ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಸಂದರ್ಭದಲ್ಲಿ ಪ್ರಿಯಾಂಕಾ ಗಾಂಧಿ ಕೆನ್ನೆಯಂತೆ ರಸ್ತೆ ನಿರ್ಮಿಸುವುದಾಗಿ ಬಿಜೆಪಿ ನಾಯಕ ರಮೇಶ್ ಬಿಧೂರಿ ಹೇಳಿಕೆ ನೀಡಿದ್ದಾರೆ. ಪ್ರಿಯಾಂಕಾ ಗಾಂಧಿ ಈ ಹೇಳಿಕೆಯನ್ನು ಖಂಡಿಸಿದ್ದಾರೆ.
ನವದೆಹಲಿ: ‘ದೆಹಲಿ ಚುನಾವಣೆಯಲ್ಲಿ ಗೆದ್ದರೆ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕೆನ್ನೆಯಂತೆ ರಸ್ತೆ ನಿರ್ಮಿಸುತ್ತೇನೆ’ ಎಂದು ಹೇಳಿದ್ದ ಬಿಜೆಪಿ ರಮೇಶ್ ಬಿಧೂರಿ ಹೇಳಿಕೆಗೆ ತಿರುಗೇಟು ನೀಡಿರುವ ಪ್ರಿಯಾಂಕಾ, ನನ್ನ ಕೆನ್ನೆ ಬಗ್ಗೆ ಮಾತನಾಡುವ ರಮೇಶ್ ತಮ್ಮ ಕೆನ್ನೆ ಬಗ್ಗೆ ಮಾತನಾಡುವುದಿಲ್ಲ’ ಎಂದು ಹೇಳಿದ್ದಾರೆ. ದೆಹಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಇಲ್ಲಿ ಪ್ರಮುಖ ವಿಷಯಗಳ ಕುರಿತು ಚರ್ಚೆ ಮಾಡುವ ಈ ರೀತಿಯ ಅಸಂಬದ್ಧ ಹೇಳಿಕೆ ಸರಿಯಲ್ಲ ಎಂದು ಕಾಂಗ್ರೆಸ್ ಸಂಸದೆ ಕಿಡಿಕಾರಿದ್ದಾರೆ.
ರಮೇಶ್ ಬಿಧುರಿ ಹೇಳಿದ್ದೇನು?
ಈ ಹಿಂದೆ ಲಾಲೂ ಪ್ರಸಾದ್ ಯಾದವ್, ಬಿಹಾರದ ರಸ್ತೆಗಳನ್ನು ನಟಿ ಹೇಮಾ ಮಾಲಿನಿಯವರ ಕೆನ್ನೆಯಂತೆ ಮಾಡುವೆ ಎಂದು ಹೇಳಿದ್ದರು. ಆದ್ರೆ ಅವರಿಂದ ಆ ಕೆಲಸ ಮಾಡಲು ಆಗಲಿಲ್ಲ. ಇಂದು ನಾನು ನಿಮಗೆಲ್ಲರಿಗೂ ಒಕ್ಲಾ ಮತ್ತು ಸಂಗಮ್ ವಿಹಾರ್ ರಸ್ತೆಗಳಂತೆಯೇ ಕಾಲ್ಕಾಜಿಯ ರೋಡ್‌ಗಳನ್ನು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿಯವರ ಕೆನ್ನೆಯಂತೆ ಮಾಡಿಕೊಡುತ್ತೇನೆ ಎಂದು ಭರವಸೆ ನೀಡುತ್ತೇನೆ ಎಂದಿದ್ದರು.
ಇನ್ನು ತಮ್ಮ ಹೇಳಿಕೆ ದೊಡ್ಡಮಟ್ಟದಲ್ಲಿ ಸುದ್ದಿ ಆಗುತ್ತಿದ್ದಂತೆ ಎಚ್ಚೆತ್ತ ರಮೇಶ್ ಬಿಧುರಿ ವಿಷಾಧ ವ್ಯಕ್ತಪಡಿಸಿದರು. ತಮ್ಮ ಹೇಳಿಕೆಯಿಂದ ಯಾರಿಗಾದ್ರೂ ನೋವು ಆಗಿದ್ರೆ ಮಾತನ್ನು ಹಿಂಪಡೆಯುವ ಅಂದಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: 'ಕೇರಳ ಮಿನಿ ಪಾಕಿಸ್ತಾನ, ಅದಕ್ಕೆ ರಾಹುಲ್-ಪ್ರಿಯಾಂಕಾ ಗೆಲ್ತಿದ್ದಾರೆ..' ಮಹಾರಾಷ್ಟ್ರ ಮಂತ್ರಿಯ ವಿವಾದಾತ್ಮಕ ಹೇಳಿಕ