
ವಯನಾಡ್(ಫೆ.23): ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಲೋಕಸಭಾ ಕ್ಷೇತ್ರ ಕೇರಳದ ವಯನಾಡಿನಲ್ಲಿ ರೈತರೊಂದಿಗೆ ಟ್ರ್ಯಾಕ್ಟರ್ ರಾರಯಲಿ ನಡೆಸಿದರು. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ 2 ದಿನಗಳ ಪ್ರವಾಸಕ್ಕಾಗಿ ಕ್ಷೇತ್ರಕ್ಕೆ ಬಂದಿರುವ ರಾಹುಲ್ ಅವರು 6 ಕಿ. ಮೀ ದೂರದ ರಾರಯಲಿ ವೇಳೆ ತಾವೇ ಟ್ರ್ಯಾಕ್ಟರ್ ಅನ್ನು ಚಾಲನೆ ಮಾಡಿದ್ದು ಗಮನ ಸೆಳೆಯಿತು.
ಬಳಿಕ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್, ‘ಈ ದೇಶದ ಕೃಷಿ ವಲಯವು ಭಾರತ ಮಾತೆಗೆ ಸೇರಿದ್ದಾಗಿದ್ದು, ನೂತನ 3 ಕಾಯ್ದೆಗಳ ಹಿಂಪಡೆತಕ್ಕಾಗಿ ಕೇಂದ್ರ ಸರ್ಕಾರಕ್ಕೆ ಜನ ಸಾಮಾನ್ಯರು ಒತ್ತಾಯಿಸಬೇಕು’ ಎಂದು ಕರೆ ನೀಡಿದರು.
2014ರಲ್ಲಿ ಪ್ರಧಾನಿ ಪಟ್ಟಕ್ಕೇರಿದ ಮೋದಿ ಗ್ರಾಮೀಣ ಜನತೆಗೆ ಉದ್ಯೋಗ ಕಲ್ಪಿಸಲು ಯುಪಿಎ ಸರ್ಕಾರ ಜಾರಿಗೆ ತಂದಿದ್ದ ನರೇಗಾ ಯೋಜನೆ ಟೀಕಿಸಿದ್ದರು. ಆದರೆ ಕೊರೋನಾ ಅವಧಿಯಲ್ಲಿ ನರೇಗಾ ಯೋಜನೆಯ ಮಹತ್ವವನ್ನು ಮೋದಿ ಅವರು ಮನಗಂಡರು. ಭಾರತದ ರೈತರ ಸಂಕಷ್ಟಗಳ ಕುರಿತಾಗಿ ಪಾಪ್ ಗಾಯಕಿ(ರಿಹಾನಾ) ಸೇರಿದಂತೆ ಇಡೀ ವಿಶ್ವಕ್ಕೆ ಅರ್ಥವಾಗಿದೆ. ಆದರೆ ದಿಲ್ಲಿಯಲ್ಲಿರುವ ನಮ್ಮ ಸರ್ಕಾರಕ್ಕೆ ಈ ಬಗ್ಗೆ ಕಾಳಜಿಯೇ ಇಲ್ಲ ಎಂದು ಕಿಡಿಕಾರಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ