
ನವದೆಹಲಿ/ಬಠಿಂಡಾ(ಏ.20): ದೇಶಾದ್ಯಂತ ಕೊರೋನಾ ಎರಡನೇ ಅಲೆಯ ಬಾಧೆ ತೀವ್ರವಾಗಿದ್ದರೂ, ಕೃಷಿ ಮಸೂದೆ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ ಮಾತ್ರ ನಿಂತಿಲ್ಲ. ದೆಹಲಿಯಲ್ಲಿ 6 ದಿನಗಳ ಲಾಕ್‌ಡೌನ್ ಘೋಷಣೆ ಮಾಡಿದ್ದರೂ, ಚಳವಳಿಯನ್ನು ಮುಂದುವರಿಸುವುದಾಗಿ ರೈತ ನಾಯಕರು ಹೇಳಿಕೊಂಡಿದ್ದಾರೆ.
ಮತ್ತೊಂದೆಡೆ, ಕಾಯ್ದೆ ವಿರುದ್ಧ ಹರಾರಯಣದಲ್ಲಿ ನಡೆಯುತ್ತಿರುವ ಹೋರಾಟ 200 ದಿನಗಳನ್ನು ಪೂರೈಸಿದ್ದು, ಅಲ್ಲಿನ ರೈತರು ಕೂಡ ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಇದರಿಂದಾಗಿ ಪ್ರತಿಭಟನಾ ಸ್ಥಳಗಳಿಗೆ ಕೋವಿಡ್ ಆತಂಕ ಎದುರಾಗಿದೆ.
ಕೃಷಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಹೋರಾಟವನ್ನು ಮುಂದುವರಿಸುವುದರ ಜತೆಗೆ, ಕೋವಿಡ್ ಸಮಸ್ಯೆಗೆ ಪ್ರತಿಭಟನಾಕಾರರು ಸಿಲುಕದಂತೆ ನೋಡಿಕೊಳ್ಳುವ ಹೆಚ್ಚುವರಿ ಹೊಣೆಗಾರಿಕೆಯೂ ರೈತ ನಾಯಕರ ಮೇಲೆ ಬಿದ್ದಿದೆ. ಮತ್ತೊಂದೆಡೆ ಏ.21ರಂದು ಹರಾರಯಣದ ಬಹಾದೂರ್‌ಗಢ ಟೋಲ್ ಪ್ಲಾಜಾ ಮುಚ್ಚಲು ರೈತರು ಗಡುವು ನೀಡಿದ್ದಾರೆ. ಅಂದು ಹೆಚ್ಚಿನ ಸಂಖ್ಯೆಯಲ್ಲಿ ಸೇರುವಂತೆಯೂ ರೈತರಿಗೆ ಕರೆ ಕೊಟ್ಟಿದ್ದಾರೆ.
ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡೇ ಹೋರಾಟ ನಡೆಸುತ್ತಿದ್ದೇವೆ. ಕೋವಿಡ್ ಭೀತಿ ನಮಗೆ ಮಾತ್ರವೇ? ಪ್ರಧಾನ ನರೇಂದ್ರ ಮೋದಿ ಅವರು ಭಾನುವಾರ ಲಕ್ಷಾಂತರ ಜನರನ್ನುದ್ದೇಶಿಸಿ ರಾರಯಲಿ ಮಾಡಿಲ್ಲವೇ ಎಂದು ರೈತ ನಾಯಕರು ಪ್ರಶ್ನಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ