
ನವದೆಹಲಿ(ಜು.02): ರಾಷ್ಟ್ರಪತಿ ಚುನಾವಣೆ ಬೆನ್ನಲ್ಲೇ ಉಪರಾಷ್ಟ್ರಪತಿ ಚುನಾವಣೆಗೆ ಕಸರತ್ತು ಆರಂಭಗೊಂಡಿದೆ. ಆಗಸ್ಟ್ 6 ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ತಯಾರಿ ನಡೆಯುತ್ತಿದೆ. ಇದರ ನಡುವೆ ಎನ್‌ಡಿಎ ಕೂಟದ ಅಭ್ಯರ್ಥಿಯಾಗಿ ಬಿಜೆಪಿ ಪಂಜಾಬ್ ಮಾಜಿ ಸಿಎಂ, ಪಂಜಾಬ್ ಲೋಕ ಕಾಂಗ್ರೆಸ್ ನಾಯಕ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರನ್ನು ಘೋಷಿಸಿಲು ತಯಾರಿ ನಡೆಸಿದೆ ಎಂದು ಅಮರಿಂದರ್ ಕಚೇರಿ ಮಾಹಿತಿ ನೀಡಿದೆ.
80 ವರ್ಷದ ಕ್ಯಾಪ್ಟನ್ ಅಮರಿಂದರ್ ಸಿಂಗ್ ಸದ್ಯ ಲಂಡನ್‌ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಬೆನ್ನು ನೋವಿನ ಕಾರಣ ಶಸ್ತ್ರಚಿಕಿತ್ಸೆಗೆ ಒಳಗಾದ ಅಮರಿಂದರ್ ಸಿಂಗ್ ಚೇತರಿಸಿಕೊಳ್ಳುತ್ತಿದ್ದಾರೆ. ಕಳೆದ ಭಾನುವಾರ ಅಮರಿಂದರ್ ಸಿಂಗ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಬಳಿಕ ಪ್ರಧಾನಿ ನರೇಂದ್ರ ಮೋದಿ ಅಮರಿಂದರ್ ಸಿಂಗ್ ಅವರಿಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಇದೇ ವೇಳೆ ಉಪರಾಷ್ಟ್ರಪತಿ ಅಭ್ಯರ್ಥಿ ಕುರಿತ ಮಾತುಕತೆಯೂ ನಡೆದಿದೆ ಎಂದು ಅಮರಿಂದರ್ ಸಿಂಗ್ ಕಚೇರಿ ಮಾಹಿತಿ ಬಹಿರಂಗ ಪಡಿಸಿದೆ.
ದೇವೇಗೌಡರ ಬೆಂಬಲ ಕೇಳಿದ ದ್ರೌಪದಿ ಮುರ್ಮು
ಪಂಜಾಬ್ ವಿಧಾನಸಭಾ ಚುನಾವಣಗೂ ಮುನ್ನ ಪಂಜಾಬ್ ಕಾಂಗ್ರೆಸ್‌ನಲ್ಲಿನ ಭಿನ್ನಮತದಿಂದ ಒಢೆದು ಹೋಳಾಗಿತ್ತು. ಇಷ್ಟೇ ಅಲ್ಲ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್‌ರನ್ನು ಕಾಂಗ್ರೆಸ್ ನಿರ್ಲಕ್ಷ್ಯಿಸಿತ್ತು. ಇದರಿಂದ ಬೇಸತ್ತ ಅಮರಿಂದರ್ ಸಿಂಗ್, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಲ್ಲದೇ, ಕಾಂಗ್ರೆಸ್‌ನಿಂದ ಹೊರಬಂದು ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷ ಕಟ್ಟಿದರು. ಇಷ್ಟೇ ಅಲ್ಲ ಎನ್‌ಡಿಎ ಕೂಟಕ್ಕೆ ಸೇರಿಕೊಂಡಿದ್ದರು.
ಹಾಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವಧಿ ಆಗಸ್ಟ್ 10ಕ್ಕೆ ಅಂತ್ಯಗೊಳ್ಳಲಿದೆ. ಆಗಸ್ಟ್ 6 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಜುಲೈ 19 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಜು.20ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಹಿಂಪಡೆಯಲು ಜು.22 ಕೊನೆಯ ದಿನ.
ರಾಜ್ಯಸಭೆ ಚುನಾವಣೆಗೆ ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರು ಮಾತ್ರ ಮತದಾರರು. ರಾಜ್ಯಗಳ ಶಾಸಕರಿಗೆ ಅವಕಾಶವಿಲ್ಲ. ಲೋಕಸಭೆಯಲ್ಲಿ ಎನ್‌ಡಿಎ ಬಹುಮತ ಹೊಂದಿದ್ದು, ರಾಜ್ಯಸಭೆಯಲ್ಲೂ ಬಹುಮತದ ಅಂಚಿನಲ್ಲಿದೆ ಹೀಗಾಗಿ ಎನ್‌ಡಿಎ ಅಭ್ಯರ್ಥಿಯೇ ಉಪರಾಷ್ಟ್ರಪತಿ ಆಗುವುದು ನಿಶ್ಚಿತ.
ಸದ್ಯ ಎಲ್ಲಾ ಪಕ್ಷಗಳು ರಾಷ್ಟ್ರಪತಿ ಚುನಾವಣೆಯಲ್ಲಿ ಬ್ಯುಸಿಯಾಗಿದೆ. ಜುಲೈ 18ಕ್ಕೆ ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಜುಲೈ 21ಕ್ಕೆ ಮತಏಣಿಕೆ ನಡೆಯಲಿದ್ದು, ಫಲಿತಾಂಶ ಹೊರಬೀಳಲಿದೆ. ಎನ್‌ಡಿಎ ಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ಗೆಲುವು ಬಹುತೇಕ ಪಕ್ಕಾ ಆಗಿದೆ. ಆದರೆ ಪ್ರತಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹ ಕಣದಲ್ಲಿದ್ದು, ಕಾಂಗ್ರೆಸ್ ರಣತಂತ್ರ ಹೆಣೆಯುತ್ತಿದೆ.
ರಾಷ್ಟ್ರಪತಿ ಚುನಾವಣೆಗೆ ವಿಪಕ್ಷ ಅಭ್ಯರ್ಥಿ ಯಶವಂತ್ ಸಿನ್ಹ ನಾಮಪತ್ರ, ಟಿಆರ್‌ಎಸ್ ಬೆಂಬಲ!
ರಾಷ್ಟ್ರಪತಿ ಸ್ಥಾನಕ್ಕೆ ಯುಪಿಎ ಬೆಂಬಲಿತ ಅಭ್ಯರ್ಥಿಯಾಗಿ ಕೇಂದ್ರದ ಮಾಜಿ ಸಚಿವ ಯಶವಂತ ಸಿನ್ಹಾ ನಾಮಪತ್ರ ಸಲ್ಲಿಸಿರುವ ಹಿನ್ನೆಲೆಯಲ್ಲಿ ಕಾರ್ಯತಂತ್ರ ರೂಪಿಸಲು ಜು.3 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.
ರಾಷ್ಟ್ರಪತಿ ಸ್ಥಾನಕ್ಕೆ ಯುಪಿಎ ಬೆಂಬಲಿತ ಅಭ್ಯರ್ಥಿಯಾಗಿ ಕೇಂದ್ರದ ಮಾಜಿ ಸಚಿವ ಯಶವಂತ ಸಿನ್ಹಾ ನಾಮಪತ್ರ ಸಲ್ಲಿಸಿರುವ ಹಿನ್ನೆಲೆಯಲ್ಲಿ ಕಾರ್ಯತಂತ್ರ ರೂಪಿಸಲು ಜು.3 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಅಂದು ಬೆಳಿಗ್ಗೆ 11 ಗಂಟೆಗೆ ವಸಂತ ನಗರದಲ್ಲಿರುವ ಶಾಂಗ್ರಿಲಾ ಹೋಟೆಲ್‌ನಲ್ಲಿ ವಿಧಾನ ಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು ವಿಧಾನ ಸಭೆ, ವಿಧಾನ ಪರಿಷತ್, ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರು ತಪ್ಪದೇ ಸಭೆಗೆ ಹಾಜರಾಗಬೇಕು ಎಂದು ಎಲ್ಲ ಸದಸ್ಯರಿಗೂ ಪತ್ರ ಬರೆಯಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ