
ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕನೂ ಆಗಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ 5 ದಿನಗಳ ಪ್ರವಾಸಕ್ಕಾಗಿ ಜರ್ಮನಿಗೆ ತೆರಳಿದ್ದು, ಈ ಮೂಲಕ ಅವರು ಕಳೆದ ಆರು ತಿಂಗಳಲ್ಲಿ 5ನೇ ಬಾರಿ ವಿದೇಶ ಪ್ರವಾಸ ಮಾಡುತ್ತಿದ್ದಾರೆ. ಡಿಸೆಂಬರ್ 15 ರಿಂದ ಅಂದರೆ ಇಂದಿನಿಂದ ಡಿಸೆಂಬರ್ 20 ರವರೆಗೆ ಅವರು ಜರ್ಮನಿಯಲ್ಲಿ ಇರಲಿದ್ದು, ಈ ಭೇಟಿ ಸಮಯದಲ್ಲಿ ಅವರು ಜರ್ಮನಿಯ ಸರ್ಕಾರಿ ಅಧಿಕಾರಿಗಳು ಮತ್ತು ಭಾರತೀಯ ಸಮುದಾಯದ ಸದಸ್ಯರನ್ನು ಭೇಟಿ ಮಾಡಲಿದ್ದಾರೆ.
ಕಳೆದ ಆರು ತಿಂಗಳಲ್ಲಿ ರಾಹುಲ್ ಗಾಂಧಿ ಅವರ ಐದನೇ ವಿದೇಶ ಪ್ರವಾಸ ಇದಾಗಿದೆ. ಇದಕ್ಕೂ ಮೊದಲು, ಜುಲೈ ಮತ್ತು ಸೆಪ್ಟೆಂಬರ್ ನಡುವೆ, ಅವರು ಲಂಡನ್, ಮಲೇಷ್ಯಾ, ಬ್ರೆಜಿಲ್ ಮತ್ತು ಕೊಲಂಬಿಯಾಕ್ಕೆ ಪ್ರಯಾಣ ಬೆಳೆಸಿದ್ದರು. ಪ್ರಸ್ತುತ ಡಿಸೆಂಬರ್ 1 ರಿಂದ 19 ರವರೆಗೆ ಭಾರತದಲ್ಲಿ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಇದೇ ಸಮಯದಲ್ಲಿ ಅವರು ವಿದೇಶಿ ಪ್ರವಾಸ ಮಾಡುತ್ತಿದ್ದಾರೆ. ಸದನಕ್ಕೆ ಗೈರಾಗಿ ರಾಹುಲ್ ವಿದೇಶಕ್ಕೆ ಹೋಗುತ್ತಿರುವುದಕ್ಕೆ ಬಿಜೆಪಿ ಅವರನ್ನು ಟೀಕಿಸಿದೆ.
ಇದನ್ನೂ ಓದಿ: ಮೋದಿ ತೇರಿ ಖಬರ್ ಖುದೇಗಿ: ಕಾಂಗ್ರೆಸ್ ಸಮಾವೇಶದಲ್ಲಿ ಕಾರ್ಯಕರ್ತರಿಂದ ಆಕ್ಷೇಪಾರ್ಹ ಘೋಷಣೆ
ಕಳೆದ 6 ತಿಂಗಳಲ್ಲಿ ರಾಹುಲ್ ಗಾಂಧಿ ಮಾಡಿದ ವಿದೇಶ ಪ್ರವಾಸಗಳು
ರಾಹುಲ್ ಗಾಂಧಿಯವರ ಸರಣಿ ವಿದೇಶಿ ಭೇಟಿಯ ಹಿನ್ನೆಲೆ ಬಿಜೆಪಿ ಅವರನ್ನು ಪ್ರವಾಸೋದ್ಯಮದ ನಾಯಕ ಎಂದು ವ್ಯಂಗ್ಯವಾಡಿದ್ದಾರೆ.
ರಾಹುಲ್ ಗಾಂಧಿಯವರ ಜರ್ಮನಿ ಭೇಟಿ ವೇಳಾಪಟ್ಟಿ
ಜರ್ಮನಿಗೆ ತೆರಳಿರುವ ರಾಹುಲ್ ಗಾಂಧಿಯವರು ಡಿಸೆಂಬರ್ 17 ರಂದು ಜರ್ಮನಿಯ ರಾಜಧಾನಿ ಬರ್ಲಿನ್‌ನಲ್ಲಿ ನಡೆಯಲಿರುವ ಭಾರತೀಯ ಸಾಗರೋತ್ತರ ಕಾಂಗ್ರೆಸ್ (ಐಒಸಿ) ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಭೇಟಿಯ ಸಮಯದಲ್ಲಿ, ಅವರು ವಿವಿಧ ಯುರೋಪಿಯನ್ ರಾಷ್ಟ್ರಗಳ ಐಒಸಿ ನಾಯಕರನ್ನು ಭೇಟಿ ಮಾಡಲಿದ್ದಾರೆ. ಪಕ್ಷದ ಜಾಗತಿಕ ಸಂವಾದವನ್ನು ಬಲಪಡಿಸುವ ನಿಟ್ಟಿನಲ್ಲಿ ಈ ಭೇಟಿಯು ಒಂದು ಪ್ರಮುಖ ಹೆಜ್ಜೆಯಾಗಿದೆ ಎಂದು ಐಒಸಿ ಬಣ್ಣಿಸಿದೆ.
ಇದಾದ ನಂತರ ರಾಹುಲ್ ಗಾಂಧಿ ಬರ್ಲಿನ್‌ನಲ್ಲಿ ಭಾರತೀಯ ವಲಸಿಗರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಐಒಸಿ ತಿಳಿಸಿದೆ. ಯುರೋಪಿನಾದ್ಯಂತ ಐಒಸಿಯ ಸ್ಥಳೀಯ ಘಟಕಗಳ ನಾಯಕರು, ಅನಿವಾಸಿ ಭಾರತೀಯರ ಸಮಸ್ಯೆಗಳು ಹಾಗೂ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ಮತ್ತು ಅದರ ಸಿದ್ಧಾಂತವನ್ನು ವಿಸ್ತರಿಸುವ ಮಾರ್ಗಗಳ ಕುರಿತು ಚರ್ಚೆಗಳಲ್ಲಿ ಭಾಗವಹಿಸಲಿದ್ದಾರೆ.
ಇದನ್ನೂ ಓದಿ: ರಾಮಕಥಾ ವಾಚಿಸುತ್ತಲೇ ಕೊನೆಯುಸಿರು: ಅಯೋಧ್ಯೆ ರಾಮಮಂದಿರ ಚಳುವಳಿಯ ಹಿರಿಯ ಸಂತ ಡಾ ರಾಮವಿಲಾಸ್ ದಾಸ್ ನಿಧನ
ರಾಹುಲ್ ಗಾಂಧಿ ಅವರಿಗೆ ಆತಿಥ್ಯ ನೀಡಲು ಹೆಮ್ಮೆಯೆನಿಸುತ್ತಿದೆ ಎಂದು ಐಒಸಿ ಆಸ್ಟ್ರಿಯಾದ ಅಧ್ಯಕ್ಷ ಔಸಾಫ್ ಖಾನ್ ಹೇಳಿದ್ದಾರೆ. ಇಂಡಿಯನ್ ಓವರ್ಸೀಸ್ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಸೇರಿದಂತೆ ಹಿರಿಯ ನಾಯಕರು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಕಳೆದ 5 ವರ್ಷಗಳಲ್ಲಿ ರಾಹುಲ್ ಗಾಂಧಿಯ ವಿವಾದಾತ್ಮಕ ವಿದೇಶ ಪ್ರವಾಸಗಳು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ