
ನವದೆಹಲಿ(ಏ.12): ಕೊರೋನಾ ಲಸಿಕೆ ದೇಶಕ್ಕೆ ಅಗತ್ಯವಾಗಿದೆ. ಈ ಪರಿಸ್ಥಿತಿಯಲ್ಲಿ ವಿದೇಶಕ್ಕೆ ಲಸಿಕೆ ರಫ್ತು ಮಾಡುವ ಬದಲು ದೇಶದ ಎಲ್ಲರಿಗೂ ಲಸಿಕೆ ನೀಡಿ ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ. ಕಾಂಗ್ರೆಸ್ ಆರಂಭಿಸಿರುವ ಎಲ್ಲರಿಗೂ ಲಸಿಕೆ ಅಭಿಯಾನದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ದೇಶದ ಪ್ರತಿಯೊಬ್ಬರಿಗೂ ಆರೋಗ್ಯವಾಗಿ ಹಾಗೂ ಸುರಕ್ಷಿತ ಜೀವನದ ಹಕ್ಕಿದೆ ಎಂದಿದ್ದಾರೆ.
ವಿದೇಶಕ್ಕೆ ಯಾಕೆ? ದೇಶದ ಎಲ್ಲರಿಗೂ ಲಸಿಕೆ ನೀಡಿ: ಪ್ರಧಾನಿ ಮೋದಿಗೆ ರಾಹುಲ್ ಪತ್ರ!
#SpeakUpForVaccinesForAll (ಎಲ್ಲರಿಗೂ ಲಸಿಕೆಗಾಗಿ ಧ್ವನಿ ಎತ್ತಿ) ಎಂಬ ಸಾಮಾಜಿಕ ಜಾಲತಾಣ ಅಭಿಯಾನವನ್ನು ಕಾಂಗ್ರೆಸ್ ಆರಂಭಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಲಸಿಕೆಯನ್ನು ವಿದೇಶಗಳಿಗೆ ರಫ್ತು ಮಾಡುತ್ತಿದೆ. ಹೀಗಾಗಿ ದೇಶದಲ್ಲಿ ಹಂತ ಹಂತದಲ್ಲಿ ಲಸಿಕೆ ನೀಡಲಾಗುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಭಾರತದ ಪ್ರಜಾಪ್ರಭುತ್ವದಲ್ಲಿ ಏನಾಗುತ್ತಿದೆ? ಅಮೆರಿಕದ ಅಭಿಪ್ರಾಯ ಕೇಳಿದ ರಾಹುಲ್ ಗಾಂಧಿ!
ದೇಶದ ಪ್ರತಿಯೊಬ್ಬರಿಗೂ ಲಸಿಕೆ ಸಿಗುವಂತಾಗಬೇಕು. ಹೀಗಾದಲ್ಲಿ ಮಾತ್ರ ಕೊರೋನಾ ನಿಯಂತ್ರಣ ಸಾಧ್ಯ. ಈಗಾಗಲೇ ಭಾರತ ಈ ಹಿಂದಿನ ಗರಿಷ್ಠ ದಾಖಲೆಯನ್ನು ದಾಟಿದೆ. ಅಪಾಯದ ಮಟ್ಟ ಹೆಚ್ಚಾಗಿದೆ. ಸಾವಿನ ಸಂಖ್ಯೆ ಏರಿಕೆಯಾಗಿದೆ. ಆಸ್ಪತ್ರೆಗಳು ಭರ್ತಿಯಾಗಿದೆ. ಸಾವಿರ ಸಮಸ್ಯೆಗಳ ನಡುವೆ ವಿದೇಶಕ್ಕೆ ಲಸಿಕೆ ರಫ್ತು ಮಾಡುವ ಅಗತ್ಯವಿಲ್ಲ. ಈ ಕುರಿತು ದೇಶದ ಜನ ಧ್ವನಿ ಎತ್ತಬೇಕು ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ