ಹರ್ಭಜನ್ ಸಿಂಗ್, ರಾಘವ್ ಚಡ್ಡಾಗೆ ದೊಡ್ಡ ಜವಾಬ್ದಾರಿ ಕೊಟ್ಟ ಬಿಜೆಪಿ ಹೈಕಮಾಂಡ್; ಪಂಜಾಬ್ ಚುನಾವಣೆಗೆ 'SAD' ಟ್ವಿಸ್ಟ್

Published : Nov 15, 2026, 11:41 PM IST
Raghav Chadha, Harbhajan Singh named in BJP's Punjab poll manifesto panel

ಸಾರಾಂಶ

2027ರ ಪಂಜಾಬ್ ವಿಧಾನಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ ನಡೆಸಿದೆ. ಆಪ್ ತೊರೆದು ಬಿಜೆಪಿ ಸೇರಿರುವ ಹರ್ಭಜನ್ ಸಿಂಗ್ ಮತ್ತು ರಾಘವ್ ಚಡ್ಡಾಗೆ ಪ್ರಣಾಳಿಕೆ ಸಿದ್ಧಪಡಿಸುವ ಮಹತ್ವದ ಜವಾಬ್ದಾರಿಯನ್ನು ಹೈಕಮಾಂಡ್ ನೀಡಿದೆ.

ನವದೆಹಲಿ: ಆಮ್ ಆದ್ಮಿ ತೊರೆದು ಬಿಜೆಪಿ ಸೇರಿದ್ದ ರಾಜ್ಯಸಭಾ ಸಂಸದ ಹರ್ಭಜನ್ ಸಿಂಗ್ ಮತ್ತು ರಾಘವ್ ಚಡ್ಡಾಗೆ ಹೈಕಮಾಂಡ್ ಮಹತ್ವದ ಜವಾಬ್ದಾರಿ ಕೊಟ್ಟಿದೆ. 2027ರಲ್ಲಿ ಪಂಜಾಬ್ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಆಪ್ ಪಕ್ಷವನ್ನು ನೆಲಕಚ್ಚಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ಪ್ಲಾನ್ ಮಾಡಿದೆ. ಅಂತೆಯೇ ಚುನಾವಣೆಗೆ ಬೇಕಾದ ಪ್ರಣಾಳಿಕೆ ಸಿದ್ಧಪಡಿಸಲು ಅವಕಾಶ ನೀಡಿದೆ.

ಪ್ರಣಾಳಿಕೆ ತಯಾರಿಕೆಯ ಜವಾಬ್ದಾರಿ

ಇವತ್ತು ಪಂಜಾಬ್ ಬಿಜೆಪಿ ರಾಜ್ಯಾಧ್ಯಕ್ಷ ಕೇವಲ್ ಸಿಂಗ್ ಧಿಲ್ಲೋನ್ ಚುನಾವಣಾ ಸಿದ್ಧತೆಗಾಗಿ ಸಮಿತಿ ಪ್ರಕಟಿಸಿದ್ದಾರೆ. ಮಾಜಿ ರಾಜ್ಯಸಭಾ ಸಂಸದ ಅವಿನಾಶ್ ರಾಯ್ ಖನ್ನಾ ನೇತೃತ್ವದಲ್ಲಿ 13 ಸದಸ್ಯರ ಪ್ರಣಾಳಿಕೆ ಸಮಿತಿ ರಚಿಸಲಾಗಿದೆ. ಇದರಲ್ಲಿ ಹರ್ಭಜನ್ ಸಿಂಗ್ ಮತ್ತು ರಾಘವ್ ಚಡ್ಡಾ ಪ್ರಮುಖ ಸದಸ್ಯರಾಗಿ ಕೆಲಸ ಮಾಡಲಿದ್ದಾರೆ.

ಇನ್ನೊಂದೆಡೆ ಆಪ್‌ನಿಂದ ಬಿಜೆಪಿಗೆ ಬಂದಿದ್ದ ಇತರ ಮೂವರು ರಾಜ್ಯಸಭಾ ಸಂಸದರಾದ ವಿಕ್ರಮ್‌ಜಿತ್ ಸಿಂಗ್ ಸಾಹ್ನಿ, ಅಶೋಕ್ ಮಿತ್ತಲ್ ಮತ್ತು ಸಂದೀಪ್ ಪಾಠಕ್‌ಗೆ ಆಡಳಿತಾರೂಢ ಆಪ್ ಸರ್ಕಾರದ ವಿರುದ್ಧ ಆರೋಪ ಪಟ್ಟಿ ಸಿದ್ಧಪಡಿಸುವ ಸಮಿತಿಯಲ್ಲಿ ಸ್ಥಾನ ನೀಡಲಾಗಿದೆ. ಪಂಜಾಬ್ ಬಿಜೆಪಿ ಮಾಜಿ ಅಧ್ಯಕ್ಷ ಸುನಿಲ್ ಜಾಖರ್ ಈ 14 ಸದಸ್ಯರ ಸಮಿತಿಯ ನೇತೃತ್ವ ವಹಿಸಲಿದ್ದಾರೆ.

ಹರ್ಭಜನ್ ಸಿಂಗ್ ಮತ್ತು ರಾಘವ್ ಚಡ್ಡಾ ಜೊತೆಗೆ ಮನ್‌ಪ್ರೀತ್ ಸಿಂಗ್ ಬಾದಲ್, ಅಶ್ವನಿ ಶರ್ಮಾ, ಮನೋರಂಜನ್ ಕಾಲಿಯಾ, ಸೋಮ್ ಪ್ರಕಾಶ್, ರಾಣಾ ಗುರ್ಮಿತ್ ಸಿಂಗ್ ಸೋಧಿ, ಅಶ್ವನಿ ಸೆಖ್ರಿ, ಸತ್ನಾಮ್ ಸಿಂಗ್ ಸಂಧು, ರಾಜಿಂದರ್ ಗುಪ್ತಾ, ಪರಂಪಾಲ್ ಕೌರ್ ಮತ್ತು ವಕೀಲ ಎಚ್.ಎಸ್. ಫೂಲ್ಕಾ ಅವರು ಪ್ರಣಾಳಿಕೆ ಸಮಿತಿಯಲ್ಲಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ 2027ರ ಪಂಜಾಬ್ ಚುನಾವಣೆಗೆ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ (SAD) ನಡುವೆ ಸೀಟು ಹಂಚಿಕೆ ಮಾತುಕತೆ ನಡೆಯುತ್ತಿದೆ ಎಂದು ವರದಿಯಾಗಿದೆ. ಸೀಟು ಹಂಚಿಕೆ ಅಂತಿಮಗೊಂಡ ನಂತರ ಈ ತಿಂಗಳ ಅಂತ್ಯದಲ್ಲಿ ಅಧಿಕೃತ ಘೋಷಣೆಯಾಗುವ ನಿರೀಕ್ಷೆಯಿದೆ.

ಕೃಷಿ ಕಾಯ್ದೆಗಳನ್ನು ವಿರೋಧಿಸಿ 2020ರ ಸೆಪ್ಟೆಂಬರ್‌ನಲ್ಲಿ ಅಕಾಲಿದಳವು ಬಿಜೆಪಿಯೊಂದಿಗಿನ 24 ವರ್ಷಗಳ ಮೈತ್ರಿಯನ್ನು ಕಡಿದುಕೊಂಡಿದೆ. ಇತ್ತೀಚೆಗೆ ದೆಹಲಿ ಮತ್ತು ಚಂಡೀಗಢದಲ್ಲಿ ನಡೆದ ಕಾರ್ಯಕ್ರಮಗಳಲ್ಲಿ ಮಾತನಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, 2027ರಲ್ಲಿ ಪಂಜಾಬ್‌ನಲ್ಲಿ ಎನ್‌ಡಿಎ (NDA) ಸರ್ಕಾರ ರಚಿಸಲಿದೆ ಎಂದು ಭವಿಷ್ಯ ನುಡಿದಿದ್ದರು. ಇದು ಬಿಜೆಪಿ-ಅಕಾಲಿದಳ ಮರುಮೈತ್ರಿಯ ಚರ್ಚೆಗೆ ಮತ್ತಷ್ಟು ಪುಷ್ಟಿ ನೀಡಿದೆ.

ಪಂಜಾಬ್ ಬಿಜೆಪಿ ಚುನಾವಣಾ ಉಸ್ತುವಾರಿ ಹಾಗೂ ಕೇಂದ್ರ ಸಚಿವ ಸಿ.ಆರ್.ಪಾಟೀಲ್ ನವೆಂಬರ್ 17ರಂದು ಚಂಡೀಗಢದಲ್ಲಿ ರಾಜ್ಯ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ. ಇತ್ತೀಚೆಗಷ್ಟೇ ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ ಕೂಡ ಪ್ರಧಾನಿ ನರೇಂದ್ರ ಮೋದಿಯನ್ನು ದೆಹಲಿಯಲ್ಲಿ ಭೇಟಿಯಾಗಿದ್ದಾರೆ. ಒಟ್ಟಾರೆಯಾಗಿ.. ಆಪ್ ತೊರೆದು ಬಂದ ಪ್ರಭಾವಿ ನಾಯಕರನ್ನೇ ಮುಂದಿಟ್ಟುಕೊಂಡು ಪಂಜಾಬ್‌ನಲ್ಲಿ ಆಪ್ ಸರ್ಕಾರ ಕಟ್ಟಿಹಾಕಲು ಬಿಜೆಪಿ ರಣತಂತ್ರ ರೂಪಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೊದಲ ನೋಟದಲ್ಲೇ ಪ್ರೀತಿ! ಮದುವೆ ಆಸೆಗೆ ಕೆನಡಾದಿಂದ ಭಾರತಕ್ಕೆ ಬಂದ 61ರ ಮಹಿಳೆ, 2 ದಿನದಲ್ಲಿ ರೋಚಕ ಟ್ವಿಸ್ಟ್
ಹನುಮಾನ್​ ಚಾಲೀಸಾ ಹೇಳುತ್ತಿರುವಾಗಲೇ ಮೆದುಳಿನ ಆಪರೇಷನ್​ ಸಕ್ಸಸ್​: ವೈದ್ಯಲೋಕವೇ ಮೂಕವಿಸ್ಮಯ