂ ಹಂಗಾಮಿ ಪ್ರಧಾನಿಗಳಾಗಿ ಮುಂದುವರಿಯುವಂತೆ ಸೂಚಿಸಿದ್ದಾರೆ. ನರೇಂದ್ರ ಮೋದಿಯವರ ಜೊತೆಯಲ್ಲಿ ಅವರ ಸಂಪುಟದ ಎಲ್ಲಾ ಸಚಿವರು ಸಹ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ನವದೆಹಲಿ: 17ನೇ ಲೋಕಸಭಾ ಅವಧಿ ಅಂತ್ಯವಾದ ಹಿನ್ನೆಲೆ ನರೇಂದ್ರ ಮೋದಿ (Narendra Modi) ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು (President Draupadi Murmu) ಅವರನ್ನು ಭೇಟಿಯಾದ ನರೇಂದ್ರ ಮೋದಿ ರಾಜೀನಾಮೆ ಸಲ್ಲಿಸಿದರು. ರಾಜೀನಾಮೆ ಸ್ವೀಕರಿಸಿದ ದ್ರೌಪದಿ ಮುರ್ಮು, ಮುಂದಿನ ಸರ್ಕಾರ ರಚನೆಯಾಗುವರೆಗೂ ಹಂಗಾಮಿ ಪ್ರಧಾನಿಗಳಾಗಿ ಮುಂದುವರಿಯುವಂತೆ ಸೂಚಿಸಿದ್ದಾರೆ. ನರೇಂದ್ರ ಮೋದಿಯವರ ಜೊತೆಯಲ್ಲಿ ಅವರ ಸಂಪುಟದ ಎಲ್ಲಾ ಸಚಿವರು ಸಹ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ಬಹುಮತ ಸಿಕ್ಕಿದ್ದು, ನರೇಂದ್ರ ಮೋದಿಯವರೇ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಜೂನ್ 8ರ ಶನಿವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಚುನಾವಣೆಯಲ್ಲಿ 240 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಇಂದು ಸಂಜೆ ದೆಹಲಿಯಲ್ಲಿ ಎನ್‌ಡಿಎ ನಾಯಕರ ಸಭೆ ನಡೆಯಲಿದೆ. ಸಭೆಗೆ ಅಮಿತ್ ಶಾ ಅವರೇ ಕರೆ ಮಾಡಿ ಎಲ್ಲರಿಗೂ ಆಹ್ವಾನ ನೀಡಿದ್ದಾರೆ. ಸಭೆಯಲ್ಲಿ ನರೇಂದ್ರ ಮೋದಿ, ಜೆಪಿ ನಡ್ಡಾ, ಅಮಿತ್ ಶಾ, ರಾಜನಾಥ್ ಸಿಂಗ್ ಸೇರಿದಂತೆ ಬಿಜೆಪಿ ಮತ್ತು ಎನ್‌ಡಿಎ ಕೂಟ ಪ್ರಮುಖ ಗಣ್ಯರು ಭಾಗಿಯಾಗಲಿದ್ದಾರೆ.
ಹೊಸ ಸರ್ಕಾರ ರಚನೆಯಾಗುವರೆಗೂ ನರೇಂದ್ರ ಮೋದಿ ಹಂಗಾಮಿ ಪ್ರಧಾನಿಯಾಗಿ ಮುಂದುವರಿಯುತ್ತಾರೆ. ಇಂದು ಬೆಳಗ್ಗೆ ನರೇಂದ್ರ ಮೋದಿಯವರು 17ನೇ ಲೋಕಸಭಾ ಸರ್ಕಾರದ ಕೊನೆಯ ಸಂಪುಟ ಸಭೆ ನಡೆಸಿದ್ದರು. ಸಂಪುಟ ಸಭೆಯ ಬಳಿಕ ನೇರವಾಗಿ ರಾಷ್ಟ್ರಪತಿ ಭವನಕ್ಕೆ ತೆರಳಿ ಸಂಪುಟ ಸಚಿವರ ಜೊತೆಯಾಗಿ ರಾಜೀನಾಮೆ ಸಲ್ಲಿಸಿದರು.
ಸರ್ಕಾರ ರಚನೆ ಕಸರತ್ತು: ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ನಿತೀಶ್, ತೇಜಸ್ವಿ ಯಾದವ್
ಇತ್ತ 234 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಐಎನ್‌ಡಿಐಎ ಒಕ್ಕೂಟ ಸಹ ಸರ್ಕಾರ ರಚನೆಗೆ ಕಸರತ್ತು ನಡೆಸುತ್ತಿದೆ. ಈ ಎಲ್ಲಾ ಬೆಳವಣಿಗೆ ನಡುವೆ ತೇಜಸ್ವಿ ಯಾದವ್ ಮತ್ತು ನಿತೀಶ್ ಕುಮಾರ್ ಜೊತೆಯಾಗಿಯೇ ದೆಹಲಿಗೆ ಆಗಮಿಸಿದ್ದಾರೆ. ಇತ್ತ ಟಿಡಿಪಿ ಚಂದ್ರಬಾಬು ನಾಯ್ಡು ತಮ್ಮ ಬೆಂಬಲ ಎನ್‌ಡಿಎಗೆ ಎಂದು ಘೋಷಿಸಿದ್ದಾರೆ. ನಿತೀಶ್ ಕುಮಾರ್ ತಟಸ್ಥವಾಗಿ ಉಳಿದುಕೊಂಡಿದ್ದಾರೆ. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಾವು ಐಎನ್‌ಡಿಐಎ ಕೂಟದ ಭಾಗವಾಗಿದ್ದು, ದೆಹಲಿಯ ಸಭೆಯಲ್ಲಿ ಭಾಗಿಯಾಗೋದಾಗಿ ಘೋಷಿಸಿದ್ದಾರೆ.
प्रधानमंत्री ने राष्ट्रपति भवन में राष्ट्रपति द्रौपदी मुर्मु से मुलाकात की। प्रधानमंत्री ने अपना और केन्द्रीय मंत्रिपरिषद का त्यागपत्र सौंपा। राष्ट्रपति ने त्यागपत्र स्वीकार करते हुए प्रधानमंत्री तथा उनके सहयोगियों से नई सरकार के गठन तक अपने पद पर बने रहने का… pic.twitter.com/n9yri078uH
— President of India (@rashtrapatibhvn)543 ಸದಸ್ಯ ಬಲದ ಲೋಕಸಭೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 294 ಸ್ಥಾನಗಳನ್ನು ಗಳಿಸಿದೆ. ಲೋಕಸಭೆಯಲ್ಲಿ ಅಧಿಕಾರ ಹಿಡಿಯುವುದಕ್ಕೆ 272 ಸೀಟುಗಳ ಅಗತ್ಯವಿದೆ. ಸರಳ ಬಹುಮತಕ್ಕಿಂತ 22 ಸೀಟು ಹೆಚ್ಚೇ ಎನ್‌ಡಿಎ ಮೈತ್ರಿಕೂಟ ಗೆದ್ದಿದೆ. ಹಾಗಾಗಿ ಮೈತ್ರಿ ಪಕ್ಷದ ನಾಯಕರನ್ನು ವಿಶ್ವಾಸದಲ್ಲಿ ಹಿಡಿದಿಟ್ಟುಕೊಳ್ಳುವುದು ತುಂಬಾ ಅವಶ್ಯವಾಗಿದೆ.
ದಕ್ಷಿಣ ಭಾರತದಲ್ಲಿ ಕಮಾಲ್ ಮಾಡಿದ ಪ್ರಧಾನಿ ಮೋದಿ ರೋಡ್ ಶೋ.. ಉತ್ತರದಲ್ಲೇ ಅನಿರೀಕ್ಷಿತ ಆಘಾತ
ಇತ್ತ ಇಂಡಿಯಾ ಮೈತ್ರಿಕೂಟವೂ ಸರಳ ಬಹುಮತಕ್ಕಿಂತ 38 ಸೀಟು ಕಡಿಮೆ ಗೆದ್ದಿದೆ. ಹೀಗಾಗಿ ಎನ್‌ಡಿಎ ಮೈತ್ರಿಕೂಟದಲ್ಲಿರುವ ಬಿಹಾರ ಜೆಡಿಯುನ ನಿತೀಶ್ ಕುಮಾರ್ ಹಾಗೂ ಆಂಧ್ರ ಪ್ರದೇಶ ಟಿಡಿಪಿಯ ಚಂದ್ರಬಾಬು ನಾಯ್ಡು ಇಲ್ಲಿ ಕಿಂಗ್ ಮೇಕರ್ ಆಗಿ ಹೊರ ಹೊಮ್ಮಿದ್ದು, ಇಂದು ದೆಹಲಿಯ ಖಾಸಗಿ ಹೊಟೇಲ್‌ನಲ್ಲಿ ನಡೆಯುವ ಎನ್‌ಡಿಎ ಕೂಟದ ಸಭೆಯಲ್ಲಿ ಇವರಿಗೆ ವಿಶೇಷ ಸ್ಥಾನಮಾನ ದೊರೆಯಲಿದೆ.