ಸ್ವಾತಂತ್ರ್ಯ ಸೇನಾನಿಗೆ ಅಪಮಾನ, ರಾಹುಲ್‌ ಗಾಂಧಿ ವಿರುದ್ಧ ಸಾವರ್ಕರ್‌ ಮೊಮ್ಮಗನಿಂದ ಕೇಸ್‌!

By Santosh Naik  |  First Published Nov 17, 2022, 4:14 PM IST

ಹಿಂದುತ್ವ ಸಿದ್ಧಾಂತವಾದಿ, ವಿನಾಯಕ ದಾಮೋದರ್ ಸಾವರ್ಕರ್ ಅವರು ಬ್ರಿಟಿಷರಿಂದ ಪಿಂಚಣಿ ಪಡೆದು ಕಾಂಗ್ರೆಸ್ ವಿರುದ್ಧ ಕೆಲಸ ಮಾಡುತ್ತಿದ್ದರು ಎಂದು ಹೇಳುವ ಮೂಲಕ ರಾಹುಲ್ ಗಾಂಧಿ ಮತ್ತೊಮ್ಮೆ ವಿವಾದ ಎಬ್ಬಿಸಿದ್ದಾರೆ.
 


ಮುಂಬೈ (ನ.17): ಧೀರ ಸ್ವಾತಂತ್ರ್ಯ ಸೇನಾನಿ ವಿನಾಯಕ್‌ ದಾಮೋದರ್‌ ಸಾವರ್ಕರ್‌ ಅವರಿಗೆ ಅಪಮಾನ ಮಾಡಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಶಿವಾಜಿ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ದೂರು ನೀಡುವುದಾಗಿ ವಿಡಿ ಸಾವರ್ಕರ್‌ ಅವರ ಮೊಮ್ಮಗ ರಂಜಿತ್‌ ಸಾವರ್ಕರ್‌ ಹೇಳಿದ್ದಾರೆ. ರಾಹುಲ್‌ ಗಾಂಧಿಯಾಗಲಿದೆ, ಕಾಂಗ್ರೆಸ್‌ ಪಕ್ಷವಾಗಲಿ ಸಾವರ್ಕರ್‌ ಅವರಿಗೆ ಅಪಮಾನ ಮಾಡಿದ್ದು ಇದೇ ಮೊದಲಲ್ಲ. ಹಿಂದೆಯೂ ಇಂಥ ಅಪಮಾನಗಳನ್ನು ಮಾಡಿದ್ದರು. ಹಾಗಾಗಿ ಈಗ ರಾಹುಲ್‌ ಗಾಂಧಿ ವಿರುದ್ಧ ಶಿವಾಜಿ ಪಾರ್ಕ್‌ ಪೊಲೀಸ್‌ ಸ್ಟೇಷನ್‌ನಲ್ಲಿ ದೂರು ದಾಖಲಿಸಿದ್ದೇನೆ ಎಂದು ತಿಳಿಸಿದ್ದಾರೆ. ನಮ್ಮ ನಾಯಕ ಹಾಗೂ ಸ್ವಾತಂತ್ರ್ಯ ಹೋರಾಟಗಾರ ವಿಡಿ ಸಾವರ್ಕರ್‌ ಅವರನ್ನು ಅಪಮಾನ ಮಾಡಿದ್ದ ಕಾರಣಕ್ಕೆ ರಾಹುಲ್‌ ಗಾಂಧಿಯವರ ವಿರುದ್ಧ ದೂರು ದಾಖಲಿಸಸಲಿದ್ದೇವೆ. ಈ ವಿಚಾರದಲ್ಲಿ ರಾಹುಲ್‌ ಗಾಂಧಿ ಸರಣಿ ತಪ್ಪಿತಸ್ಥ. 2017ರಲ್ಲೂ ರಾಹುಲ್‌ ಗಾಂಧಿ ಇದೇ ರೀತಿಯ ಕೆಲಸ ಮಾಡಿದ್ದರು ಎಂದು ರಂಜಿತ್‌ ಸಾವರ್ಕರ್‌ ಹೇಳಿದ್ದಾರೆ. ಕಾಂಗ್ರೆಸ್‌ ವೋಟ್‌ ಬ್ಯಾಂಕ್‌ ರಾಜಕಾರಣ ಮಾಡುತ್ತಿದೆ. ವೀರ್‌ ಸಾವರ್ಕರ್‌ ಅವರನ್ನು ಅಪಮಾನಿಸುವ ಮೂಲಕ ತನ್ನ ವೋಟ್‌ ಬ್ಯಾಂಕ್‌ ಅಜೆಂಡಾವನ್ನು ಪೂರರೈಸಿಕೊಳ್ಳುತ್ತಿದೆ ಎಂದು ಅವರು ಹೇಳಿದ್ದಾರೆ.

ಮಂಗಳವಾರ ಮುಂಜಾನೆ ರಾಹುಲ್ ಗಾಂಧಿ ಜನ್‌ಜತಿಯಾ ಗೌರವ್ ದಿವಸ್ ಸಂದರ್ಭದಲ್ಲಿ ಹಿಂಗೋಲಿಯಲ್ಲಿ ಭಾರತ್ ಜೋಡೋ ಯಾತ್ರೆಯ ಬುಡಕಟ್ಟು ಸಮಾವೇಶದಲ್ಲಿ ಭಾಗವಹಿಸಿದ್ದರು. ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಬ್ರಿಟಿಷರಿಂದ ಪಿಂಚಣಿ ಪಡೆದು ಕಾಂಗ್ರೆಸ್ ವಿರುದ್ಧ ಕೆಲಸ ಮಾಡುತ್ತಿದ್ದರು ಎಂದು ರಾಹುಲ್ ಗಾಂಧಿ ಈ ವೇಳೆ ಹೇಳಿದ್ದರು.

ಸಾವರ್ಕರ್‌ ಅಂಡಮಾನ್‌ ಜೈಲಿನಲ್ಲಿದ್ದ ವೇಳೆ ಬ್ರಿಟಿಷರಿಗೆ ಪತ್ರ ಬರೆದು ತಮ್ಮನ್ನು ಕ್ಷಮಿಸುವಂತೆ ಮನವಿ ಮಾಡಿದ್ದಲ್ಲದೆ,  ಜೈಲಿನಿಂದ ಬಿಡುಗಡೆ ಮಾಡುವಂತೆ ಕೇಳಿಕೊಂಡಿದ್ದರು. ವೀರ್‌  ಸಾವರ್ಕರ್‌ ಬ್ರಿಟಿಷರಿಂದ ಪಿಂಚಣಿ ಪಡೆಯುತ್ತಿದ್ದರು ಹಾಗೂ ಕಾಂಗ್ರೆಸ್‌ನ ವಿರುದ್ಧವಾಗಿ ಕೆಲಸ ಮಾಡಿದ್ದರು. ಜೈಲಿನಿಂದ ಹೊರಬಂದ ನಂತರ ಅವರು ಬ್ರಿಟಿಷರ ಪ್ರಸ್ತಾಪವನ್ನು ಒಪ್ಪಿಕೊಂಡರು ಮತ್ತು ಅವರ ಸೈನ್ಯಕ್ಕೆ ಸೇರಿಕೊಂಡರು. ಸಾವರ್ಕರ್ ಮತ್ತು ಬಿರ್ಸಾ ಮುಂಡಾ ನಡುವಿನ ವ್ಯತ್ಯಾಸವೆಂದರೆ, ಬಿರ್ಸಾ ಮುಂಡಾ 24 ವರ್ಷದವರಾಗಿದ್ದಾಗ ಬ್ರಿಟಿಷರ ವಿರುದ್ಧ ಹೋರಾಡಿದರು," ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಅವರು ಬ್ರಿಟಿಷರ ವಿರುದ್ಧ ಹೋರಾಡಿದ್ದರು ಆದರೆ ಇತ್ತೀಚಿನ ದಿನಗಳಲ್ಲಿ ಅವರ ಸಿದ್ಧಾಂತದ ಮೇಲೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ದಾಳಿ ನಡೆಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಹೇಳಿದ್ದಾರೆ.

ಜನ ಗಣ ಮನದ ಬದಲು ನೇಪಾಳದ ರಾಷ್ಟ್ರಗೀತೆ, ಭಾರತ್‌ ಜೋಡೋ ಯಾತ್ರೆಯಲ್ಲಿ ಪ್ರಮಾದ!

ಜನ್‌ಜತಿಯಾ ಗೌರವ್ ದಿವಸ್ ಸಂದರ್ಭದಲ್ಲಿ ಹಿಂಗೋಲಿಯಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ಸಂಸದರು ಬುಡಕಟ್ಟು ಸಮಾವೇಶದಲ್ಲಿ ಭಾಗವಹಿಸಿದ್ದರು. ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, "ಬಿರ್ಸಾ ಮುಂಡಾ ಅವರು ಬ್ರಿಟಿಷರ ವಿರುದ್ಧ ಹೋರಾಡಿದರು. ಕೇವಲ 24ನೇ ವರ್ಷದಲ್ಲಿಯೇ ಅವರನ್ನು ಬ್ರಿಟಿಷರು ಕೊಂದರು. ತಮ್ಮ 24ನೇ ವರ್ಷದಲ್ಲಿ ದೇಶಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡಿದರು.  ಬಿರ್ಸಾ ಮುಂಡಾ ಅವರ ಸಿದ್ಧಾಂತದ ಮೇಲೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ದಾಳಿ ನಡೆಸುತ್ತಿದೆ. ಬುಡಕಟ್ಟು ಜನರ ಹೆಸರನ್ನು `ಆದಿವಾಸಿ~ಯಿಂದ `ವನವಾಸಿ~ ಎಂದು ಬದಲಾಯಿಸುವುದರ ಹಿಂದೆ ಅವರು (ಬಿಜೆಪಿ) ಆಳವಾದ ತಂತ್ರವನ್ನು ಹೊಂದಿದ್ದಾರೆ ಮತ್ತು ಇದರೊಂದಿಗೆ ಅವರು ಅವರ ಅನೇಕ ಹಕ್ಕುಗಳನ್ನು ಕಸಿದುಕೊಂಡಿದ್ದಾರೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

Tap to resize

Latest Videos

Accident In Bharat Jodo Yatra: ಭಾರತ್‌ ಜೋಡೋ ಯಾತ್ರೆಯಲ್ಲಿ ಅಪಘಾತ, ಕಾಂಗ್ರೆಸ್‌ ಕಾರ್ಯಕರ್ತ ಸಾವು!

ಬಿಜೆಪಿ ಸರ್ಕಾರ ನಿರಂತರವಾಗಿ ಸಂವಿಧಾನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. "ಸಂವಿಧಾನವನ್ನು ಡಾ ಅಂಬೇಡ್ಕರ್ ಮತ್ತು ಕಾಂಗ್ರೆಸ್ ಸರ್ಕಾರದ ಅಡಿಯಲ್ಲಿ ಬರೆದಿದ್ದಾರೆ, ಆ ಸಮಯದಲ್ಲಿ ಬಿಜೆಪಿ ನಮಗೆ ಸಂವಿಧಾನ ಬೇಡ ಎಂದು ಹೇಳಿತ್ತು, ಈಗ ಅವರು ನಿರಂತರವಾಗಿ ಸಂವಿಧಾನವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ" ಎಂದು ಹೇಳಿದ್ದಾರೆ.

click me!