
ನವದೆಹಲಿ(ಫೆ.07): ದೇಶದ ಯುವ ಜನತೆ ಇನ್ನಾರು ತಿಂಗಳಲ್ಲಿ ಪ್ರಧಾನಿ ಮೋದಿ ಅವರಿಗೆ ಬಡಿಗೆಯಿಂದ ಹೊಡೆಯಲಿದ್ದಾರೆ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆ ಲೋಕಸಭೆಯಲ್ಲಿ ಭಾರೀ ಕೋಲಾಹಲವನ್ನೇ ಎಬ್ಬಿಸಿದೆ.
ಇಂದು ನಡೆದ ಲೋಕಸಭೆಯ ಅಧಿವೇಶನದಲ್ಲಿ ರಾಹುಲ್ ಹೇಳಿಕೆ ವಿರುದ್ಧ ಆಡಳಿತ ಪಕ್ಷದ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ರಾಹುಲ್ ಪ್ರಧಾನಿ ಅವರನ್ನು ಅವಮಾನಿಸಿದ್ದಾರೆ ಎಂದು ಬಿಜೆಪಿ ಸದಸ್ಯರು ಕಿಡಿಕಾರಿದರು.
ಈ ವೇಳೆ ನಡೆದ ಗಲಾಟೆಯಲ್ಲಿ ಕೆಲವು ಕಾಂಗ್ರೆಸ್ ಸದಸ್ಯರು ತಮ್ಮ ಮೇಲೆ ಹಲ್ಲೆಗೆ ಮುಂದಾದರು ಎಂದು ಕೇಂದ್ರ ಸಚಿವ ಹರ್ಷವರ್ಧನ್ ಗಂಭೀರ ಆರೋಪ ಮಾಡಿದ್ದಾರೆ.
ರಾಹುಲ್ ಹೇಳಿಕೆ ಖಂಡಿಸಿ ಭಾಷಣ ಮಾಡುತ್ತಿದ್ದಾಗ ಕೆಲವು ಕಾಂಗ್ರೆಸ್ ಸದಸ್ಯರು ತಮ್ಮ ಮೇಲೆ ಹಲ್ಲೆಗೆ ಮುಂದಾಗಿದ್ದಲ್ಲದೇ, ತಮ್ಮ ಬಳಿಯಿದ್ದ ದಾಖಲಾತಿಗಳನ್ನು ಹರಿದು ಹಾಕಿದರು ಎಂದು ಹರ್ಷವರ್ಧನ್ ಆರೋಪಿಸಿದರು.
70 ವರ್ಷದಲ್ಲಿ ಏನ್ಮಾಡಿದ್ರಿ? ಕೈ ನಾಯಕಿಯ ಉತ್ತರಕ್ಕೆ ಬಿಜೆಪಿಗರು ಫುಲ್ ಸೈಲೆಂಟ್!
ಮೆಡಿಕಲ್ ಕಾಲೇಜುಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹರ್ಷವರ್ಧನ ಅವರಿಗೆ ಪ್ರಶ್ನೆ ಕೇಳಿದ್ದರು. ಇದಕ್ಕೆ ಉತ್ತರಿಸಲು ಎದ್ದು ನಿಂತ ಹರ್ಷವರ್ಧನ್, ಪ್ರಧಾನಿ ವಿರುದ್ಧ ರಾಹುಲ್ ಬಳಸಿದ ಪದಗಳ ಕುರಿತು ಆಕ್ಷೇಪ ವ್ಯಕ್ತಪಡಿಸಿದರು.
ಇದರಿಂದ ಕೆರಳಿದ ಕಾಂಗ್ರೆಸ್ ಸದಸ್ಯರು ಉತ್ತರ ಕೊಡುವ ಬದಲು ವಿವಾದ ಸೃಷ್ಟಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಹರ್ಷವರ್ಧನ್ ವಿರುದ್ಧ ಘೋಷಣೆ ಕೂಗಿದರು.
ಈ ವೇಳೆ ನಡೆದ ತಳ್ಳಾಟದಲ್ಲಿ ಕಾಂಗ್ರೆಸ್ ಸದಸ್ಯರು ತಮ್ಮ ಮೇಲೆ ಹಲ್ಲೆ ನಡೆಸಿದರು ಎಂದು ಹರ್ಷವರ್ಧನ್ ಆರೋಪಿಸಿದರು. ಆದರೆ ಸಚಿವರ ಆರೋಪವನ್ನು ನಿರಾಕರಿಸಿರುವ ಕಾಂಗ್ರೆಸ್, ನಮ್ಮ ಸದಸ್ಯರ ಮೇಲೆಯೇ ಬಿಜೆಪಿ ಸದಸ್ಯರು ಹಲ್ಲೆ ನಡೆಸಿದ್ದಾರೆ ಎಂದು ಪ್ರತಿ ಆರೋಪ ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ