'ಪ್ರಧಾನಿ ಮೋದಿ ಹೆದರಿದ್ದಾರೆ ಎಂದು ಚೀನಾಗೂ ಗೊತ್ತು'

Published : Feb 28, 2021, 11:04 AM IST
'ಪ್ರಧಾನಿ ಮೋದಿ ಹೆದರಿದ್ದಾರೆ ಎಂದು ಚೀನಾಗೂ ಗೊತ್ತು'

ಸಾರಾಂಶ

 ಭಾರತ-ಚೀನಾ ಗಡಿ ಉದ್ವಿಗ್ನತೆ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ| 'ಪ್ರಧಾನಿ ಮೋದಿ ಹೆದರಿದ್ದಾರೆ ಎಂದು ಚೀನಾಗೂ ಗೊತ್ತು'

ತೂತುಕುಡಿ(ಫೆ.28): ಭಾರತ-ಚೀನಾ ಗಡಿ ಉದ್ವಿಗ್ನತೆ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ನಮ್ಮ ಪ್ರಧಾನಿ ಭಯಭೀತರಾಗಿದ್ದಾರೆ ಎಂದು ಚೀನೀಯರಿಗೂ ಗೊತ್ತಿದೆ ಎಂದು ಕುಹಕವಾಡಿದ್ದಾರೆ.

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ 3 ದಿನಗಳ ಕಾಲ ತಮಿಳುನಾಡಿಗೆ ಭೇಟಿ ನೀಡಿರುವ ರಾಹುಲ್‌ ಗಾಂಧಿ ಶನಿವಾರ ಮಾತನಾಡಿ, ‘2017ರಲ್ಲಿ ಚೀನಾ ಡೋಕ್ಲಾಂ ಪ್ರದೇಶದ ಅತಿಕ್ರಮಣ ಮಾಡಿ ಭಾರತ ಹೇಗೆ ಪ್ರತಿಕ್ರಿಯಿಸಬಹುದೆಂದು ಪರೀಕ್ಷಿಸಿತು. ಆದರೆ ಭಾರತ ಪ್ರತಿಕ್ರಿಯಿಸಲಿಲ್ಲ. ಹಾಗಾಗಿ ಚೀನಾ ಮುಂದೆ ಲಡಾಖ್‌ನಲ್ಲಿ ಅತಿಕ್ರಮಕ್ಕೆ ಮುಂದಾಯಿತು. ಆಗಲೂ ಪ್ರಧಾನಿ ಮೋದಿ ‘ಭಾರತಕ್ಕೆ ಯಾರೂ ಕಾಲಿಟ್ಟಿಲ್ಲ’ ಎಂದು ಹೇಳಿದರು. ಇದರಿಂದಾಗಿ ಭಾರತ ಪ್ರಧಾನಿ ಭಯಭೀತರಾಗಿದ್ದಾರೆ ಎಂದು ಚೀನಾಗೆ ಅರ್ಥವಾಗಿತ್ತು’ ಎಂದು ಛಾಟಿ ಬೀಸಿದರು.

ಇದೇ ವೇಳೆ ಪ್ರಧಾನಿ ಮೋದಿ ದೇಶದ ಇಬ್ಬರು ವ್ಯಕ್ತಿಗಳಿಗೆ ಮಾತ್ರ ಉಪಯುಕ್ತರಾಗಿದ್ದಾರೆ. ಆ ಎರಡು ಜನ ಪ್ರಧಾನಿಯನ್ನು ಬಳಸಿಕೊಂಡು ತಮ್ಮ ಸಂಪತ್ತನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೆಹೆಂದಿಯಾಗಿತ್ತು, ಆದರೆ ಮದುವೆಯಾಗಲ್ಲ: ಕೊನೆಗೂ Palash Muchhal ಜೊತೆಗಿನ ಸಂಬಂಧಕ್ಕೆ ತೆರೆ ಎಳೆದ Smriti Mandhana
ಮನೆಯಲ್ಲಿ ಒಂದು ರೂಪಾಯಿ ಇಲ್ಲ ಆದ್ರೂ ಸಿಸಿಟಿವಿ ಯಾಕೆ ಹಾಕಿದ್ರಿ: ಸಿಕ್ಕಿದ್ದನ್ನು ದೋಚಿ ಪತ್ರ ಬರೆದಿಟ್ಟು ಹೋದ ಕಳ್ಳ