
ನವದೆಹಲಿ (ಅ.12) ಚುನಾವಣ ಅಕ್ರಮ ಆರೋಪ ಹೊರಿಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಹೋರಾಡುತ್ತಿರುವ ರಾಹುಲ್ ಗಾಂಧಿ ಹಾಗೂ ಪ್ರತಿಪಕ್ಷಗಳು ಮುಖಭಂಗ ತಪ್ಪಿಸಿಕೊಳ್ಳಲು ಕೊನೆಯ ಅಸ್ತ್ರ ಪ್ರಯೋಗಿಸುತ್ತಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಭೇಟಿಯಾಗಿ ಮನವಿ ಸಲ್ಲಿಸಲು ಮುಂದಾಗಿದ್ದ ರಾಹುಲ್ ಹಾಗೂ ಪ್ರತಿಪಕ್ಷದ ಪ್ಲಾನ್ ಠುಸ್ ಆದ ಬೆನ್ನಲ್ಲೇ ರಾಹುಲ್ ಗಾಂಧಿ ಹೊಸ ಪ್ಲಾನ್ ಘೋಷಿಸಿದ್ದಾರೆ. ಇಂದು ಮಧ್ಯಾಹ್ನ ಬಳಿಕ 3 ಗಂಟೆಗೆ ಸುಪ್ರೀಂ ಕೋರ್ಟ್‌ನಲ್ಲಿ ಗ್ಯಾನೇಶ್ ಕುಮಾರ್ ವಿರುದ್ದ ಪಿಟೀಶನ್ ಸಲ್ಲಿಸುವುದಾಗಿ ಹೇಳಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಸ್ಫೋಟಕ ಮಾಹಿತಿ ನೀಡಿದ್ದಾರೆ. ಇದೇ ವೇಳೆ ಮೋದಿ ಸರ್ಕಾರದ 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ, ಅವರು ನಮಗೆ ಮಾಹಿತಿ ನೀಡುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ರಾಹುಲ್ ಗಾಂಧಿ ಸೇರಿದಂತೆ ಇಂಡಿಯಾ ಒಕ್ಕೂಟ ಆಯೋಗ ಭೇಟಿಗೆ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನಿರಾಕರಿಸಿದ್ದಾರೆ. ಬಳಿಕ ಕೆಲ ಸೂಚನೆ ನೀಡಿದ್ದಾರೆ. ಸುಪ್ರೀಂ ಕೋರ್ಟ್ ಎಲ್ಲರಿಗೂ ಬಾಗಿಲು ತೆರೆದಿದೆ. ಆದರೆ ಸುಪ್ರೀಂ ಕೋರ್ಟ್‌ನ್ನು ರಾಜಕೀಯಕ್ಕೆ ಎಳೆದು ತರಬೇಡಿ. ಏನೇ ಇದ್ದರೂ ಅರ್ಜಿ ಸಲ್ಲಿಸಿ, ವಿಚಾರಣೆ ಮಾಡುತ್ತೇವೆ ಎಂದು ಖಡಕ್ ಸೂಚನೆ ನೀಡಿದ್ದರು. ಈ ಮಖಭಂಗ ತಪ್ಪಿಸಿಕೊಳ್ಳಲು ಇದೀಗ ರಾಹುಲ್ ಗಾಂಧಿ ಆ್ಯಂಡ್ ಟೀಂ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ಮುಂದಾಗಿದೆ.
ಗ್ಯಾನೇಶ್ ಕುಮಾರ್ ವಿರುದ್ಧ ಅರ್ಜಿ ಸಲ್ಲಿಸಲು ರಾಹುಲ್ ಗಾಂಧಿ ದೇಶದ ಜನರನ್ನು ಆಹ್ವಾನಿಸಿದ್ದಾರೆ. ದೇಶದ ರಕ್ಷಣೆ, ಪ್ರಜಾಪ್ರಭುತ್ವದ ರಕ್ಷಣೆ ಮುಖ್ಯ. ಹೀಗಾಗಿ ಅನ್ಯಾಯದ ವಿರುದ್ಧ ಹೋರಾಡಲು ಎಲ್ಲರೂ ಬನ್ನಿ ಎಂದು ರಾಹುಲ್ ಗಾಂಧಿ ಆಹ್ವಾನ ನೀಡಿದ್ದಾರೆ. ಭವಿಷ್ಯಕ್ಕಾಗಿ ನಡೆಸುತ್ತಿರುವ ಹೋರಾಟ. ಹೀಗಾಗಿ ಎಲ್ಲರೂ ಬನ್ನಿ. ಬಿಜೆಪಿಯಲ್ಲಿರುವ ನಾಯಕರಿಗೆ ಸಂವಿಧಾನದ ಮೇಲೆ ದಾಳಿಯಾಗುತ್ತಿದೆ ಎಂದು ಎನಿಸಿದರೆ ನೀವೂ ಬನ್ನಿ ನಮ್ಮ ಹೋರಾಟದಲ್ಲಿ ಪಾಲ್ಗೊಳ್ಳಿ. ನಮಗೆ ಸಮಸ್ಯೆ ಇಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ನರೇಂದ್ರ ಮೋದಿ ಸರ್ಕಾರಕ್ಕೆ ಒಂದು ಮಾತು ಹೇಳುತ್ತೇನೆ. ನಿಮ್ಮ ಸರ್ಕಾರದ 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ. ಅದು ಸಿಬಿಐ, ಪೊಲೀಸ್ ಸೇರಿದಂತೆ ಹಲವು ಇಲಾಖಾ ಅಧಿಕಾರಿಗಳು ನಮಗೆ ಮಾಹಿತಿ ನೀಡುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ನಮ್ಮ ಹೋರಾಟವನ್ನು, ನಾವು ಸಾಗುತ್ತಿರುವ ದಾರಿಯನ್ನು ಶೇಕಡಾ 50ರಷ್ಟು ಪೊಲೀಸರು ಸರಿ ಎಂದಿದ್ದಾರೆ. ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಇಡೀ ದೇಶ ನಮ್ಮ ಜೊತೆಗಿದೆ. ಪೊಲೀಸ್, ಸಿಆರ್‌ಪಿಎಫ್ ಸೇರಿದಂತೆ ಭದ್ರತಾ ಸಿಬ್ಬಂದಿ ಹಾಗೂ ಇಡೀ ದೇಶ ಒಂದು ಕಡೆಯಾದರೆ, ನರೇಂದ್ರ ಮೋದಿ, ಅಮಿತ್ ಶಾ, ಅಜಿತ್ ದೋವಲ್, ಗ್ಯಾನೇಶ್ ಕುಮಾರ್ ಮತ್ತೊಂದೆಡೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ