ಆಮ್ ಆದ್ಮಿ ಪಾರ್ಟಿಯಲ್ಲಿ ತಳಮಳ, ದಿಢೀರ್ ರಾಜೀನಾಮೆ ನೀಡಿದ ಇಬ್ಬರು ಶಾಸಕರು ಬಿಜೆಪಿ ಸೇರಲು ಸಿದ್ಧತೆ

Published : Nov 01, 2026, 05:18 PM IST
arvind kejriwal

ಸಾರಾಂಶ

ಆಮ್ ಆದ್ಮಿ ಪಾರ್ಟಿಯಲ್ಲಿ ಕೋಲಾಹಲ ಶುರುವಾಗಿದೆ. ಇಬ್ಬರು ಶಾಸಕರು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿ ಹೊರಬಂದಿದ್ದಾರೆ. ಇದೀಗ ಈ ಇಬ್ಬರು ಬಿಜೆಪಿ ಸೇರಲು ತಯಾರಿ ನಡೆಸಿದ್ದಾರೆ. ಇಬ್ಬರು ನಾಯಕರ ನಡೆ ಆಪ್ ಪಾರ್ಟಿಗೆ ತೀವ್ರ ಹಿನ್ನಡೆ ತಂದಿದೆ.

ನವದೆಹಲಿ (ನ.01) ಆಮ್ ಆದ್ಮಿ ಪಾರ್ಟಿ ಸದ್ಯ ದೆಹಲಿಯಲ್ಲಿ ಅಧಿಕಾರ ಪಡೆಯಲು, ಪಂಜಾಬ್‌ನಲ್ಲಿ ಅಧಿಕಾರ ಉಳಿಸಿಕೊಳ್ಳಲು ರಣತಂತ್ರ ಮಾಡುತ್ತಿದೆ. ಇದರ ನಡುವೆ ಇಬ್ಬರು ಶಾಸಕರು ಆಮ್ ಆದ್ಮಿ ಪಾರ್ಟಿಗೆ ರಾಜೀನಾಮೆ ನೀಡಿ ಹೊರಬಂದಿದ್ದಾರೆ. ಪಂಜಾಬ್ ವಿಧಾನಸಭಾ ಚುನಾವಣೆಗೆ ಮೊದಲ ಅಭ್ಯರ್ಥಿಗಳ ಪಟ್ಟಿ ಘೋಷಣೆ ಬೆನ್ನಲ್ಲೇ ಇಬ್ಬರು ಶಾಸಕರು ರಾಜೀನಾಮೆ ನೀಡಿದ್ದಾರೆ. ಇವರ ಕ್ಷೇತ್ರದ ಟಿಕೆಟ್ ಇನ್ನು ಘೋಷಣೆಯಾಗಿಲ್ಲ. ಇದರ ಮೊದಲ ಆಮ್ ಆದ್ಮಿ ಪಾರ್ಟಿಗೆ ಗುಡ್ ಬೈ ಹೇಳಿದ್ದಾರೆ. ಮೂಲಗಳ ಪ್ರಕಾರ ಇಬ್ಬರು ನಾಯಕರು ಬಿಜೆಪಿ ಸೇರಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಅಭ್ಯರ್ಥಿ ಘೋಷಣೆ ಮರುದಿನವೇ ಆಪ್‌ಗೆ ಶಾಕ್

ಪಂಜಾಬ್‌‌ನಲ್ಲಿನ ಆಡಳಿತರೂಢ ಆಮ್ ಆದ್ಮಿ ಪಾರ್ಟಿಗೆ ತೀವ್ರ ಹಿನ್ನಡೆಯಾಗಿದೆ. 2027ರ ವಿಧಾನಸಭಾ ಚುನಾವಣೆಗೆ ಎಲ್ಲರಿಗಿಂತ ಮೊದಲು ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಘೋಷಣೆ ಮಾಡಿತ್ತು. ಈ ಘೋಷಣೆಯ ಮರುದಿನವೇ ಇಬ್ಬರು ಶಾಸಕರು ರಾಜೀನಾಮೆ ನೀಡಿದ್ದಾರೆ. ಶಾಸಕರಾದ ಹರ್ಮಿತ್ ಸಿಂಗ್ ಪಥನ್ಮಜ್ರ ಹಾಗೂ ಚೇತನ್ ಸಿಂಗ್ ಜೋರಾಮಜ್ರ ಇಬ್ಬರು ರಾಜೀನಾಮೆ ನೀಡಿ ಹೊರಬಂದಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣೆ ಬಳಿಕ ಬಿಜೆಪಿ ನೇರವಾಗಿ ಪಂಜಾಬ್ ಹಿಡಿಯಲು ಮುಂದಾಗಿದೆ. ಪಂಜಾಬ್‌ನಲ್ಲಿ ಕಳೆದ ಕೆಲ ವರ್ಷಗಳಿಂದ ಬಿಜೆಪಿ ಹಾಗೂ ಆರ್‌ಎಸ್ಎಸ್ ಕೆಲಸ ಮಾಡುತ್ತಿದೆ. ಪಂಜಾಬ್‌ನಲ್ಲಿ ಕಾಂಗ್ರೆಸ್ ಮತ್ತಷ್ಟು ದುರ್ಬಲಗೊಂಡಿದೆ. ಗಟ್ಟಿಯಾಗಿ ನೆಲೆ ನಿಂತಿದ್ದ ಆಮ್ ಆದ್ಮಿ ಪಾರ್ಟಿ ಪಂಜಾಬ್‌ನಲ್ಲಿ ಇದೀಗ ಸಮಸ್ಯೆ ಎದುರಿಸುತ್ತಿದೆ. ಭಗವಂತ್ ಮಾನ್ ಆಡಳಿತ ಕುರಿತು ಪಂಜಾಬ್ ಜನತೆ ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಿದ್ದಾರೆ. ಇತ್ತ ಆಡಳಿತ ವಿರೋಧಿ ಅಲೆಯೂ ಆಮ್ ಆದ್ಮಿ ಪಾರ್ಟಿಗೆ ತಲೆನೋವಾಗಿದೆ. ಈ ಬೆಳಣಿಗೆ ನಡುವೆ ಇಬ್ಬರ ರಾಜೀನಾಮೆ ಇದೀಗ ಬಿಜೆಪಿ ಆತ್ಮಿವಿಶ್ವಾಸ ಹೆಚ್ಚಿಸಿದೆ.

ಪಕ್ಷದೊಳಗಿನ ಬಿಕ್ಕಟ್ಟು

ಇಬ್ಬರು ನಾಯಕರು ಆಮ್ ಆದ್ಮಿ ಪಾರ್ಟಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ಪಂಜಾಬ್ ಆಮ್ ಆದ್ಮಿ ಪಾರ್ಟಿ ಅಧ್ಯಕ್ಷ ಅಮನ್ ಅರೋರಾಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಇಬ್ಬರು ನಾಯಕರ ಸನೌರ್ ಹಾಗೂ ಸಾಮನಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಇಬ್ಬರ ಕ್ಷೇತ್ರದ ಟಿಕೆಟ್ ಇನ್ನೂ ಘೋಷಣೆಯಾಗಿಲ್ಲ. ಆದರೆ ಪಕ್ಷದೊಳಗಿನ ಬಿಕ್ಕಟ್ಟು, ಈ ಬಾರಿ ಟಿಕೆಟ್ ಸಿಗುವ ಅನುಮಾನ, ನಾಯಕತ್ವ ಗೊಂದಲದ ನಡುವೆ ಇಬ್ಬರು ರಾಜೀನಾಮೆ ನೀಡಿ ಹೊರಬಂದಿದ್ದಾರೆ.

ಆಮ್ ಆದ್ಮಿ ಪಾರ್ಟಿ ಪಂಜಾಬ್‌ನಲ್ಲಿ ಅಧಿಕಾರ ಉಳಿಸಿಕೊಳ್ಳಲು ಹೋರಾಡುತ್ತಿದೆ. ಆದರೆ ಪಂಜಾಬ್‌ನ ಬೆಳವಣಿಗೆಗಳು ಆಮ್ ಆದ್ಮಿ ಪಾರ್ಟಿಗೆ ವಿರುದ್ಧವಾಗಿದೆ. ಇದರ ನಡುವೆ ಬಿಜೆಪಿ ಸತತವಾಗಿ ಕಾರ್ಯನಿರ್ವಹಿಸುತ್ತಿದ್ದು, ಪಂಜಾಬ್ ಚುನಾವಣೆ ಮೇಲೆ ಕಣ್ಣಿಟ್ಟಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರಿನಿಂದ ಮುಂಬೈ, ಚೆನ್ನೈ, ಹೈದರಾಬಾದ್ ನಗರಗಳಿಗೆ ಬುಲೆಟ್ ಟ್ರೈನ್: 4000 ಕಿಮೀ ಯೋಜನೆಗೆ ಮೋದಿ ಅಂಕಿತ!
ವಿದೇಶ ಪ್ರಯಾಣಿಕರಿಗೂ ‘ಡಿಜಿ ಯಾತ್ರಾ’ ಸೌಲಭ್ಯ: ಬೆಂಗಳೂರು ಸೇರಿ 7 ಏರ್‌ಪೋರ್ಟ್‌ಗಳಲ್ಲಿ ಪ್ರಾಯೋಗಿಕ ಜಾರಿ