ಮೋದಿ ಸೊಕ್ಕಿನ ರಾಜನಿದ್ದಂತೆ: ಪ್ರಿಯಾಂಕಾ ಗರಂ

Kannadaprabha News   | Asianet News
Published : Feb 21, 2021, 08:27 AM IST
ಮೋದಿ  ಸೊಕ್ಕಿನ ರಾಜನಿದ್ದಂತೆ: ಪ್ರಿಯಾಂಕಾ ಗರಂ

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಹಳೆ ಕಥೆಗಳಲ್ಲಿ ಬರುವ ಸೊಕ್ಕಿನ ರಾಜ ಇದ್ದಂತೆ ಎಂದು ಪ್ರಿಯಾಂಕ ಗರಂ ಆಗಿದ್ದಾರೆ. ಅವರಿಗೆ ರೈತರ ಸಂಕಷ್ಟಗಳು ಅರ್ಥವೇ ಆಗುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. 

ಲಖನೌ (ಫೆ.21): ಹಗಲಿರುಳನ್ನೂ ಲೆಕ್ಕಿಸದೆ ನಮ್ಮ ಶತ್ರುಗಳಿಂದ ದೇಶವನ್ನು ರಕ್ಷಿಸುತ್ತಿರುವ ಯೋಧರು ಸಹ ರೈತನ ಮಕ್ಕಳೇ ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅರ್ಥವಾಗುತ್ತಿಲ್ಲ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕಿಡಿಕಾರಿದ್ದಾರೆ. 

ಅಲ್ಲದೆ 3 ಕೃಷಿ ಕಾಯ್ದೆಗಳ ವಿರುದ್ಧ ಅಷ್ಟೆಲ್ಲಾ ಪ್ರತಿಭಟನೆಗಳು ನಡೆಯುತ್ತಿದ್ದರೂ, ಅವುಗಳನ್ನು ಹಿಂಪಡೆಯಲು ಮುಂದಾಗದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಳೇ ನೀತಿ ಕಥೆಗಳಲ್ಲಿ ಬರುವ ಸೊಕ್ಕಿನ ಅಥವಾ ಅಹಂಕಾರಿಯ ರಾಜ ಎಂದು ಟೀಕಿಸಿದ್ದಾರೆ.

ನೀತಿ ಆಯೋಗದ ಸಭೆಯಲ್ಲಿ ಮೋದಿ ಮುಂದೆ ಕೆಲ ಮಹತ್ವದ ಬೇಡಿಕೆ ಇಟ್ಟ ಸಿಎಂ

 ಉತ್ತರ ಪ್ರದೇಶದ ಮುಜಾಫ್ಫರನಗರದಲ್ಲಿ ಶನಿವಾರ ಕಾಂಗ್ರೆಸ್‌ ಏರ್ಪಡಿಸಿದ್ದ ಕಿಸಾನ್‌ ಮಹಾಪಂಚಾಯತ್‌ ಉದ್ದೇಶಿಸಿ ಮಾತನಾಡಿದ ಪ್ರಿಯಾಂಕಾ ವಾದ್ರಾ ಪೆಟ್ರೋಲ್‌, ಡೀಸೆಲ್‌, ಎಲ್‌ಪಿಜಿ ಸಿಲಿಂಡರ್‌, ವಿದ್ಯುತ್‌ ದರ ಏರಿಕೆಯಾಗುತ್ತಿದೆ. ಆದರೆ ರೈತರ ಕಬ್ಬು ಬೆಳೆಗಳ ಬೆಲೆ ಮಾತ್ರ ಏರಿಕೆಯಾಗುತ್ತಿಲ್ಲ. 

ನೂತನ ಕೃಷಿ ಕಾಯ್ದೆ ಜಾರಿಯಿಂದ ಎಪಿಎಂಸಿ ಮತ್ತು ರೈತರ ಬೆಳೆಗಳಿಗೆ ಸಿಗುತ್ತಿರುವ ಬೆಂಬಲ ಬೆಲೆ(ಎಂಎಸ್‌ಪಿ) ರದ್ದಾಗಲಿದೆ ಎಂದು ದೂರಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Morphing Wing: ಹಾರಾಡುವಾಗಲೇ ಕ್ಷಣ ಮಾತ್ರದಲ್ಲಿ ಬದಲಾಗುತ್ತೆ ಫೈಟರ್‌ ಜೆಟ್‌ ಶೇಪ್‌, ಹೊಸ ಟೆಕ್ನಾಲಜಿ ಪರೀಕ್ಷಿಸಿದ ಡಿಆರ್‌ಡಿಓ
ವೈರಲ್ ಮೀಮ್ಸ್ ಆಗಿದ್ದ ಯುವಕನ ಫೋಟೋದ ಹಿಂದಿದೆ ನೋವಿನ ಕತೆ: 38 ವರ್ಷ ಬರೀ ದ್ರವಾಹಾರದಲ್ಲೇ ಬದುಕಿದ್ದ ಪಂಚಾಲ್